Photos: ಲೋಕಸಮರ 6ನೇ ಹಂತದಲ್ಲಿ ಮತ ಚಲಾಯಿಸಿದ ನಾಯಕರು!

   

  • May 12, 2019, 15:24 PM IST

ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಏಳು ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಒಟ್ಟು 979 ಅಭ್ಯರ್ಥಿಗಳು ಕಣದಲ್ಲಿದ್ದು, 10.17 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. 

1 /8

ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಅವರು ರಾಷ್ಟ್ರಪತಿ ಭವನದ ಮತಗಟ್ಟೆಯಲ್ಲಿ ತಮ್ಮ ಪತ್ನಿಯೊಂದಿಗೆ ಆಗಮಿಸಿ ಮತ ಚಲಾಯಿಸಿದರು.   

2 /8

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯ ಔರಂಗಜೇಬ್​ ಲೇನ್​ನಲ್ಲಿರುವ ಎನ್​ಪಿ ಸೀನಿಯರ್​ ಸೆಕೆಂಡರಿ ಸ್ಕೂಲ್​ ಮತಗಟ್ಟೆಯಲ್ಲಿ ಮತದಾನ ಮಾಡಿದರು.   

3 /8

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಡಿಪಿಸಿಸಿ ಮುಖ್ಯಸ್ಥೆ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ  ಶೀಲಾ ದೀಕ್ಷಿತ್ ಅವರೊಂದಿಗೆ ಮತ ಚಲಾಯಿಸಿದರು.  

4 /8

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರು ರಾಜಿಂದರ್​​ ನಗರದ ಮತಕೇಂದ್ರದಲ್ಲಿ ಮತದಾನದ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಗಂಭೀರ್ ಪ್ರತಿಸ್ಪರ್ಧಿಗಳಾಗಿ ಎಎಪಿ ಅಭ್ಯರ್ಥಿ ಆತಿಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ಕಣದಲ್ಲಿದ್ದಾರೆ.

5 /8

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಅವರು ಜನಗ್ಪುರದ ಕಮಲಾ ನೆಹರು ಸರ್ಕಾರಿ ಸರ್ವೋದಯ ವಿದ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

6 /8

ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಸಹ ಬೆಳಿಗ್ಗೆಯೇ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸಿದ್ದಾರೆ.  

7 /8

ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ, ಆಮ್ ಆದ್ಮಿ ಪಾರ್ಟಿ (ಎಎಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.  ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಸಹ ಬೆಳಿಗ್ಗೆಯೇ ಮತಚಲಾಯಿಸಿದ್ದಾರೆ. ಇವರು ಈ ಕ್ಷೇತ್ರದಲ್ಲಿ ಮೂರು ಬಾರಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (ಕಾಂಗ್ರೆಸ್) ವಿರುದ್ಧ ಸ್ಪರ್ಧಿಸಿದ್ದಾರೆ.

8 /8

ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಬೆಳಿಗ್ಗೆಯೇ ಹರಿಯಾಣದಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಹರಿಯಾಣದ ಗುರುಗ್ರಾಮದ ಪೈನ್​ಕ್ರೆಸ್ಟ್​​​​ ಶಾಲೆಯ ಪೋಲಿಂಗ್​ ಬೂತ್​ಗೆ ಆಗಮಿಸಿದ ಕೊಹ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು.