Ration Card Update : ಪಡಿತರ ಚೀಟಿದಾರರ ಗಮನಕ್ಕೆ : ಪಡಿತರ ತೆಗೆದುಕೊಳ್ಳುವ ನಿಯಮದಲ್ಲಿ ಭಾರಿ ಬದಲಾವಣೆ!

ರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು ತೆಗೆದುಕೊಳ್ಳುವ ಅರ್ಹರಿಗೆ ನಿಗದಿಪಡಿಸಿದ ಮಾನದಂಡಗಳನ್ನು ಬದಲಾವಣೆ ಮಾಡುತ್ತಿದೆ. ಹೊಸ ಮಾನದಂಡದ ಕರಡು ಈಗ ಬಹುತೇಕ ಸಿದ್ಧವಾಗಿದೆ.

Standards for Ration Card : ನೀವೂ ಪಡಿತರ ಚೀಟಿ ಹೊಂದಿರುವವರಾಗಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿ ನಿಯಮಗಳಲ್ಲಿ ಬದಲಾವಣೆ ತರುತ್ತಿದೆ.

 

1 /4

ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆ : ಇಲ್ಲಿಯವರೆಗೆ ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 32 ರಾಜ್ಯಗಳಲ್ಲಿ  'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್ (ONORC) ಯೋಜನೆ'ಯನ್ನು ಜಾರಿಗೊಳಿಸಲಾಗಿದೆ. ಕೋಟಿಗಟ್ಟಲೆ ಫಲಾನುಭವಿಗಳು ಅಂದರೆ NFSA ಅಡಿಯಲ್ಲಿ ಬರುವ ಜನಸಂಖ್ಯೆಯ ಶೇ.86 ರಷ್ಟು ಜನ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಪ್ರತಿ ತಿಂಗಳು ಸುಮಾರು 1.5 ಕೋಟಿ ಜನರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆರಳುವ ಮೂಲಕ ಪ್ರಯೋಜನ ಪಡೆಯುತ್ತಿದ್ದಾರೆ. ಸರ್ಕಾರವು ಜನರಿಗೆ ಸಹಾಯ ಮಾಡಲು ಉಚಿತ ಪಡಿತರ ಯೋಜನೆಯನ್ನು ಹೆಚ್ಚಿಸಿದೆ.

2 /4

ರಾಜ್ಯ ಸರ್ಕಾರಗಳು ನೀಡಿರುವ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಾನದಂಡಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮಗೊಳಿಸಿ ಜರಿ ಮಾಡಲಿದೆ. 

3 /4

ಮಾನದಂಡಗಳು ಏಕೆ ಬದಲಾಗುತ್ತಿವೆ? : ಪಡಿತರವನ್ನು ನಕಲಿ ರೀತಿಯಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವವರು ದೇಶದಲ್ಲಿ ಅನೇಕರಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ (NFSA) ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಅವರಲ್ಲಿ ಆರ್ಥಿಕವಾಗಿ ಸಮೃದ್ಧವಾಗಿರುವ ಅನೇಕ ಜನರಿದ್ದಾರೆ. ಈ ಕಾರಣಕ್ಕಾಗಿಯೇ ಈಗ ಸರ್ಕಾರ ತನ್ನ ನಿಯಮಗಳನ್ನು ಬದಲಾಯಿಸಲು ಹೊರಟಿದೆ. ಹೊಸ ಮಾನದಂಡದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಸಂಪೂರ್ಣ ಪಾರದರ್ಶಕಗೊಳಿಸಲು ನಿಯಮಗಳನ್ನು ಬದಲಾವಣೆ ಮಾಡಲು ಹೊರಟಿದೆ.

4 /4

ಇದರ ಅಡಿಯಲ್ಲಿ, ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು ತೆಗೆದುಕೊಳ್ಳುವ ಅರ್ಹರಿಗೆ ನಿಗದಿಪಡಿಸಿದ ಮಾನದಂಡಗಳನ್ನು ಬದಲಾವಣೆ ಮಾಡುತ್ತಿದೆ. ಹೊಸ ಮಾನದಂಡದ ಕರಡು ಈಗ ಬಹುತೇಕ ಸಿದ್ಧವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳೊಂದಿಗೆ ಸಭೆ ನಡೆಸುವ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಹೊಸ ಮಾನದಂಡಗಳ ಬಗ್ಗೆ ಮಾಹಿತಿ ಇಲ್ಲಿದೆ.