Raw mango with Salt And Chilli benefits : ಮಾವಿನಕಾಯಿಗೆ ಉಪ್ಪು, ಮೆಣಸು ಹಾಕಿ ತಿನ್ನುವುದರಿಂದ ಅದರ ರುಚಿ ಹೆಚ್ಚುತ್ತದೆ ಎನ್ನುವುದರಲ್ಲಿ ಯಾವ ಸಂದೇಹವೂ ಇಲ್ಲ. ಆದರೆ ಹೀಗೆ ತಿನ್ನುವುದರಿಂದ ಬಾಯಿ ರುಚಿ ಹೆಚ್ಚಾಗುವುದರ ಜೊತೆಗೆ ಕೆಲವೊಂದು ಆರೋಗ್ಯ ಪ್ರಯೋಜನಗಳು ಕೂಡಾ ಸಿಗುವುದು.
Raw mango with Salt And Chilli :ಮಾವಿನಕಾಯಿಗೆ ಉಪ್ಪು, ಮೆಣಸು ಹಾಕಿ ತಿಂದರೆ ಅದರ ರುಚಿಯನ್ನು ಹೇಳುವುದೇ ಬೇಡ. ಮಾವಿನಕಾಯಿಗೆ ಉಪ್ಪು ಮತ್ತು ಖಾರ ಹಾಕಿ ತಿಂದರೆ ತಿನ್ನುತ್ತಲೇ ಇರಬೇಕು ಅನ್ನಿಸುತ್ತದೆ. ಹೀಗೆ ತಿನ್ನುವುದು ಬಾಯಿ ರುಚಿ ಹೆಚ್ಚಿಸುವುದು ಮಾತ್ರವಲ್ಲ ಕೆಲವೊಂದು ರೋಗಗಳ ನಿವಾರಣೆಗೆ ಕೂಡಾ ಇದು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಾವಿನ ಕಾಯಿಯಲ್ಲಿ ಸಕ್ಕರೆಯ ಪ್ರಮಾಣ ಬಹಳ ಕಡಿಮೆ ಇರುತ್ತದೆ. ಹೀಗಾಗಿ ಸಕ್ಕರೆ ಕಾಯಿಲೆ ಇರುವವರು ಯಾವುದೇ ಆತಂಕ ಅಳುಕು ಇಲ್ಲದೆ ಮಾವಿನ ಕಾಯಿಯನ್ನು ತಿನ್ನಬಹುದು.ಮಾವಿನ ಕಾಯಿ ಸೇವನೆ ದೇಹದ ರಕ್ತ ಪರಿಚಲನೆಯನ್ನು ಕೂಡಾ ಸುಧಾರಿಸುತ್ತದೆ.
ಮಾವಿನಕಾಯಿ ನಿಯಮಿತ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.ರಕ್ತ ಪರಿಚಲನೆ ಸರಿಯಾಗಿ ಇದ್ದರೆ ಹೃದಯದ ಆರೋಗ್ಯ ಸುಧಾರಿಸುತ್ತದೆ. ಮಾವಿನಕಾಯಿಯಲ್ಲಿ ರಕ್ತದ ಒತ್ತಡವನ್ನು ಕಡಿಮೆ ಮಾಡುವಲ್ಲಿಯೂ ಸಹಾಯಕ. ಹಾಗಾಗಿ ಮಾವಿನಕಾಯಿ ಸೇವನೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ಮಾವಿನ ಕಾಯಿ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಸುಲಭವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬಂದರೆ ಅನೇಕ ಕಾಯಿಲೆಗಳಿಂದಲೂ ಪರಿಹಾರ ನೀಡುತ್ತದೆ.
ಮಾವಿನಕಾಯಿಯಲ್ಲಿ ಜೀರ್ಣಕ್ರಿಯೆಗೆ ಅಗತ್ಯವಾಗಿರುವ ಅಮೈಲೇಸ್ ಎಂಬ ಜೀರ್ಣಕಾರಿ ಕಿಣ್ವಗಳಿರುತ್ತವೆ.ಅಮೈಲೇಸ್ ಕಿಣ್ವಗಳು ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳನ್ನು ಮಾಲ್ಟೋಸ್ ಮತ್ತು ಗ್ಲೂಕೋಸ್‌ನಂತಹ ಸಕ್ಕರೆಗಳಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಈ ಮೂಲಕ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಮಾವಿನ ಕಾಯಿ ಬೆಸ್ಟ್ ಮೆಡಿಸಿನ್. ಮಾವಿನಕಾಯಿಯಲ್ಲಿರುವ ಎನೆನಿನ್ ಎನ್ನುವ ಅಂಶ ಕೊಬ್ಬು, ಕೊಲೆಸ್ಟ್ರಾಲ್ ಮತ್ತು ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಮಾವಿನಕಾಯಿ ತೂಕ ನಿಯಂತ್ರಣಕ್ಕೂ ಸಹಾಯ ಮಾಡುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ. )