Blood sugar control tips : ಈ ಮನೆ ಮದ್ದನ್ನು ಅನುಸರಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
Diabetes Home Remedy : ಮಧುಮೇಹವು ಜೀವನಶೈಲಿ ಸಂಬಂಧಿತ ಸಮಸ್ಯೆಯಾಗಿದೆ. ಇಂದಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಯಲ್ಲಿ ಮಧುಮೇಹ ರೋಗಿಗಳು ಇದ್ದೇ ಇರುತ್ತಾರೆ. ಮಧುಮೇಹದ ಸಮಯದಲ್ಲಿ, ಆಹಾರ ಪದ್ಧತಿಯ ಬಗ್ಗೆ ನೀವು ವಿಶೇಷ ಗಮನ ಹರಿಸಬೇಕು. ಯಾಕೆಂದರೆ ಆಹಾರ ಪದ್ದತಿಯಲ್ಲಿ ಸ್ವಲ್ಪ ಹೆಚ್ಚು ಕಮ್ಮಿಯಾದರೂ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಮಧುಮೇಹ ಜೀವನ ಪರ್ಯಂತ ಕಾಡುವ ಸಮಸ್ಯೆಯಾದರೂ ಅದನ್ನು ಕೆಲವು ಮನೆ ಮದ್ದುಗಳ ಸಹಾಯದಿಂದ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಈ ಮನೆ ಮದ್ದನ್ನು ಅನುಸರಿಸುವ ಮೂಲಕ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಈ ಮನೆಮದ್ದುಗಳನ್ನು ಅನುಸರಿಸುವ ಮೂಲಕ ರಕ್ತದ ಸಕ್ಕರೆ ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲ, ದೇಹದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎನ್ನುವ ಭಯವೂ ಇರುವುದಿಲ್ಲ.
ಪ್ರತಿದಿನ ನೆಲ್ಲಿಕಾಯಿ ಮತ್ತು ಅಲೋವೆರಾ ರಸವನ್ನು ಮಿಶ್ರಣ ಮಾಡಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದಕ್ಕಾಗಿ ನೆಲ್ಲಿಕಾಯಿಯ ಜ್ಯೂಸ್ ತೆಗೆದು ಅದಕ್ಕೆ ಆಲೋವಿರಾವನ್ನು ಸೇರಿಸಬೇಕು
ನೆಲ್ಲಿಕಾಯಿ ರಸದೊಂದಿಗೆ ಅರಿಶಿನವನ್ನು ಕೂಡಾ ಬೆರೆಸಿ ಸೇವಿಸಬಹುದು. ಡಯಾಬಿಟೀಸ್ ಅನ್ನು ನಿಯಂತ್ರಣದಲ್ಲಿ ಇಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.
ಪೇರಳೆ ಎಲೆಗಳು ಔಷಧೀಯ ಗುಣಗಳಿಂದ ಕೂಡಿದೆ. ಇದನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ನಿಮ್ಮನ್ನು ಕಾಪಾಡುತ್ತದೆ. ದೇಹದಲ್ಲಿನ ಗ್ಲೂಕೋಸ್ ಮಟ್ಟವನ್ನು ಇದು ನಿಯಂತ್ರಣದಲ್ಲಿಡುತ್ತದೆ. ಇದಕ್ಕಾಗಿ ಪೇರಳೆ ಎಲೆಗಳನ್ನು ಚೆನ್ನಾಗಿ ಕುದಿಸಿ ಟೀ ತಯಾರಿಸಿ ಕುಡಿಯಬಹುದು.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು, ಸೇಬು ಅಥವಾ ಸೌತೆಕಾಯಿ ರಸವನ್ನು ಕ್ಯಾರೆಟ್ ರಸದೊಂದಿಗೆ ಬೆರೆಸಿ ಸೇವಿಸಬಹುದು. ಇದು ರುಚಿಕರವಾಗಿರುವುದರ ಜೊತೆಗೆ, ದೇಹದಲ್ಲಿ ಮಧುಮೇಹದ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)