ಐಪಿಎಲ್ ನಲ್ಲಿ ಅತಿಹೆಚ್ಚು ಹ್ಯಾಟ್ರಿಕ್ ಪಡೆದ ಆಟಗಾರರ ಮಾಹಿತಿ ಇಲ್ಲಿದೆ ನೋಡಿ.
ನವದೆಹಲಿ: ಐಪಿಎಲ್ ವಿಶ್ವದಲ್ಲಿಯೇ ಅತಿಹೆಚ್ಚು ವೀಕ್ಷಿಸಲ್ಪಟ್ಟ ಲೀಗ್ ಆಗಿದೆ. ಇಲ್ಲಿ ಪ್ರೇಕ್ಷಕರು ಹೆಚ್ಚಿನ ಥ್ರಿಲ್, ಉತ್ಸಾಹದ ಜೊತೆಗೆ ಭರ್ಜರಿ ಮನರಂಜನೆ ಸಿಗುತ್ತದೆ. ಚುಟುಕು ಕ್ರಿಕೆಟ್ ನಲ್ಲಿ ಬ್ಯಾಟ್ಸ್ ಮನ್ ಗಳ ಅಬ್ಬರವಿದ್ದರೆ, ಬೌಲರ್ ಗಳ ಪರಾಕ್ರಮವೂ ಇರುತ್ತದೆ. ಐಪಿಎಲ್ ನಲ್ಲಿ ಅತಿಹೆಚ್ಚು ಹ್ಯಾಟ್ರಿಕ್ ಪಡೆದ ಆಟಗಾರರ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಅಮಿತ್ ಮಿಶ್ರಾ ಐಪಿಎಲ್ನಲ್ಲಿ ಅತಿ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಅವರು 3 ಬಾರಿ ಈ ಸಾಧನೆ ಮಾಡಿದ್ದಾರೆ. ಅಮಿತ್ ಮಿಶ್ರಾ ತಮ್ಮ ಅತ್ಯುತ್ತಮ ಬೌಲಿಂಗ್ಗೆ ಹೆಸರುವಾಸಿಯಾಗಿದ್ದಾರೆ.
ಯುವರಾಜ್ ಸಿಂಗ್ ಯಾವಾಗಲೂ ತಮ್ಮ ಮಾರಕ ಬೌಲಿಂಗ್ಗೆ ಪ್ರಸಿದ್ಧರಾಗಿದ್ದಾರೆ. ಐಪಿಎಲ್ನಲ್ಲಿ 2 ಬಾರಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಪ್ರವೀಣ್ ತಾಂಬೆ ತಮ್ಮ 41ನೇ ವಯಸ್ಸಿನಲ್ಲಿ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಐಪಿಎಲ್ನಲ್ಲಿ 33 ಪಂದ್ಯಗಳನ್ನು ಆಡಿರುವ ಅವರು 28 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅವರು ಐಪಿಎಲ್ನಲ್ಲಿ ಒಮ್ಮೆ ಹ್ಯಾಟ್ರಿಕ್ ಗಳಿಸಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರು 3ನೇ ಸ್ಥಾನದಲ್ಲಿದ್ದಾರೆ.
ಸ್ಯಾಮ್ ಕರನ್ ಐಪಿಎಲ್ನ 32 ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದಾರೆ. ಐಪಿಎಲ್ನಲ್ಲೂ ಈ ಬೌಲರ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಬೌಲರ್ ಗಳನ್ನು ದಂಡಿಸಲು ಹಿಟ್ ಮ್ಯಾನ್ ಹಿಂದೆ-ಮುಂದೆ ನೋಡುವುದಿಲ್ಲ. ಬ್ಯಾಟಿಂಗ್ ಜೊತೆಗೆ ಅವರು ಅರೆಕಾಲಿಕ ಬೌಲಿಂಗ್ನಲ್ಲಿ ಪ್ರಸಿದ್ಧರಾಗಿದ್ದಾರೆ. ರೋಹಿತ್ ಐಪಿಎಲ್ನಲ್ಲಿ 15 ವಿಕೆಟ್ ಪಡೆದಿದ್ದಾರೆ.