Health Benefits of Tulsi : ತುಳಸಿ ಸೇವನೆಯಿಂದ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ತುಳಸಿ ಸೇವನೆಯಿಂದ ನೀವು ಹಲವಾರು ಖಾಯಿಲೆಗಳಿಂದ ದೂರವಿರಬಹುದು.
Amazing Benefits Of Tulsi: ತುಳಸಿ ಗಿಡಕ್ಕೆ ಹಿಂದೂ ಧರ್ಮದಲ್ಲಿ ಬಹುಮುಖ್ಯ ಪ್ರಾಮುಖ್ಯತೆ ನೀಡಲಾಗಿದೆ. ಧಾರ್ಮಿಕ ಕಾರ್ಯಗಳಲ್ಲಿ ತುಳಸಿಯನ್ನು ಬಳಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಪೂಜೆ-ಪುನಸ್ಕಾರಗಳಲ್ಲಿ ತುಳಸಿ ಎಲೆಗಳನ್ನು ಬಳಸಲಾಗುತ್ತದೆ. ಪುರಾಣಗಳ ಪ್ರಕಾರ ಅಮೃತಕ್ಕಾಗಿ ದೇವತೆಗಳು ಮತ್ತು ಅಸುರರು ಸೇರಿ ಸಮುದ್ರ ಮಂಥನ ಮಾಡಿದಾಗ ಉದ್ಭವವಾದ ಸಸ್ಯವೇ ತುಳಸಿ ಎಂದು ಹೇಳಲಾಗಿದೆ. ಇಷ್ಟೆಲ್ಲಾ ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ತುಳಸಿ ಎಲೆಗಳಲ್ಲಿ ಹಲವಾರು ಔಷಧೀಯ ಗುಣಗಳಿವೆ. ಆಯುರ್ವೇದ ಔಷಧಗಳಲ್ಲಿ ಹಿಂದಿನ ಕಾಲದಿಂದಲೂ ತುಳಿಸಿಯನ್ನು ಬಳಸಿಕೊಂಡು ಬರಲಾಗುತ್ತಿದೆ. ತುಳಸಿ ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಇದರ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ತುಳಸಿ ಸೇವನೆಯಿಂದ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ತುಳಸಿ ಸೇವನೆಯಿಂದ ನೀವು ಹಲವಾರು ಖಾಯಿಲೆಗಳಿಂದ ದೂರವಿರಬಹುದು. ಮಕ್ಕಳಲ್ಲಿ ಕಾಣಿಸುವ ಶೀತ, ಕೆಮ್ಮು ಮತ್ತು ಗಂಟಲು ನೋವು ಮುಂತಾದ ಸಮಸ್ಯೆಗಳಿಗೆ ತುಳಸಿ ರಾಮಬಾಣವಾಗಿದೆ. ಜೇನುತುಪ್ಪದೊಂದಿಗೆ ತುಳಸಿ ಸೇವಿಸಿದರೆ ಹೆಚ್ಚಿನ ಲಾಭ ಪಡೆದುಕೊಳ್ಳಬಹುದು. ಒಂದು ಚಮಚ ತುಳಸಿ ಎಲೆಯ ಪುಡಿಗೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವಿಸಿದ್ರೆ ಅದ್ಭುತ ಚಮತ್ಕಾರವನ್ನು ನೀವೇ ಕಾರಣಬಹುದು.
ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಎಳೆ ತುಳಸಿ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಅಗಿದು ತಿನ್ನಬೇಕು. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ. ಖಿನ್ನತೆ ಮತ್ತು ಒತ್ತಡದಂತಹ ಕಾಯಿಲೆಗಳಿಂದ ನಿಮಗೆ ಮುಕ್ತಿ ನೀಡುತ್ತದೆ. ತುಳಸಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕುತ್ತದೆ.
ತುಳಸಿ ಉತ್ತಮ ಆ್ಯಂಟಿಆಕ್ಸಿಡೆಂಟ್ ಆಗಿದ್ದು, ಆ್ಯಂಟಿ ಬ್ಯಾಕ್ಟೀರಿಯಾ ಗುಣಲಕ್ಷಣ ಹೊಂದಿದೆ. ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳಲು ಇದು ನಿಮಗೆ ಸಹಕಾರಿಯಾಗಿದೆ. ತುಳಸಿಯನ್ನು ಟೀ ಜೊತೆಗೆ ಸೇವಿಸಿಬಹುದು. ಹರ್ಬಲ್ ಟೀ ಅಥವಾ ಹಾಲಿನಿಂದ ತಯಾರಿಸುವ ಚಹಾದಲ್ಲಿ ತುಳಸಿ ಎಲೆಗಳನ್ನು ಸೇರಿಸಬಹುದು. ಒಂದು ಕಪ್ ನೀರಿಗೆ ಚಹಾ ಎಲೆಗಳನ್ನು ಹಾಕಿ, ನಂತರ ಅದಕ್ಕೆ 6-7 ತುಳಸಿ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ. ಬಳಿಕ ಅದನ್ನು ಸೋಸಿ ಸೇವಿಸಬೇಕು.
ತುಳಸಿ ರಸವು ಗಂಟಲು ನೋವಿನಿಂದ ಹಿಡಿದು ಹೊಟ್ಟೆ ನೋವಿನವರೆಗಿನ ಅನೇಕ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುತ್ತದೆ. 10-15 ತುಳಸಿ ಎಲೆಗಳನ್ನು ತೆಗೆದುಕೊಂಡು ಜಜ್ಜಿ ಅದರ ರಸವನ್ನು ತೆಗೆಯಿರಿ. ಆ ರಸವನ್ನು ಒಂದು ಕಪ್ ನೀರಿಗೆ ಬೆರೆಸಿ ಸೇವಿಸಿರಿ. ಇದು ಹೊಟ್ಟೆಯ ತೊಂದರೆಗಳನ್ನು ದೂರಮಾಡುತ್ತದೆ ಮತ್ತು ದೇಹದ ತೂಕ ಇಳಿಸಲು ಸಹಕಾರಿಯಾಗಿದೆ.
ತುಳಸಿ ಎಲೆಯನ್ನು ಒಣಗಿಸಿ ನಂತರ ಪುಡಿ ಮಾಡಬೇಕು. ಅದನ್ನು ನೀರಿಗೆ ಹಾಕಿ ಕುದಿಸಿ ಆ ನೀರನ್ನು ಸೋಸಿ. ತುಳಸಿ ಕಷಾಯವನ್ನು ಈ ರೀತಿ ತಯಾರಿಸಬೇಕು. ಇದರಿಂದ ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ನೀವು ಪಡೆಯುತ್ತೀರಿ.