Aloe vera gel for hair: ಇಂದಿನ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಕೂದಲು ಬಿಳಿಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದಂತೆ ಕೂದಲು ಬೆಳ್ಳಗಾಗುತ್ತದೆ. ಆದರೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದರಲ್ಲಿ ಅನೇಕ ರಾಸಾಯನಿಕ ಉತ್ಪನ್ನಗಳು ಸಹ ಪಾತ್ರವಹಿಸುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಇಂದಿನ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಕೂದಲು ಬಿಳಿಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದಂತೆ ಕೂದಲು ಬೆಳ್ಳಗಾಗುತ್ತದೆ. ಆದರೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದರಲ್ಲಿ ಅನೇಕ ರಾಸಾಯನಿಕ ಉತ್ಪನ್ನಗಳು ಸಹ ಪಾತ್ರವಹಿಸುತ್ತವೆ.
ಬಿಳಿ ಕೂದಲು ಇದ್ದರೆ ಅದನ್ನು ಕಪ್ಪಾಗಾಗಿಸಲು ಅಲೋವೆರಾ ಜೆಲ್ ಅನ್ನು ಬಳಕೆ ಮಾಡಬಹುದು.ಇದರ ಸಹಾಯದಿಂದ ಕೂದಲು ಕಪ್ಪಾಗುವುದು ಮಾತ್ರವಲ್ಲದೆ ದಟ್ಟವಾಗಿ, ಮೃದುವಾಗಿ ಮತ್ತು ಉದ್ದವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಅಂದಹಾಗೆ ನಟಿ ಸಾಯಿಪಲ್ಲವಿ ತಮ್ಮ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಲು ವಾರಕ್ಕೊಮ್ಮೆ ಇದೇ ವಿಧಾನವನ್ನು ಅನುಸರಿಸುತ್ತಾರೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.
ಇನದನು ಅಲೋವೆರಾ ಜೆಲ್ ಹೇರ್ ಮಾಸ್ಕ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ. ಇದಕ್ಕೆ ಬೇಕಾಗಿರೋದು ಅಲೋವೆರಾ ಜೆಲ್ 1 ಸಣ್ಣ ಕಪ್, ತೆಂಗಿನ ಎಣ್ಣೆ 2 ಟೀ ಚಮಚ, ಮೆಹಂದಿ ಪುಡಿ 2 ಟೀ ಚಮಚ.
ಮೊದಲು 1 ಬೌಲ್ ತೆಗೆದುಕೊಳ್ಳಿ. ಅದರಲ್ಲಿ ಅಲೋವೆರಾ ಜೆಲ್, ಗೋರಂಟಿ ಪುಡಿ ಮತ್ತು ತೆಂಗಿನ ಎಣ್ಣೆಯನ್ನು ಸೇರಿಸಿ. ನಂತರ, ಈ ಎಲ್ಲಾ ವಸ್ತುಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಈಗ ಅಲೋವೆರಾ ಜೆಲ್ ಹೇರ್ ಮಾಸ್ಕ್ ಸಿದ್ಧವಾಗಿದೆ.
ಅಲೋವೆರಾ ಜೆಲ್ ಹೇರ್ ಮಾಸ್ಕ್ ಅನ್ನು ಹಚ್ಚುವ ಮೊದಲು ಕೂದಲನ್ನು ಚೆನ್ನಾಗಿ ತೊಳೆಯಿರಿ. ನಂತರ ಸಿದ್ಧಪಡಿಸಿದ ಪ್ಯಾಕ್ ಅನ್ನು ನೆತ್ತಿ ಮತ್ತು ಕೂದಲಿಗೆ ಸಂಪೂರ್ಣವಾಗಿ ಹಚ್ಚಿ 10 ರಿಂದ 15 ನಿಮಿಷಗಳ ಕಾಲ ಬಿಡಿ. ನಂತರ ಕೂದಲನ್ನು ಚೆನ್ನಾಗಿ ತೊಳೆಯಿರಿ.
ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದನ್ನಾದರೂ ನೀವು ಎಲ್ಲಿಯಾದರೂ ಓದಿದ್ದರೆ, ಅದನ್ನು ಅಳವಡಿಸಿಕೊಳ್ಳುವ ಮೊದಲು ದಯವಿಟ್ಟು ವೈದ್ಯರನ್ನು ಸಂಪರ್ಕಿಸಿ.