Vastu Tips: ವೃತ್ತಿ ಬದುಕಿನಲ್ಲಿ ತೊಂದರೆಯೇ, ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಈ ವಸ್ತುಗಳನ್ನು ಇಟ್ಟು ಮಲಗಿ

                                        

Astro Tips For Job: ಅದೃಷ್ಟಕ್ಕಾಗಿ, ಉದ್ಯೋಗವನ್ನು ಪಡೆಯಲು, ಆರ್ಥಿಕ ಸಂಕಷ್ಟಗಳನ್ನು ಪರಿಹರಿಸಲು ನನರು ನಾನಾ ರೀತಿಯ ಪರಿಹಾರಗಳನ್ನು ಕೈಗೊಳ್ಳುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗಿದರೆ ವೃತ್ತಿ ಬದುಕಿನಲ್ಲಿ ಎದುರಾಗಿರುವ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ನೀವು ಎಷ್ಟೇ ಪ್ರಯತ್ನಿಸಿದರೂ ಕೆಲಸ ಸಿಗುತ್ತಿಲ್ಲವೇ? ಇಲ್ಲವೇ ಉದ್ಯೋಗದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದರೆ,  ಆರ್ಥಿಕ ಬಿಕ್ಕಟ್ಟು ಸುಧಾರಿಸದಿದ್ದರೆ, ಜ್ಯೋತಿಷ್ಯ ಶಾಸ್ತ್ರದಲ್ಲಿ, ವಾಸ್ತು ಶಾಸ್ತ್ರದಲ್ಲಿ ಕೆಲವು ಪರಿಹಾರಗಳನ್ನು ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ವೃತ್ತಿ ಬದುಕಿನಲ್ಲಿ ತೊಂದರೆ ಇದ್ದರೆ ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗಿದರೆ ಎಲ್ಲಾ ರೀತಿಯ ಸಮಸ್ಯೆಗಳು ಬಗೆಹರಿಯುತ್ತವೆ. ಇದರಿಂದ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತದೆ. ಅಂತಹ ಕೆಲವು ಸರಳ ಪರಿಹಾರಗಳು ಇಲ್ಲಿವೆ. 

2 /8

ರಾತ್ರಿ ಮಲಗುವಾಗ ದಿಂಬಿನ ಕೆಳಗೆ ನವಿಲು ಗರಿ ಇಟ್ಟು ಮಲಗುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗುತ್ತದೆ. ಮಾತ್ರವಲ್ಲ, ವೃತ್ತಿ ಬದುಕಿನಲ್ಲಿ ತಲೆದೂರಿರುವ ಸಮಸ್ಯೆಗಳಿಂದಲೂ ಕೂಡ ಮುಕ್ತಿ ದೊರೆಯುತ್ತದೆ. 

3 /8

ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ರೂಪಾಯಿ ನಾಣ್ಯವನ್ನು ಇಟ್ಟು ಮಲಗುವುದರಿಂದ ದೀರ್ಘಕಾಲದ ಹಣದ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಜೊತೆಗೆ ಹಣಕಾಸಿನ ಸ್ಥಿತಿಯೂ ಸುಧಾರಿಸುತ್ತದೆ. 

4 /8

ನಿತ್ಯ ರಾತ್ರಿ ಮಲಗುವ ಮೊದಲು ಬೆಳ್ಳುಳ್ಳಿಯ ಮೊಗ್ಗಣ್ಣು ತಲೆಯ ಕೆಳಗೆ ಇಟ್ಟು ಮಲಗುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ, ಜೀವನದಲ್ಲಿ ಧನಾತ್ಮಕತೆ ತುಂಬುತ್ತದೆ. ಇದು ನಿಮ್ಮ ವೃತ್ತಿ ಬದುಕಿನಲ್ಲಿ ಪ್ರಗತಿಯ ಹಾದಿಗಳನ್ನು ಸಹ ತೆರೆಯುತ್ತದೆ. 

5 /8

ಮಲಗುವ ವೇಳೆ ಅರಿಶಿನದ ಕೊನೆಯನ್ನು ದಿಂಬಿನ ಕೆಳಗಿಟ್ಟು ಮಲಗುವುದರಿಂದ ಹೊಸ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. 

6 /8

ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನವನ್ನು ಪಡೆದಿರುವ ತುಳಸಿ ಸಸ್ಯದ ಒಂದೇ ಒಂದು ದಳವನ್ನು ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ನಿಮ್ಮ ಜೀವನದಲ್ಲಿ ಉದ್ಯೋಗ, ವ್ಯವಹಾರ, ದಾಂಪತ್ಯ ಜೀವನದಲ್ಲಿ ತಲೆದೂರಿರುವ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

7 /8

ಹಸಿರು ಏಲಕ್ಕಿಯನ್ನು ಮಲಗುವಾಗ ದಿಂಬಿನ ಕೆಳಗಿಟ್ಟು ಮಲಗುವುದರಿಂದ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರವಲ್ಲ, ಉದ್ಯೋಗ-ವ್ಯವಹಾರದಲ್ಲಿ ನಿಮ್ಮಾ ಅದೃಷ್ಟದ ಬಾಗಿಲುಗಳು ತೆರೆಯುತ್ತವೆ. 

8 /8

ವಿಶೇಷ ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.