Virat Kohli Rumoured Girlfriends: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಪ್ರೇಮ ಜೀವನ ಮದುವೆಗೂ ಮುನ್ನ ಸುದ್ದಿಯಾಗಿತ್ತು. ಅನುಷ್ಕಾ ಶರ್ಮಾ ಅವರೊಂದಿಗಿನ ಮದುವೆಗೂ ಮೊದಲು, ಕೆಲ ನಟಿಯರ ಜೊತೆ ವಿರಾಟ್ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು
ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್
ಭಾರತ ತಂಡದ ಮಾಜಿ ನಾಯಕ ಮತ್ತು ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜನಮನ ಗೆದ್ದಿದ್ದಾರೆ. ಆದರೆ ಇದರ ಜೊತೆಗೆ ಅವರ ಪ್ರೇಮ ಜೀವನವೂ ಸಖತ್ ಸುದ್ದಿಯಲ್ಲಿದೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ಮದುವೆಗೂ ಮೊದಲು, ಕೆಲ ನಟಿಯರೊಂದಿಗೆ ವಿರಾಟ್ ಹೆಸರು ಕೇಳಿಬಂದಿತ್ತು.
ಭಾರತೀಯ ಚಿತ್ರರಂಗದ ಕೆಲವು ನಟಿಯರ ಜೊತೆಗೆ ಬ್ರೆಜಿಲ್ ರೂಪದರ್ಶಿಯ ಹೆಸರೂ ಈ ಪಟ್ಟಿಯಲ್ಲಿ ಸೇರಿದೆ. ಕೆಲವು ಬಾಲಿವುಡ್ ಚಿತ್ರಗಳಲ್ಲಿ ಕೆಲಸ ಮಾಡಿರುವ ಬ್ರೆಜಿಲಿಯನ್ ಮಾಡೆಲ್ ಇಸಾಬೆಲ್ ಲೇಟಿ ಅವರು ಸಂದರ್ಶನವೊಂದರಲ್ಲಿ ಕೊಹ್ಲಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಒಪ್ಪಿಕೊಂಡಿದ್ದರು. 2014 ರಲ್ಲಿ, ಇಸಾಬೆಲಿ ಲೀಟಿ ಸಂದರ್ಶನವೊಂದರಲ್ಲಿ ತಾನು ಮತ್ತು ವಿರಾಟ್ ಸುಮಾರು 2 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದ್ದೇವೆ ಎಂದು ಹೇಳಿದ್ದರು.
2007ರಲ್ಲಿ ಮಿಸ್ ಇಂಡಿಯಾ ಪಟ್ಟ ಗೆದ್ದಿದ್ದ ಸಾರಾ ಜೇನ್ ಡೈಸ್ ಹೆಸರು ಕೂಡ ವಿರಾಟ್ ಕೊಹ್ಲಿ ಜೊತೆ ತಳುಕು ಹಾಕಿಕೊಂಡಿದೆ. ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ಬಹಿರಂಗಪಡಿಸದಿದ್ದರೂ, ವರದಿಗಳ ಪ್ರಕಾರ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅವರು ಪರಸ್ಪರ ಬ್ರೇಕ್ಅಪ್ ಮಾಡಿಕೊಂಡಿದ್ದರು.
ಬಾಲಿವುಡ್ ನಟಿ ತಮನ್ನಾ ಭಾಟಿಯಾ ಜೊತೆ ವಿರಾಟ್ ಕೊಹ್ಲಿ ಹೆಸರು ಕೂಡ ತಳುಕು ಹಾಕಿಕೊಂಡಿತ್ತು. 2012 ರ ಕೊನೆಯಲ್ಲಿ, ಇಬ್ಬರ ನಡುವೆ ಉತ್ತಮ ಸ್ನೇಹ ಕಂಡುಬಂದಿತು. ಆದರೆ, ಈ ಬಗ್ಗೆ ಇಬ್ಬರೂ ಬಹಿರಂಗವಾಗಿ ಮಾತನಾಡಿರಲಿಲ್ಲ.
ಇನ್ನು ವಿರಾಟ್ ಕೊಹ್ಲಿ ಕನ್ನಡ ಚಿತ್ರರಂಗದ ನಟಿ ಸಂಜನಾ ಅವರ ಹೆಸರು ಕೂಡ ಈ ಪಟ್ಟಿಯಲ್ಲಿ ಸೇರಿದೆ. 2009 ರಲ್ಲಿ, ಇಬ್ಬರ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಸುದ್ದಿಗಳು ವರದಿಯಾಗಿದ್ದವು. ಆದರೆ ಆ ಸಮಯದಲ್ಲಿ ಸಂಜನಾ, ಕೊಹ್ಲಿಯೊಂದಿಗಿನ ಸಂಬಂಧದ ಬಗ್ಗೆ ನಿರಾಕರಿಸಿದ್ದರು. ಇದು ಕೇವಲ ಸ್ನೇಹವಷ್ಟೇ ಎಂದು ಖಡಕ್ ಆಗಿ ನುಡಿದಿದ್ದರು ನಟಿ ಸಂಜನಾ.