ಚಳಿಗಾಲದಲ್ಲಿ ಕಿತ್ತಳೆಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಲಾಭವಾಗುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ.
ನವದೆಹಲಿ : Winter Food : ಚಳಿಗಾಲದಲ್ಲಿ ಕೆಲವು ಆಹಾರಗಳನ್ನು ಸೇವಿಸುವುದರಿಂದ ಶೀತ ಮತ್ತು ಜ್ವರದ ಸಮಸ್ಯೆಯಿಂದ ಪಾರಾಗಬಹುದು. ಇವುಗಳನ್ನು ತಿನ್ನುವುದರಿಂದ ಸೀಸನಲ್ ಕಾಯಿಲೆಗಳು ದೂರವಾಗುತ್ತವೆ. ಈ ಋತುವಿನಲ್ಲಿ ಆಹಾರದಲ್ಲಿ ಏನೆಲ್ಲಾ ಪದಾರ್ಥಗಳನ್ನು ಸೇರಿಸಬೇಕು ನೋಡೋಣ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಚಳಿಗಾಲದಲ್ಲಿ ಕಿತ್ತಳೆಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಲಾಭವಾಗುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ.
ಲವಂಗ ಮತ್ತು ದಾಲ್ಚಿನ್ನಿಯಿಂದ ಮಾಡಿದ ಚಹಾವು ಪ್ರಯೋಜನವನ್ನು ನೀಡುತ್ತದೆ. ಇದು ರೋಗನಿರೋಧಕ ಶಕ್ತಿಯನು ಹೆಚ್ಚಿಸುತ್ತದೆ. ಆರೋಗ್ಯವನ್ನು ಬಲಪಡಿಸುತ್ತದೆ.
ಆಹಾರದಲ್ಲಿ ಪೌಷ್ಠಿಕಾಂಶ ಭರಿತ ಬೆಳ್ಳುಳ್ಳಿಯನ್ನು ಸೇರಿಸುವುದು ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಮೂಲಕ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.
ತಜ್ಞರ ಪ್ರಕಾರ, ಜೇನುತುಪ್ಪದ ಸೇವನೆಯು ಶೀತ ಮತ್ತು ಕೆಮ್ಮಿನ ಸಮಸ್ಯೆಗೆ ತ್ವರಿತ ಪರಿಹಾರವನ್ನು ನೀಡುತ್ತದೆ. ಜೇನುತುಪ್ಪದೊಂದಿಗೆ ಶುಂಠಿಯನ್ನು ಬೆರೆಸಿ ತೆಗೆದುಕೊಂಡರೆ ಒಳ್ಳೆಯದು. ಶೀತ ಮತ್ತು ಕೆಮ್ಮನ್ನು ಗುಣಪಡಿಸಲು ಇದು ಪರಿಣಾಮಕಾರಿ ಪಾಕವಿಧಾನವಾಗಿದೆ.
ಅರಿಶಿನದಲ್ಲಿ ಕರ್ಕ್ಯುಮಿನ್ ಎಂಬ ಅಂಶವಿದೆ. ಇದು ನಂಜುನಿರೋಧಕ, ಆಂಟಿವೈರಲ್ ಮತ್ತು ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳನ್ನು ಹೊಂದಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸುವ ಜೊತೆಗೆ, ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.