Jupiter Transit In Taurus: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ದೇವಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದು, ಮೇ 1, 2024 ರಂದು ದೈತ್ಯ ಗುರು ಶುಕ್ರನ ರಷಿಯಾಗಿರುವ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಓರ್ವ ಗುರು ಮತ್ತೊರ್ವ ಗುರುವಿನ ರಾಶಿಗೆ ಪ್ರವೇಶಿಸುವುದರಿಂದ ಅದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸಲಿದೆ. ವೃಷಭ ರಾಶಿಗೆ ಗುರುವಿನ ಪ್ರವೇಶದಿಂದ ಅಲ್ಲಿ ಕುಬೇರ ಹೆಸರಿನ ರಾಜಯೋಗ ರಚನೆಯಾಗಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ಯಾವ ರಾಶಿಯ ಜನರಿಗೆ ಇದು ಅತ್ಯಂತ ಲಾಭದಾಯಕವಾಗಿದೆ ತಿಳಿದುಕೊಳ್ಳೋಣ ಬನ್ನಿ,
ವೃಷಭ ರಾಶಿ: ನಿಮ್ಮ ರಾಶಿಯ ಲಗ್ನ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ಎಲ್ಲಾ ರೀತಿಯ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ವೃತ್ತಿಯಲ್ಲಿ ನಡೆದುಕೊಂಡು ಬಂದ ಸಮಸ್ಯೆಗಳು ಅಂತ್ಯವಾಗಲಿವೆ. ನೌಕರಿಯಲ್ಲಿ ಉನ್ನತಿಯ ಜೊತೆಗೆ ಇಂಕ್ರಿಮೆಂಟ್ ಮತ್ತು ಬೋನಸ್ ಸಿಗಲಿದೆ. ಆರ್ಥಿಕ ಜೀವನ ಉತ್ತಮವಾಗಿರಲಿದೆ.
ಕರ್ಕ ರಾಶಿ: ನಿಮ್ಮ ಮೇಲೆ ದೇವ ಗುರು ಬೃಹಸ್ಪತಿಯ ವಿಶೇಷ ಕೃಪೆ ಇರಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಸಿಗಲಿದೆ. ಕೌಟುಂಬಿಕ ಸುಖ ಸಮೃದ್ಧಿ ಹೆಚ್ಚಾಗಲಿದೆ. ಆದಾಯದ ಮೂಲಗಳು ತೆರೆದುಕೊಳ್ಳುವ ಕಾರಣ, ಮನಸ್ಸು ಶಾಂತ ಚಿತ್ತದಿಂದ ಕೂಡಿರಲಿದೆ. ಜಾತಕದ ಹನ್ನೊಂದನೆಯ ಮನೆಯಲ್ಲಿ ಕುಬೇರ ಯೋಗ ರಚನೆಯಿಂದ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನೌಕರವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗ್ಳಿದ್ದು, ಲವ್ ಲೈಫ್ ಉತ್ತಮವಾಗಿರಲಿದೆ.
ಇದನ್ನೂ ಓದಿ-ACC Men's Premium Cup 2024: ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ಕ್ಯಾಚ್ ನೋಡಲು ಸಿಗುವುದು ಅಪರೂಪ, Watch Video
ಕನ್ಯಾ ರಾಶಿ: ಈ ಯೋಗ ನಿಮ್ಮ ಪಾಳಿಗೂ ಕೂಡ ವರದಾನ ಸಾಬೀತಾಗಲಿದೆ. ಅಪಾರ ಧನ ಸಂಪತ್ತಿನ ಜೊತೆಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅತ್ಯುತ್ತಮವಾಗಿರಲಿದೆ. ಅದರಲ್ಲಿಯೂ ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ಸಿಗಲಿದೆ.
ಇದನ್ನೂ ಓದಿ-IPL 2024: 'ಇದು ಎಲ್ಲಕ್ಕಿಂತ ಮಿಗಿಲಾದದ್ದು...', ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.