ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಮಹಿಳಾ ತಂಡಕ್ಕೆ ಮತ್ತೊಂದು ಬಂಪರ್ ಘೋಷಣೆ ಮಾಡಿದ BCCI

U19 Women World Cup 2023: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಬುಧವಾರದಂದು ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತದ ಅಂಡರ್-19 ಮಹಿಳಾ ಕ್ರಿಕೆಟ್ ತಂಡವನ್ನು ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಭಿನಂದಿಸಲಿದ್ದಾರೆ ಎಂದು ಜೈ ಶಾ ಘೋಷಿಸಿದ್ದಾರೆ.

Written by - Bhavishya Shetty | Last Updated : Jan 30, 2023, 11:13 PM IST
    • ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ
    • ಈ ಟೂರ್ನಿಯ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವೆ ನಡೆದಿತ್ತು
    • ಮಹಿಳಾ ಕ್ರಿಕೆಟ್ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿ ರೂಪಾಯಿ ನಗದು ಘೋಷಿಸಿದ ಬಿಸಿಸಿಐ
ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಮಹಿಳಾ ತಂಡಕ್ಕೆ ಮತ್ತೊಂದು ಬಂಪರ್ ಘೋಷಣೆ ಮಾಡಿದ BCCI  title=
U-19 Women's T20 World Cup

U19 Women World Cup 2023: ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಟೂರ್ನಿಯ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವೆ ನಡೆದಿದ್ದು, ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದಿದೆ. ಈ ವಿಜಯದ ನಂತರ, BCCI ಕಾರ್ಯದರ್ಶಿ ಜಯ್ ಶಾ ಅವರು 19 ವರ್ಷದೊಳಗಿನ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು. ಈ ತಂಡಕ್ಕೆ ಜೈ ಶಾ ಈಗ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ಟೀಮ್ ಇಂಡಿಯಾದ ಈ ಸ್ಟಾರ್ ಆಟಗಾರ...!

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಬುಧವಾರದಂದು ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತದ ಅಂಡರ್-19 ಮಹಿಳಾ ಕ್ರಿಕೆಟ್ ತಂಡವನ್ನು ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಭಿನಂದಿಸಲಿದ್ದಾರೆ ಎಂದು ಜೈ ಶಾ ಘೋಷಿಸಿದ್ದಾರೆ.

ಭಾರತ ರತ್ನ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಅಧಿಕಾರಿಗಳು ಫೆಬ್ರವರಿ 1 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತದ ವಿಜೇತ ಅಂಡರ್-19 ತಂಡವನ್ನು ಸನ್ಮಾನಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ. “ಆರೂವರೆ ಗಂಟೆಗೆ ಸನ್ಮಾನ. ಯುವ ಕ್ರಿಕೆಟಿಗರು ಭಾರತಕ್ಕೆ ಹೆಮ್ಮೆ ತಂದಿದ್ದಾರೆ ಮತ್ತು ಅವರ ಸಾಧನೆಗಳನ್ನು ನಾವು ಗೌರವಿಸುತ್ತೇವೆ” ಎಂದು ಅವರು ಹೇಳಿದರು.

ಮಹಿಳಾ ಕ್ರಿಕೆಟ್ ತಂಡದ ಮೊದಲ ICC ಪ್ರಶಸ್ತಿ:

ಶಫಾಲಿ ವರ್ಮಾ ನೇತೃತ್ವದ ಭಾರತ ತಂಡವು ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಏಳು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ICC ಅಂಡರ್-19 ಮಹಿಳಾ T20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಮಹಿಳಾ ಕ್ರಿಕೆಟ್‌ನಲ್ಲಿ ಭಾರತಕ್ಕೆ ಇದು ಮೊದಲ ಐಸಿಸಿ ಪ್ರಶಸ್ತಿಯಾಗಿದೆ. ವಿಜೇತ ತಂಡ ಮಂಗಳವಾರ ದಕ್ಷಿಣ ಆಫ್ರಿಕಾದಿಂದ ಮುಂಬೈ ತಲುಪಿ, ಬುಧವಾರ ಅಹಮದಾಬಾದ್‌ಗೆ ತೆರಳಿ ಅಭಿನಂದನಾ ಸಮಾರಂಭ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಮತ್ತು ನಿರ್ಣಾಯಕ ಟಿ20 ಪಂದ್ಯಕ್ಕೂ ಮುನ್ನ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: Watch: ಕ್ರಿಕೆಟ್ ನಲ್ಲಿ ಯಾರೂ ಮಾಡಿಲ್ಲ ಇಂತಹ ಬೌಲಿಂಗ್: ಕುಲದೀಪ್ ಸ್ಟೈಲ್ ಗೆ ನ್ಯೂಜಿಲೆಂಡ್ ಆಟಗಾರ ಕ್ಲೀನ್ ಬೌಲ್ಡ್

ಈ ಅಂತಿಮ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ತಂಡಕ್ಕೆ 17.1 ಓವರ್‌ಗಳಲ್ಲಿ 68 ರನ್‌ಗಳಿಸಲಷ್ಟೇ ಅವಕಾಶ ನೀಡಿತ್ತು. ಭಾರತದ ಪರ ಅರ್ಚನಾ ದೇವಿ, ಪಾರ್ಶ್ವಿ ಚೋಪ್ರಾ ಮತ್ತು ಟೈಟಾಸ್ ಸಾಧು ತಲಾ 2 ವಿಕೆಟ್ ಪಡೆದರು. ಮನ್ನತ್ ಕಶ್ಯಪ್, ಸೋನಮ್ ಯಾದವ್ ಮತ್ತು ಶೆಫಾಲಿ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಭಾರತ 19 ವರ್ಷದೊಳಗಿನವರ ಮಹಿಳಾ ತಂಡ ಈ ಗುರಿಯನ್ನು 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಸಾಧಿಸಿತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News