Vijay Dahiya, Lucknow Super Giants : ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ಕೆ ಎಲ್ಲಾ ತಂಡಗಳು ಸಿದ್ಧವಾಗಿವೆ.ಇತ್ತೀಚೆಗೆ ನಡೆದ ಮಿನಿ ಹರಾಜಿನಲ್ಲಿ ಆಟಗಾರರ ಮೇಲೆ ಸಾಕಷ್ಟು ಹಣವನ್ನು ಸುರಿಸಲಾಗಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಒಂದು ದೊಡ್ಡ ಸುದ್ದಿಯೊಂದು ಹೊರ ಬಂದಿದೆ. ತಂಡದ ಸಹಾಯಕ ಕೋಚ್ ವಿಜಯ್ ದಹಿಯಾ ಫ್ರಾಂಚೈಸಿಯಿಂದ ದೂರವಾಗಲು ನಿರ್ಧರಿಸಿದ್ದಾರೆ. ಈ ಮಾಹಿತಿಯನ್ನು ಅವರೇ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ. ಇದಾದ ಬಳಿಕ ಫ್ರಾಂಚೈಸಿ ಕೂಡಾ ಸಾಮಾಜಿಕ ಮಾಧ್ಯಮದ ಮೂಲಕ ಇದನ್ನು ದೃಢಪಡಿಸಿದೆ. ಕೆಲವು ದಿನಗಳ ಹಿಂದೆ, ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಕೂಡಾ ತಂಡದಿಂದ ದೂರವಾಗಲು ನಿರ್ಧರಿಸಿದ್ದರು.
ಎರಡು ವರ್ಷಗಳ ಕಾಲ ತಂಡದ ಜೊತೆಯಲ್ಲಿದ್ದ ವಿಜಯ್ ದಹಿಯಾ :
'ವಿದಾಯ ಹೇಳುವ ಸಮಯ ಎಂದು ವಿಜಯ್ ದಹಿಯಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ತಂಡದೊಂದಿಗೆ ಕೆಲಸ ಮಾಡಿರುವುದು ಅದ್ಭುತ ಅನುಭವ ನೀಡಿದೆ,LSG ತಂಡಕ್ಕೆ ಶುಭಾಶಯಗಳು ಎಂದು ಅವರು ಬರೆದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಭಾರತದ ಮಾಜಿ ಸ್ಪಿನ್ನರ್ ಶ್ರೀಧರನ್ ಶ್ರೀರಾಮ್ ಅವರನ್ನು ಐಪಿಎಲ್ 2024 ಕ್ಕೆ ಸಹಾಯಕ ಕೋಚ್ ಆಗಿ ನೇಮಕ ಮಾಡಿರುವುದು ಗಮನಾರ್ಹ.
ಇದನ್ನೂ ಓದಿ : Virat Kohli: ಈ ವಿಷಯದಲ್ಲಿ ಶಾರುಖ್ ಖಾನ್, ಪ್ರಿಯಾಂಕಾ ಚೋಪ್ರಾರನ್ನೂ ಹಿಂದಿಕ್ಕಿದ ವಿರಾಟ್ ಕೊಹ್ಲಿ
ಐಪಿಎಲ್ನಲ್ಲಿ ಈ ತಂಡಗಳೊಂದಿಗೆ ಕೆಲಸ :
2000 ಮತ್ತು 2001 ರ ನಡುವೆ ಭಾರತಕ್ಕಾಗಿ 2 ಟೆಸ್ಟ್ ಮತ್ತು 19 ODI ಪಂದ್ಯಗಳನ್ನು ಆಡಿರುವ ವಿಜಯ್ ದಹಿಯಾ, ಕೋಚ್ ಆಗಿ ಸುದೀರ್ಘ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು ಲಕ್ನೋ ಸೂಪರ್ ಜೈಂಟ್ಸ್ನ ಸಹಾಯಕ ಕೋಚ್ ಆಗುವ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗಳೊಂದಿಗೆ ಕೆಲಸ ಮಾಡಿದ್ದಾರೆ. ಕೆಕೆಆರ್ನಲ್ಲಿಯೂ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಟ್ಯಾಲೆಂಟ್ ಸ್ಕೌಟ್ ಆಗಿ ಡೆಲ್ಲಿ ಕ್ಯಾಪಿಟಲ್ಸ್ ನ ಜೊತೆಯೂ ಸಂಬಂಧ ಹೊಂದಿದ್ದರು.
ತಂಡ ತೊರೆದ ಗೌತಮ್ ಗಂಭೀರ್ :
ವಿಜಯ್ ದಹಿಯಾಗೂ ಮುನ್ನ ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್ನ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ತಂಡವನ್ನು ತೊರೆಯಲು ನಿರ್ಧರಿಸಿದ್ದರು. ಅವರು ತಮ್ಮ ಹಳೆಯ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿಕೊಂಡಿದ್ದಾರೆ.ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಎರಡು ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು.
ಇದನ್ನೂ ಓದಿ : 2ನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟ: 2 ಬದಲಾವಣೆ ಜೊತೆ ಇಬ್ಬರು ಆಟಗಾರರು ತಂಡಕ್ಕೆ ಎಂಟ್ರಿ!
IPL 2024 ಗಾಗಿ LSG ತಂಡ :
ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೆ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ಪ್ರೇರಕ್ ಮಂಕಡ್, ಯುಧ್ವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಯಶ್ ಬಿಷ್ಣೋಯ್, ಠಾಕೂರ್, ಅಮಿತ್ ಮಿಶ್ರಾ, ನವೀನ್ ಉಲ್ ಹಕ್, ಶಿವಂ ಮಾವಿ, ಎಂ ಸಿದ್ದಾರ್ಥ್, ಡೇವಿಡ್ ವಿಲ್ಲಿ, ಆಷ್ಟನ್ ಟರ್ನರ್, ಅರ್ಶಿನ್ ಕುಲಕರ್ಣಿ ಮತ್ತು ಅರ್ಷದ್ ಖಾನ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ