Champions Trophy Prize Money : 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಈ ಬಾರಿ ಟೂರ್ನಮೆಂಟ್ 'ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಪಾಕಿಸ್ತಾನ ಆತಿಥೇಯ ರಾಷ್ಟ್ರವಾಗಿದೆ. ಟೂರ್ನಮೆಂಟ್ ಪಂದ್ಯಗಳು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ. ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿ ಪ್ರಾರಂಭವಾಗಲಿದೆ. ಭಾರತ ತಂಡ ಫೆಬ್ರವರಿ 20 ರಂದು ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಬಹುಮಾನದ ಮೊತ್ತದಲ್ಲಿ ಬಂಪರ್ ಹೆಚ್ಚಳ :
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಹಣವನ್ನು ಘೋಷಿಸಿದೆ. 2025 ರ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡವು 2.24 ಮಿಲಿಯನ್ ಡಾಲರ್, ಅಂದರೆ ಸುಮಾರು 19.46 ಕೋಟಿ ರೂ.ಗಳನ್ನು ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ 1.12 ಮಿಲಿಯನ್ ಡಾಲರ್ ಅಂದರೆ ಸುಮಾರು 9.73 ಕೋಟಿ ರೂ. ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋತ ಎರಡೂ ತಂಡಗಳು 5,60,000, ಡಾಲರ್ ಅಂದರೆ ಸರಿಸುಮಾರು 4.86 ಕೋಟಿ ರೂ.ಗಳನ್ನು ಪಡೆಯುತ್ತವೆ.
ಇದನ್ನೂ ಓದಿ : ಟೀಂ ಇಂಡಿಯಾ ಆಟಗಾರನ ಆರೋಗ್ಯದಲ್ಲಿ ಏರುಪೇರು! ಆಸ್ಪತ್ರೆಯಲ್ಲಿ ಮಲಗಿರೋ ಫೋಟೋ ವೈರಲ್..
ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರತಿಯೊಂದು ಪಂದ್ಯವೂ ಮುಖ್ಯವಾಗಿರುತ್ತದೆ. ಗುಂಪು ಹಂತದಲ್ಲಿ ಪಂದ್ಯ ಗೆದ್ದರೆ ತಂಡಕ್ಕೆ 29.53 ಲಕ್ಷ ರೂ. ಸಿಗಲಿದೆ. ಐದನೇ ಮತ್ತು ಆರನೇ ಸ್ಥಾನ ಪಡೆಯುವ ತಂಡಗಳಿಗೆ 3.04 ಕೋಟಿ ರೂ. ಸಿಗಲಿದೆ. ಏಳನೇ ಮತ್ತು ಎಂಟನೇ ಸ್ಥಾನ ಪಡೆಯುವ ತಂಡಗಳಿಗೆ 1.22 ಕೋಟಿ ಪಡೆಯಲಾಗುವುದು. ಇದಲ್ಲದೆ, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲಾ ಎಂಟು ತಂಡಗಳಿಗೆ 1.09 ಕೋಟಿ ರೂ. ನೀಡಲಾಗುವುದು. ಈ ಪಂದ್ಯಾವಳಿಯಲ್ಲಿ ಐಸಿಸಿ ಒಟ್ಟು 6.9 ಮಿಲಿಯನ್ ಡಾಲರ್ ಅಥವಾ ಸುಮಾರು 60 ಕೋಟಿ ರೂ. ಬಹುಮಾನದ ಹಣವನ್ನು ವಿತರಿಸಲಿದೆ.
8 ವರ್ಷಗಳ ನಂತರ ನಡೆಯಲಿದೆ ಚಾಂಪಿಯನ್ಸ್ ಟ್ರೋಫಿ :
8 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲಾಗುತ್ತಿದೆ. ಇದಕ್ಕೂ ಮೊದಲು, ಈ ಪಂದ್ಯಾವಳಿಯನ್ನು ಕೊನೆಯ ಬಾರಿಗೆ ಇಂಗ್ಲೆಂಡ್‌ನಲ್ಲಿ 2017ರಲ್ಲಿ ನಡೆಸಲಾಗಿತ್ತು. ಇದರಲ್ಲಿ ಪಾಕಿಸ್ತಾನ ತಂಡವು ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಯಿತು. 8 ವರ್ಷಗಳ ನಂತರ ನಡೆಯುತ್ತಿರುವ ಈ ಐಸಿಸಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿದ್ದರೆ, ಗ್ರೂಪ್ ಬಿ ನಲ್ಲಿ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳಿವೆ.
ಇದನ್ನೂ ಓದಿ : ಐಪಿಎಲ್‌ಗಾಗಿ ಮದುವೆಯನ್ನೇ ಮುಂದೂಡಿದ ಆರ್‌ಸಿಬಿ ಸ್ಟಾರ್ ಆಟಗಾರ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.