ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ವಿಕೆಟ್ ಪಡೆದ ವಿಷಯದಲ್ಲಿ ಅವರು ಜಸ್ಪ್ರೀತ್ ಬುಮ್ರಾ ಧಾಖಲೆಯನ್ನು ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಯಜುವೇಂದ್ರ ಚಾಹಲ್, ನಿಗದಿತ ನಾಲ್ಕು ಓವರ್ ನಲ್ಲಿ 1 ವಿಕೆಟ್ ಕಬಳಿಸಿ 51 ರನ್ಸ್ ನೀಡಿದ್ದಾರೆ. ಇದರೊಂದಿಗೆ ಅವರು ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ತಮ್ಮ ವಿಕೆಟ್ ಗಳ ಸಂಖ್ಯೆಯನ್ನು 59ಕ್ಕೆ ಪೇರಿಸಿದ್ದಾರೆ.
ಇದನ್ನು ಓದಿ- ಕೊರಿಯೋಗ್ರಾಫರ್ ಧನಶ್ರೀ ವರ್ಮಾ ಜೊತೆ ಕ್ರಿಕೆಟರ್ ಯುಜ್ವೇಂದ್ರ ಚಹಾಲ್ ನಿಶ್ಚಿತಾರ್ಥ...!
ಇನ್ನೊಂದೆಡೆ ಜಸ್ಪ್ರೀತ್ ಬುಮ್ರಾ (Jasprit Bumrah) 50 ಪಂದ್ಯಗಳಲ್ಲಿ 59 ವಿಕೆಟ್ ಪಡೆದಿದ್ದಾರೆ. ಯಜುವೇಂದ್ರ ಚಾಹಲ್ (Yuzvendra Chahal ) ಈ ಸಾಧನಯನ್ನು ಕೇವಲ 44 ಪಂದ್ಯಗಳನ್ನು ಆಡಿ ಸಾಧಿಸಿದ್ದಾರೆ. ಈ ಫಾರ್ಮ್ಯಾಟ್ ನಲ್ಲಿ 25 ರನ್ಸ್ ಗಳನ್ನು ನೀಡಿ 6 ವಿಕೆಟ್ ಕಬಳಿಸಿರುವುದು ಅವರ ಸರ್ವೋತ್ತಮ ಸಾಧನೆ.
ಈ ಪಟ್ಟಿಯಲ್ಲಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 52 ವಿಕೆಟ್ ಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ಭುವನೇಶ್ವರ್ ಕುಮಾರ್ 41, ಕುಲದೀಪ್ ಯಾದವ್ 39 ಹಾಗೂ ರವಿಂದ್ರ ನಡೆಜಾ 39 ವಿಕೆಟ್ ಗಳನ್ನು ಪಡೆಯುವ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.
ಇದನ್ನು ಓದಿ- ಬಟ್ಟೆಯೊಳಗೆ ನೀನೋ ಅಥವಾ ನಿನ್ನೊಳಗೆ ಬಟ್ಟೆಯೂ- ಚಹಾಲ್ ಡ್ರೆಸ್ ಗೆ ರೋಹಿತ್ ಶರ್ಮಾ ಹೇಳಿದ್ದು ಹೀಗೆ...!
ಟಿ-20 ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಲಸಿತ್ ಮಲಿಂಗಾ ಅವರ ಹೆಸರಿನಲ್ಲಿದೆ. ಮಲಿಂಗಾ ಒಟ್ಟು 84 ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 107 ವಿಕೆಟ್ ಪಡೆದಿದ್ದರೆ. ಪಾಕಿಸ್ತಾನದ ಶಾಹೀದ್ ಆಫ್ರಿದಿ 98 ಹಾಗೂ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 92 ವಿಕೆಟ್ ಗಳನ್ನು ಪಡೆಯುವ ಮೂಲಕ ನಂತರದ ಸ್ಥಾನಗಳಲ್ಲಿದ್ದಾರೆ.
ಎರಡನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಒಟ್ಟು 194 ರನ್ಸ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟಿ-20 ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.