ಮ್ಯಾಕ್ಸ್ವೆಲ್ ಅಬ್ಬರದ ಶತಕಕ್ಕೆ ಸೋತು ಶರಣಾದ ಭಾರತ...!

ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೀ ೨೦ ಪಂದ್ಯದಲ್ಲಿ ಆಸಿಸ್ ತಂಡವು ಟೀಮ್ ಇಂಡಿಯಾ ವಿರುದ್ಧ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Nov 28, 2023, 11:47 PM IST
  • ಈ ಹಂತದಲ್ಲಿ ಕ್ರಿಸ್ ಗೆ ಬಂದ ಮ್ಯಾಕ್ಸ್ ವೆಲ್ 48 ಎಸೆತಗಳಲ್ಲಿ ಎಂಟು ಸಿಕ್ಸರ್ ಎಂಟು ಬೌಂಡರಿಗಳನ್ನು ಗಳಿಸುವ ಮೂಲಕ ಪಂದ್ಯದ ಚಿತ್ರವನ್ನೇ ಬದಲಿಸಿದರು
  • ಅಂತಿಮವಾಗಿ ಆಸೀಸ್ ತಂಡವು ಐದು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 225 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು
ಮ್ಯಾಕ್ಸ್ವೆಲ್ ಅಬ್ಬರದ ಶತಕಕ್ಕೆ ಸೋತು ಶರಣಾದ ಭಾರತ...! title=

ಗವಾಹಟಿ: ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೀ ೨೦ ಪಂದ್ಯದಲ್ಲಿ ಆಸಿಸ್ ತಂಡವು ಟೀಮ್ ಇಂಡಿಯಾ ವಿರುದ್ಧ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಆಸ್ಟ್ರೇಲಿಯಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಇದೇ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಟೀಮ್ ಇಂಡಿಯಾ ತಂಡವು ಕೇವಲ ಮೂರು ವಿಕೆಟ್ ಕಳೆದುಕೊಂಡು 20 ಓವರ್ ಗಳಲ್ಲಿ 222 ರನ್ ಗಳಿಸಿತು.

ಟೀಮ್ ಇಂಡಿಯಾದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಮಾಡಿದ ಋತುರಾಜ್ ಗಾಯಕ್ವಾಡ್ 57 ಎಸೆತಗಳಲ್ಲಿ ಏಳು ಸಿಕ್ಸರ್ ಹಾಗೂ 13 ಬೌಂಡರಿ ಗಳಿಸುವ ಮೂಲಕ ತಂಡವು 200 ರನ್ ಗಳ ಗಡಿ ದಾಟುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.ಇನ್ನೊಂದೆಡೆಗೆ ಸೂರ್ಯಕುಮಾರ್ ಯಾದವ್ 39,ತಿಲಕ್ ವರ್ಮಾ 31 ರನ್ ಗಳಿಸಿ ತಂಡಕ್ಕೆ ನೆರವಾದರು.

ಇನ್ನೊಂದೆಡೆಗೆ 223 ರನ್ ಗಳ ಬೃಹತ್ ರನ್ ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಒಂದು ಹಂತದಲ್ಲಿ 68 ರನ್ ಗಳಿಗೆ ಮೂರು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು, ಈ ಹಂತದಲ್ಲಿ ಕ್ರಿಸ್ ಗೆ ಬಂದ ಮ್ಯಾಕ್ಸ್ ವೆಲ್ 48 ಎಸೆತಗಳಲ್ಲಿ ಎಂಟು ಸಿಕ್ಸರ್ ಎಂಟು ಬೌಂಡರಿಗಳನ್ನು ಗಳಿಸುವ ಮೂಲಕ ಪಂದ್ಯದ ಚಿತ್ರವನ್ನೇ ಬದಲಿಸಿದರು.ಅಂತಿಮವಾಗಿ ಆಸೀಸ್ ತಂಡವು ಐದು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 225 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News