ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೊ ತಂಡವು ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು.ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
ಇದನ್ನೂ ಓದಿ : ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ
ಈ ಹಂತದಲ್ಲಿ ಜೊತೆಗೂಡಿದ ಋತುರಾಜ್ ಗಾಯಕ್ವಾಡ್ ಕೇವಲ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 108 ರನ್ ಗಳನ್ನು ಗಳಿಸಿದರು.ಇನ್ನೊಂದೆಡೆಗೆ ಶಿವಂ ದುಬೆ ಸಹ ಕೇವಲ 27 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಏಳು ಭರ್ಜರಿ ಸಿಕ್ಸರ್ ಗಳ ನೆರವಿನಿಂದಾಗಿ 66 ರನ್ ಗಳಿಸಿ ರನ್ ಔಟ್ ಗೆ ಬಲಿಯಾದರು.ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 210 ರನ್ ಗಳ ಬೃಹತ್ ಮೊತ್ತವನ್ನು ಪೂರೈಸಿತು.
Marcus Stoinis bags the Player of the Match Award for his Terrific TON in a match-winning cause 🏆
With that, #LSG moves to the 4th position in the Points Table 👏
Scorecard ▶️ https://t.co/MWcsF5FGoc#TATAIPL | #CSKvLSG | @MStoinis pic.twitter.com/lcMpOG9V9T
— IndianPremierLeague (@IPL) April 23, 2024
ಇದನ್ನೂ ಓದಿ : ಬಿಳಿಗಿರಿ ಬನದಲ್ಲಿ ಅದ್ದೂರಿಯಾಗಿ ನೆರವೇರಿದ ರಂಗನಾಥನ ರಥೋತ್ಸವ
ಈ ಗೆಲುವಿನ ಗುರಿಯನ್ನು ಬೆನ್ನತ್ತಿದ ಲಕ್ನೋ ತಂಡವು 19.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿಯನ್ನು ತಲುಪಿತು. ಲಕ್ನೋ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಸ್ಟೋನಿಸ್ ಕೇವಲ 63 ಆರು ಸಿಕ್ಸರ್ ಹಾಗೂ 13 ಬೌಂಡರಿಗಳ ನೆರವಿನಿಂದ 124 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.