ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಎಂಟು ವಿಕೆಟ್ ಗಳ ಸುಲಭ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಪಡೆ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 176 ರನ್ ಗಳ ಸ್ಪರ್ಧಾತ್ಮಕ ಮೊತ್ತವನ್ನು ಗಳಿಸಿತು. ಚೆನ್ನೈ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಕೇವಲ 40 ಎಸೆತಗಳಲ್ಲಿ ಅಜೇಯ 57 ರನ್ ಗಳನ್ನು ಗಳಿಸಿದರು. ಇದರಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳು ಸೇರಿದ್ದವು.
ಇನ್ನೊಂಡೆಗೆ ಅಜಿಂಕ್ಯಾ ರಹಾನೆ 36,ಮೊಯಿನ್ ಅಲಿ 30,ಧೋನಿ 28 ರನ್ ಗಳನ್ನು ಗಳಿಸುವ ಮೂಲಕ ತಂಡದ ಮೊತ್ತ 170 ರ ಗಡಿ ದಾಟಲು ನೆರವಾದರು.ಇನ್ನೊಂದೆಡೆಗೆ ಚೆನ್ನೈ ತಂಡವು ನೀಡಿದ 177 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಲಕ್ನೋ ತಂಡವು 19 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 180 ರನ್ ಗಳಿಸುವ ಮೂಲಕ ಗೆಲುವಿನ ಕೇಕೆಯನ್ನು ಹಾಕಿತು.
Leading from the front 🙌
Recap @klrahul's Captain's knock in a successful chase 👌👌
— IndianPremierLeague (@IPL) April 19, 2024
ಲಕ್ನೋ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಕೆ.ಎಲ್.ರಾಹುಲ್ ಕೇವಲ 53 ಎಸೆತಗಳಲ್ಲಿ ಮೂರು ಸಿಕ್ಸರ್ ಒಂಬತ್ತು ಬೌಂಡರಿಗಳ ನೆರವಿನಿಂದ 82 ರನ್ ಗಳಿಸಿ ಔಟಾದರು. ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಕ್ವಿಂಟನ್ ಡಿಕಾಕ್ 43 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ 54 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದರು.
ಕೊನೆಗೆ ನಿಕೊಲಸ್ ಪೂರಣ್ ಕೇವಲ 12 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳ ನೆರವಿನಿಂದ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.