ನವದೆಹಲಿ: ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ತಂಡವು ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಗುಜರಾತ್ ಟೈಟಾನ್ಸ್ ತಂಡವು ದೆಹಲಿಗೆ ಬ್ಯಾಟಿಂಗ್ ಅವಕಾಶ ನೀಡಿತು.ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 224 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.
ಇದನ್ನೂ ಓದಿ: ಈ ಬ್ಯಾಂಕ್ ಗೆ ಹೊಸ ಗ್ರಾಹಕರನ್ನು ಬರಮಾಡಿಕೊಳ್ಳದಂತೆ ನಿರ್ಬಂಧ ಹೇರಿದ ಆರ್ಬಿಐ..!
ದೆಹಲಿ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಶಬ್ ಪಂತ್ ಕೇವಲ 43 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 88 ರನ್ ಗಳನ್ನು ಗಳಿಸಿದರು.ಇನ್ನೊಂದೆಡೆಗೆ ಅಕ್ಸರ್ 43 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 66 ರನ್ ಗಳಿಸಿದರು.
Captain Rishabh Pant led from the front in style as he becomes the Player of the Match 🏆#DC move to no. 6️⃣ on the points table 👏
Scorecard ▶️ https://t.co/48M4ajbLuk#TATAIPL | #DCvGT pic.twitter.com/rSfz7BVylH
— IndianPremierLeague (@IPL) April 24, 2024
ಇದನ್ನೂ ಓದಿ: Meghalaya: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ, 3 ಮಂದಿಯ ಬಂಧನ
ಇನ್ನೊಂದೆಡೆಗೆ 224 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಸಾಯಿ ಸುದರ್ಶನ್ 65,ಡೇವಿಡ್ ಮಿಲ್ಲರ್ 55 ರನ್ ಗಳಿಸುವುದರ ಮೂಲಕ ತಂಡಕ್ಕೆ ಗೆಲುವಿನ ಆಸೆಯನ್ನು ಮೂಡಿಸಿದರು.ಅಂತಿಮವಾಗಿ ಗುಜರಾತ್ ತಂಡವು 220 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.