ICC Champions Trophy 2025: ಬುಧವಾರ ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನ ಹೀನಾಯ ಸೋಲು ಕಂಡಿದೆ. ತವರು ನೆಲದಲ್ಲಿಯೇ ನ್ಯೂಜಿಲ್ಯಾಂಡ್ ವಿರುದ್ಧ ಪಾಕ್ 60 ರನ್‌ಗಳಿಂದ ಸೋಲು ಕಂಡಿತು. ಟಾಸ್ ಗೆದ್ದ ಪಾಕ್ ನಾಯಕ ಮೊಹಮ್ಮದ್ ರಿಜ್ವಾನ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ನಿಗದಿತ ೫೦ ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 320 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.
ನ್ಯೂಜಿಲ್ಯಾಂಡ್ ಪರ ವಿಲ್ ಯಂಗ್ (107) ಮತ್ತು ಟಾಮ್ ಲ್ಯಾಥಮ್ (118) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಇನ್ನುಳಿದಂತೆ ಗ್ಲೆನ್ ಫಿಲಿಪ್ಸ್ (61) ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಪಾಕಿಸ್ತಾನ ಪರ ನಸೀಮ್ ಶಾ ಮತ್ತು ಹರಿಸ್ ರೌಫ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರೆ, ಅಬ್ರಾರ್ ಅಹ್ಮದ್ ಒಂದು ವಿಕೆಟ್ ಕಬಳಿಸಿದರು.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಒಮ್ಮೆ ಮಾತ್ರ ಭಾರತ vs ಬಾಂಗ್ಲಾದೇಶ ಮುಖಾಮುಖಿ; ಗೆದ್ದಿದ್ದು ಯಾರು ಗೊತ್ತಾ?
Clinical New Zealand down Pakistan in #ChampionsTrophy 2025 opener 👏#PAKvNZ 📝: https://t.co/E5MS83KLLA pic.twitter.com/JpcqY5664Q
— ICC (@ICC) February 19, 2025
ಬೃಹತ್ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಬೌಲರ್‌ಗಳು ಆರಂಭಿಕ ಆಘಾತ ನೀಡಿದರು. ಸೈಯದ್ ಶಕೀಲ್ ಮತ್ತು ನಾಯಕ ಮೊಹಮ್ಮದ್ ರಿಜ್ವಾನ್ ಬಹುಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಪಾಕ್ ಪರ ಬಾಬರ್ ಅಜಮ್ (64) ಮತ್ತು ಖುಷ್ದಿಲ್ ಷಾ (69) ಆಕರ್ಷಕ ಅರ್ಧಶತಕ ಸಿಡಿಸಿದರು. ಇನ್ನುಳಿದಂತೆ ಸಲ್ಮಾನ್ ಆಘಾ (42), ಫಖರ್ ಜಮಾನ್ (24) ರನ್ ಗಳಿಸಿದರು.
ಅಂತಿಮವಾಗಿ ಪಾಕಿಸ್ತಾನ 47.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 260 ರನ್ ಗಳಿಸಲಷ್ಟೇ ಶಕ್ತವಾಯಿತು. ನ್ಯೂಜಿಲ್ಯಾಂಡ್ ಪರ ಮಿಚೆಲ್ ಸ್ಯಾಂಟ್ನರ್ ಮತ್ತು ವಿಲಿಯಂ ಒರೂರ್ಕೆ ತಲಾ ಮೂರು ವಿಕೆಟ್ ಪಡೆದು ಮಿಂಚಿದರೆ, ಮ್ಯಾಟ್ ಹೆನ್ರಿ 2, ಮೈಕೆಲ್ ಬ್ರಾಸ್‌ವೆಲ್ ಮತ್ತು ನಾಥನ್ ಸ್ಮಿತ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ವೇಳೆ ಕ್ರಿಕೆಟ್ ಜಗತ್ತಿಗೆ ದೊಡ್ಡ ಆಘಾತ! ಮಾಜಿ ನಾಯಕ ನಿಧನ, ಶೋಕದಲ್ಲಿ BCCI...!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.