ICC Champions Trophy 2025: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಗ್ರೂಪ್ ʼAʼ 5ನೇ ಪಂದ್ಯದಲ್ಲಿ ಸಂಪ್ರದಾಯಿಕ ಎದುರಾಗಿ ಪಾಕಿಸ್ತಾನ vs ಟೀಂ ಇಂಡಿಯಾ ಮುಖಾಮುಖಿಯಾಗಿವೆ. ಪಾಕಿಸ್ತಾನಕ್ಕೆ ಟೀಂ ಇಂಡಿಯಾದ ಬೌಲರ್‌ಗಳು ಆರಂಭಿಕ ಆಘಾತ ನೀಡಿದ್ದಾರೆ.
ತಂಡದ ಮೊತ್ತ 41 ರನ್ ಆಗಿದ್ದಾಗ ಪಾಕ್ ತಂಡದ ಆರಂಭಿಕ ಆಟಗಾರ ಬಾಬರ್ ಆಜಮ್ (23) ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಕೆ.ಎಲ್.ರಾಹುಲ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದರ ಬೆನ್ನಲ್ಲೇ ಮತ್ತೊಬ್ಬ ಆಟಗಾರ ಇಮಾಮ್-ಉಲ್-ಹಕ್ (10) ಅಕ್ಸರ್ ಪಟೇಲ್‌ರಿಂದ ರನ್‌ಔಟ್‌ಗೆ ಬಲಿಯಾದರು.
ಇದನ್ನೂ ಓದಿ: Mohammed Shami : ಕ್ರಿಕೆಟ್‌ಗಾಗಿ ಮೊಹಮ್ಮದ್ ಶಮಿ ದೊಡ್ಡ ತ್ಯಾಗ..! ಇದಲ್ವಾ ದೇಶ ಭಕ್ತಿ ಅಂದ್ರೆ... ಗ್ರೇಟ್ ಗುರು ನೀನು..
ಸದ್ಯದ ಮಾಹಿತಿ ಪ್ರಕಾರ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನವು 11 ಓವರ್‌ಗಳಲ್ಲಿ 2 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 55 ರನ್ ಗಳಿಸಿದೆ. ಸದ್ಯ ಕ್ರೀಸ್‌ನಲ್ಲಿ ಸೌದ್ ಶಕೀಲ್ (4) ಮತ್ತು ನಾಯಕ ಮೊಹಮ್ಮದ್ ರಿಜ್ವಾನ್ (5) ರನ್ ಗಳಿಸಿ ಆಟವಾಡುತ್ತಿದ್ದಾರೆ.
Accuracy 🔥
Axar Patel with a direct hit to earn the second wicket for #TeamIndia 👏 🎯
Updates ▶️ https://t.co/llR6bWz3Pl#PAKvIND | #ChampionsTrophy | @akshar2026 pic.twitter.com/cHb0iS2kaQ
— BCCI (@BCCI) February 23, 2025
ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.
ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಬರ್ ಆಜಮ್, ಕಮ್ರಾನ್ ಗುಲಾಮ್, ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾನ್ ಮತ್ತು ಸೌದ್ ಶಕೀಲ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.