ಬೆಂಗಳೂರು: ಅಫ್ಘಾನಿಸ್ತಾನದ ವಿರುದ್ಧ ಬುಧವಾರ ನಡೆದ 3ನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದರು. ಅಫ್ಘನ್ ಬೌಲರ್‍ಗಳನ್ನು ಮನಬಂದಂತೆ ದಂಡಿಸಿದ ಹಿಟ್‍ಮ್ಯಾನ್ ಭರ್ಜರಿ ಶತಕ ಸಿಡಿಸಿದರು. ಈ ಪಂದ್ಯದಲ್ಲಿನ 2 ಸೂಪರ್ ಓವರ್‍ಗಳ ರೋಚಕ ರಸದೌತಣ ಕ್ರಿಕೆಟ್ ಪ್ರೇಮಿಗಳ ಮನರಂಜಿಸಿತು.
ಮೊದಲ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿಯೂ ಅಫ್ಘಾನಿಸ್ತಾನಕ್ಕೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ 20 ಓವರ್‍ಗಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್‍ಗಳ ಬೃಹತ್ ಮೊತ್ತವನ್ನು ಪೇರಿಸಿತು. ಆದರೆ ಭಾರತಕ್ಕೆ ತಕ್ಕ ತಿರುಗೇಟು ನೀಡಿದ ಅಫ್ಘಾನಿಸ್ತಾನ ಪಂದ್ಯ ಟೈ ಆಗುವವರೆಗೂ ಹೋರಾಟ ನಡೆಸಿತು. ಬಳಿಕ ನಡೆದ ಸೂಪರ್ ಓವರ್ ಕೂಡ ಟೈ ಆಯಿತು. ನಂತರ ನಡೆದ 2ನೇ ಸೂಪರ್ ಓವರ್‍ನಲ್ಲಿ ಭಾರತ ಗೆಲುವು ಸಾಧಿಸಿತು. ಈ ಒಂದೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ 3 ದಾಖಲೆಗಳನ್ನು ನಿರ್ಮಿಸಿದರು.
🎥 That Record-Breaking Moment! 🙌 🙌@ImRo45 notches up his 5⃣th T20I hundred 👏 👏
Follow the Match ▶️ https://t.co/oJkETwOHlL#TeamIndia | #INDvAFG | @IDFCFIRSTBank pic.twitter.com/ITnWyHisYD
— BCCI (@BCCI) January 17, 2024
ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್‍ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು. ಈ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಈ ದಾಂಡಿಗನೇ ಟಾಪ್ ಸ್ಕೋರರ್ : T20I ನಲ್ಲಿ ಹೀಗಿದೆ ಟೀಂ ಇಂಡಿಯಾ ರೆಕಾರ್ಡ್
ಕೊಹ್ಲಿ ದಾಖಲೆ ಮುರಿದ ರೋಹಿತ್!
Rohit Sharma 🤝 Rinku Singh
OuR’RR’ 😎 💪#TeamIndia | #INDvAFG | @IDFCFIRSTBank | @ImRo45 | @rinkusingh235 pic.twitter.com/SfKSl07JoE
— BCCI (@BCCI) January 17, 2024
ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ 1,570 ರನ್ ಗಳಿಸಿದ್ದರು. ಆದರೆ ರೋಹಿತ್ ಶರ್ಮಾ ಅಫ್ಘಾನಿಸ್ತಾನದ ವಿರುದ್ಧದ 3ನೇ ಪಂದ್ಯದಲ್ಲಿ ಈ ದಾಖಲೆಯನ್ನು ಮುರಿದರು. ಇದರೊಂದಿಗೆ ಭಾರತದ ಪರ ನಾಯಕನಾಗಿ ಅತ್ಯಧಿಕ ರನ್ ಗಳಿಸಿದ ಆಟಗಾರನೆಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ರೋಹಿತ್ 44 ರನ್ ಗಳಿಸುತ್ತಿದ್ದಂತೆ ಕೊಹ್ಲಿ ದಾಖಲೆ ಮುರಿದರು. ಹಿಟ್‍ಮ್ಯಾನ್ ನಾಯಕನಾಗಿ 1,647 ರನ್ ಗಳಿಸಿದ್ದಾರೆ.
ರಿಂಕು ಸಿಂಗ್ ಜೊತೆಯಾಟದ ದಾಖಲೆ!
ಯುವ ಆಟಗಾರ ರಿಂಕು ಸಿಂಗ್ ಜೊತೆ ರೋಹಿತ್ ಶರ್ಮಾ 5ನೇ ವಿಕೆಟ್ಗೆ ಅಜೇಯ 190 ರನ್ ಜತೆಯಾಟ ನಡೆಸಿರುವುದು ಮತ್ತೊಂದು ದಾಖಲೆಯಾಗಿದೆ. ಭಾರತ ಪರ ಅತ್ಯಧಿಕ ಜತೆಯಾಟ ನಡೆಸಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಇದಕ್ಕೂ ಮೊದಲು ಈ ದಾಖಲೆ ಸಂಜು ಸ್ಯಾಮ್ಸನ್ ಮತ್ತು ದೀಪಕ್ ಹೂಡಾರ ಹೆಸರಿನಲ್ಲಿತ್ತು. 2022ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸಂಜು ಮತ್ತು ಹೂಡಾ 176 ರನ್‍ಗಳ ಜತೆಯಾಟ ನಡೆಸಿದ್ದರು.
ಇದನ್ನೂ ಓದಿ: Rohit Sharma: ಕೇವಲ ಒಂದು ಗೆಲುವು… ಧೋನಿಯ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ
ಹಿಟ್‍ಮ್ಯಾನ್ ಶತಕದ ದಾಖಲೆ!
1⃣2⃣1⃣* Runs
6⃣9⃣ Balls
1⃣1⃣ Fours
8⃣ Sixes𝗥𝗮𝘃𝗶𝘀𝗵𝗶𝗻𝗴. 𝗥𝗲𝗰𝗼𝗿𝗱-𝗕𝗿𝗲𝗮𝗸𝗶𝗻𝗴. 𝗥𝗼𝗵𝗶𝘁 𝗦𝗵𝗮𝗿𝗺𝗮 ⚡️ 🔝 🙌
Relive #TeamIndia captain's sensational 5⃣th T20I hundred 🎥 🔽 #INDvAFG | @ImRo45 | @IDFCFIRSTBank
— BCCI (@BCCI) January 17, 2024
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 69 ಎಸೆತಗಳಿಂದ ಅಜೇಯ 121 ರನ್ ಗಳಿಸಿ ಭರ್ಜರಿ ಶತಕ ಸಿಡಿಸಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಮೊದಲ ಆಟಗಾರನೆಂಬ ದಾಖಲೆ ಬರೆದರು. ರೋಹಿತ್ 5 ಶತಕಗಳನ್ನು ಬಾರಿಸಿದ್ದರೆ, 4 ಶತಕ ಸಿಡಿಸಿರುವ ಸೂರ್ಯಕುಮಾರ್ ಯಾದವ್ 2ನೇ ಸ್ಥಾನದಲ್ಲಿ, 3 ಶತಕ ಬಾರಿಸಿರುವ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್ 3ನೇ ಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.