Suryakumar Yadav: ಶತಕ ಸಿಡಿಸಿ ಹಲವು ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Suryakumar Yadav Records: ಗುರುವಾರ (ಡಿ. 14) ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಸರಣಿಯ  ಮೂರನೇ ಹಾಗೂ ಕಡೆ ಪದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ 106 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. 

Written by - Yashaswini V | Last Updated : Dec 15, 2023, 12:19 PM IST
  • 3ನೇ ಟಿ20 ಪಂದ್ಯ ಗೆದ್ದ ಭಾರತಕ್ಕೆ
  • ಡ್ರಾದಲ್ಲಿ ಅಂತ್ಯಗೊಂಡ ಸರಣಿ
  • ಸೂರ್ಯಕುಮಾರ್‌ ಭರ್ಜರಿ ಶತಕ
Suryakumar Yadav: ಶತಕ ಸಿಡಿಸಿ ಹಲವು ದಾಖಲೆ ಬರೆದ ಸೂರ್ಯಕುಮಾರ್ ಯಾದವ್  title=

Suryakumar Yadav: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಭಾರತವು ಭರ್ಜರಿ ಜಯಗಳಿಸಿದೆ. ಎದುರಾಳಿ ದಕ್ಷಿಣ ಆಫ್ರಿಕಾ ತಂಡವನ್ನು 106 ರನ್‌ಗಳಿಂದ ಮಣಿಸಿದ ಭಾರತ ಹಿಂದಿನ ಪಂದ್ಯಕ್ಕೆ ಸೇಡು ತೀರಿಸಿಕೊಂಡಿದ್ದು ಅತಿ ದೊಡ್ಡ ಗೆಲುವು ಸಾಧಿಸಿದೆ. 

ಗುರುವಾರ (ಡಿ. 14) ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಸರಣಿಯ  ಮೂರನೇ ಹಾಗೂ ಕಡೆ ಪದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡವು ನಿಗದಿತ 20 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್‌ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ ದ.ಆಫ್ರಿಕಾ ತಂಡದ ಪರ ಯಾವುದೇ ಬ್ಯಾಟ್ಸ್‌ಮನ್‌ ಉತ್ತಮ ಪ್ರದರ್ಶನ ನೀಡದ ಕಾರಣ 13 ಒವರ್‌ಗಳಲ್ಲಿ ಎದುರಾಳಿ ತಂಡ ತನ್ನೆಲ್ಲಾ ವಿಕೆಟ್ ಒಪ್ಪಿಸಿ ಕೇವಲ 95 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು.  

ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್‌ ಯಾದವ್  ಕೇವಲ 56 ಎಸೆತಗಳಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್‌ ಸಹಿತ 100 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ತಮ್ಮ ನಾಲ್ಕನೇ ಟಿ20 ಶತಕವನ್ನು ಬಾರಿಸುವ ಮೂಲಕ ಈ  ದಾಖಲೆಯಲ್ಲಿ ಭಾರತದ ಘಟಾನುಘಟಿ ಬ್ಯಾಟ್ಸ್‌ಮನ್ ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರನ್ನೇ  ಹಿಂದಿಕ್ಕಿದ್ದಾರೆ. 

ಇದನ್ನೂ ಓದಿ- ಮಿಡಲ್ ಸ್ಟಂಪ್ ಕಿತ್ತು ನೆಲಕ್ಕೆ ಬಿದ್ದರೂ ನಾಟೌಟ್ ಎಂದ ಅಂಪೈರ್! ಬ್ಯಾಟ್ಸ್’ಮನ್ ಅದೃಷ್ಟವೋ.. ಬೌಲರ್ ದುರಾದೃಷ್ಟವೋ!!

ಸೂರ್ಯಕುಮಾರ್ ಯಾದವ್ ನಾಲ್ಕನೇ ಟಿ20 ಶತಕ: 
ಟಿ-20 ಕ್ರಿಕೆಟ್‌ನಲ್ಲಿ ತಮ್ಮ ನಾಲ್ಕನೇ ಸೆಂಚುರಿ ದಾಖಲಿಸಿದ ಸೂರ್ಯಕುಮಾರ್ ಯಾದವ್ ಟಿ20ಯಲ್ಲಿ  ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ವಿಶ್ವದ ಅಗ್ರ ಬ್ಯಾಟ್ಸ್‌ಮನ್ ಗಳಲ್ಲಿ ಒಬ್ಬರು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.  ಈ ಪಟ್ಟಿಯಲ್ಲಿ ಸೂರ್ಯಕುಮಾರ್ ಅವರಲ್ಲದೆ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್  ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಅಗ್ರಸ್ಥಾನದಲ್ಲಿದ್ದಾರೆ. ಈ ಇಬ್ಬರೂ ಕ್ರಿಕೆಟಿಗರೂ ಸಹ ಟಿ20 ಮಾದರಿಯಲ್ಲಿ 4-4 ಶತಕ ಗಳಿಸಿದ್ದಾರೆ. ಆದರೆ ಸೂರ್ಯ ಕುಮಾರ್‌ ಯಾದವ್‌ ಆಡಿದ 60 ಪಂದ್ಯಗಳಲ್ಲಿಯೇ 4 ಶತಕಗಳನ್ನು ದಾಖಲಿಸಿ ನಂಬರ್‌ 1 ಸ್ಥಾನಕ್ಕೆ ಏರಿದ್ದಾರೆ. ಅಷ್ಟೇ ಅಲ್ಲದೇ ಟಿ20 ಕ್ರಿಕಕೆ್‌ ನಲ್ಲಿ ನಾಯಕನಾಗಿ ಶತಕ ಭಾರಿಸದ ದಾಖಲೆಯಲ್ಲಿ ರೋಹಿತ್‌ ಶರ್ಮ ಹೆಸರಿನೊಂದಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ಧಾರೆ.

ಇದಲ್ಲದೆ, ಸೂರ್ಯಕುಮಾರ್ ಯಾದವ್ ವಿವಿಧ ದೇಶಗಳಲ್ಲಿ ಆಡಿದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವಾಸ್ತವವಾಗಿ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್, ನ್ಯೂಜಿಲೆಂಡ್, ಭಾರತ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕಗಳನ್ನು ಗಳಿಸಿದ್ದಾರೆ. 

ಇದನ್ನೂ ಓದಿ- ಮತ್ತೆ ಬರ್ತಿದ್ದಾರೆ ಜೂ. ಧೋನಿ… ವರ್ಷದ ಬಳಿಕ ತಂಡಕ್ಕೆ ಮರಳಿದ 26ರ ಹರೆಯದ ಈ ಆಟಗಾರನಿಗೆ ನಾಯಕತ್ವ!

ಕಿಂಗ್ ಕೊಹ್ಲಿಯನ್ನೂ ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್: 
ಶತಕದ ಜೊತೆಗೆ ಟಿ20 ಕೆರಿಯರ್‌ ನಲ್ಲಿ ಭಾರತದ ಪರ ಅತ್ಯಧಿಕ ಸಿಕ್ಸರ್‌ ಭಾರಿಸಿದ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ 2ನೇ ಸ್ಥಾನದಲ್ಲಿದ್ದಾರೆ. ಈ ಹಿಂದೆ ವಿರಾಟ್‌ ಕೊಹ್ಲಿ 117 ಸಿಕ್ಸ್‌ ಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದರು. ಆದರೆ ಸೂರ್ಯ ಕುಮಾರ್‌‌ 123 ಸಿಕ್ಸ್‌ಗಳನ್ನು ದಾಖಲಿಸಿ ಕಿಂಗ್ ಕೊಹ್ಲಿ ಅವರನ್ನೂ ಹಿಂದಿಕ್ಕಿದ್ದಾರೆ. ಇನ್ನು ವಿಶ್ವದ ಅತಿ ಹೆಚ್ಚು ಸಿಕ್ಸರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 182 ಸಿಕ್ಸ್‌ ಹೊಂದಿರುವ ರೋಹಿತ್‌ ಶರ್ಮ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ಧಾರೆ. ಸೂರ್ಯಗೆ ಕ್ರಿಸ್ ಗೇಲ್‌ ದಾಖಲೆ ಮುರಿಯಲು ಕೇವಲ 2 ಸಿಕ್ಸರ್‌ಗಳ ಅಗತ್ಯವಿದ್ದು, ಮುಂಬರುವ ದಿನಗಳಲ್ಲಿ ರೋಹಿತ್‌ ಶರ್ಮ ಅವರ ದಾಖಲೆಯನ್ನು ಮುರಿಯುವ ಸಾಧ್ಯತೆಯು ಇದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News