India vs Bangladesh: ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ನಾಳೆ ಅಂದರೆ ಫೆಬ್ರವರಿ 20ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಪ್ರಾರಂಭಿಸಲಿದೆ. ಗುರುವಾರ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಏತನ್ಮಧ್ಯೆ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಪಂದ್ಯಗಳಲ್ಲಿ ಹೆಡ್ ಟು ಹೆಡ್ ಅಂಕಿಅಂಶಗಳ ಬಗ್ಗೆ ಹೇಳುವುದಾದರೆ, ಟೀಂ ಇಂಡಿಯಾವೇ ಮಹತ್ವದ ಸಾಧನೆ ಮಾಡಿದೆ. ಆದರೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮಾತ್ರ ಗಮನಹರಿಸಿದರೆ, ಉಭಯ ತಂಡಗಳ ನಡುವೆ ಕೇವಲ ಒಂದೇ ಒಂದು ಪಂದ್ಯ ಮಾತ್ರ ನಡೆದಿದೆ. ಈ ಪಂದ್ಯದಲ್ಲಿ ಯಾರು ಗೆಲುವು ಸಾಧಿಸಿದರು? ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
2017ರ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ vs ಬಾಂಗ್ಲಾದೇಶ ಮುಖಾಮುಖಿ!
2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಸುಲಭವಾಗಿ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆಯು ಬಾಂಗ್ಲಾದೇಶವನ್ನು ಎದುರಿಸಿತ್ತು. ಅಂದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 264 ರನ್‌ಗಳನ್ನು ಮಾತ್ರ ಗಳಿಸಿತ್ತು. ಇದು ದೊಡ್ಡ ಸ್ಕೋರ್ ಏನೂ ಆಗಿರಲಿಲ್ಲ. ಆದರೆ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವುದು ಮಾತ್ರವಲ್ಲದೆ ಎದುರಾಳಿ ತಂಡವನ್ನ ಪುಡಿಪುಡಿ ಮಾಡಿತ್ತು. ಹೌದು, ಭಾರತ ತಂಡ ಕೇವಲ 40.1 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟದಲ್ಲಿ ಈ ಗುರಿಯನ್ನು ತಲುಪಿತ್ತು. ಅಂದರೆ ಟೀಂ ಇಂಡಿಯಾ ಈ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತ್ತು.
ಇದನ್ನೂ ಓದಿ: GG ವಿರುದ್ಧದ ಸೆಣಸಾಟದಲ್ಲಿ MIಗೆ ಜಯ - 5 ವಿಕೆಟ್ ನಿಂದ ಮೊದಲ ಗೆಲುವು ಸಾಧಿಸಿದ ಮುಂಬೈ
ರೋಹಿತ್ ಶರ್ಮಾ ಅಜೇಯ ಶತಕ; ಕೊಹ್ಲಿ-ಧವನ್ ಮಿಂಚು!!
ಆ ಪಂದ್ಯದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಜೇಯ 123 ರನ್ ಗಳಿಸಿದ್ದರು. 129 ಎಸೆತಗಳನ್ನು ಎದುರಿಸಿದ್ದ ಹಿಟ್‌ಮ್ಯಾನ್ 15 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದ್ದರು. ಈ ಪಂದ್ಯದಲ್ಲಿ ಶಿಖರ್ ಧವನ್ 34 ಎಸೆತಗಳಲ್ಲಿ 46 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ನಂತರ ಆಗಿನ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ 78 ಎಸೆತಗಳಲ್ಲಿ 96 ರನ್ ಗಳಿಸಿ ಮಿಂಚಿದ್ದರು. ಬಾಂಗ್ಲಾದೇಶ ಉತ್ತಮ ಸ್ಕೋರ್ ಗಳಿಸಲಿಲ್ಲ, ಇಲ್ಲದಿದ್ದರೆ ವಿರಾಟ್ ಕೊಹ್ಲಿಗೂ ಶತಕ ಗಳಿಸುವ ಅವಕಾಶವಿತ್ತು.
ಭಾರತ vs ಬಾಂಗ್ಲಾದೇಶದ ಹೆಡ್ ಟು ಹೆಡ್ ಅಂಕಿ ಅಂಶಗಳು
ಈ ಪಂದ್ಯದ ನಂತರ ಭಾರತ vs ಬಾಂಗ್ಲಾದೇಶ ತಂಡಗಳು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದಕ್ಕೆ ಕಾರಣ ಕಳೆದ ಏಳೆಂಟು ವರ್ಷಗಳಿಂದ ಈ ಪಂದ್ಯಾವಳಿ ನಡೆಯದೇ ಇರುವುದು. ಉಭಯ ತಂಡಗಳ ಏಕದಿನ ಪಂದ್ಯಗಳ ಮುಖಾಮುಖಿಯ ಅಂಕಿ ಅಂಶ ನೋಡಿದ್ರೆ ಭಾರತವೇ ಮೇಲುಗೈ ಸಾಧಿಸಿದೆ. ಈ ಎರಡೂ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ 41 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಭಾರತ 32 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ 8 ಪಂದ್ಯಗಳನ್ನು ಗೆದ್ದಿದೆ. ನಾಳೆ ನಡೆಯಲಿರುವ ದುಬೈ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದು, ಭಾರತವೇ ಎರಡರಲ್ಲೂ ಗೆಲುವು ಸಾಧಿಸಿದೆ. ಗುರುವಾರ ನಡೆಯಲಿರುವ ಪಂದ್ಯದಲ್ಲಿಯೂ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಲು ಸಜ್ಜಾಗಿದೆ.
ಇದನ್ನೂ ಓದಿ: ಕ್ರೀಡಾಭಿಮಾನಿಗಳಿಗೆ ಬಿಗ್ ಸರ್ಪ್ರೈಸ್! ಐಪಿಎಲ್‌ಗೆ ಮರಳಿದ ಟೀಂ ಇಂಡಿಯಾ ಆಟಗಾರ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.