ಡೆಹರಾಡೂನ್ : ಭಾರತೀಯ ಕ್ರಿಕೆಟ್ ಆಟಗಾರ ಮೊಹಮ್ಮದ್ ಶಮಿ ಅವರು ಡೆಹರಾಡೂನ್'ನಿಂದ ದೆಹಲಿಗೆ ತೆರಳುವ ಸಂದರ್ಭದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ತಲೆಗೆ ಹೊಲಿಗೆಗಳನ್ನು ಹಾಕಲಾಗಿದೆ.
ಶಮಿ ಅವರ ಕಾರನ್ನು ಟ್ರಕ್ಕೊಂದು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಶಮಿ ಅವರ ಬಲ ಕಣ್ಣಿನ ಸುತ್ತಲೂ ಗಾಯಗಳಾಗಿದ್ದು, ಕೂಡಲೇ ಅವರನ್ನು ಡೆಹರಾಡೂನ್'ನ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿದೆ ಡಾ.ತರುಣ್ ಜೈನ್ ಅವರು ಶಮಿಗೆ ಚಿಕಿತ್ಸೆ ನೀಡಿದ್ದಾರೆ.
ಮೊಹಮ್ಮದ್ ಶಮಿ ವಿರುದ್ಧ ಅವರ ಪತ್ನಿ ಹಸೀನ್ ಜಹಾನ್ ಅವರು ಅನೈತಿಕ ಸಂಬಂಧ, ಕಿರುಕುಳ ಹಾಗೂ ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದರು. ಆದರೆ, ಈ ಎಲ್ಲಾ ಆರೋಪಗಳನ್ನು ಶಮಿ ತಳ್ಳಿ ಹಾಕಿದ್ದರು.