ನವದೆಹಲಿ: ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿ(Indian Premier League 2022)ಯ ಮೊದಲ ಪಂದ್ಯದಲ್ಲಿಯೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿತ್ತು. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ(MS Dhoni) ಅವರು ರವೀಂದ್ರ ಜಡೇಜಾರಿಗೆ ನಾಯಕತ್ವದ ಜವಾಬ್ದಾರಿ ವಹಿಸಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿಯೇ ಜಡೇಜಾ ಪಡೆಗೆ ಸೋಲಾಗಿದ್ದು ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಹೀಗಾಗಿ ಇಂದು ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಲಕ್ನೋ ಮೇಲೆ ಸವಾರಿ ಮಾಡಲು ಚೆನ್ನೈ ಸಜ್ಜಾಗಿದೆ.
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ IPL 2022 7ನೇ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್(KL Rahul) ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ಸೆಣಸಾಟ ನಡೆಯಲಿದೆ. ಎರಡೂ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಗಾಯಗೊಂಡ ಹುಲಿಯಂತಾಗಿವೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲಿವೆ. ಲಕ್ನೋಗೆ ಹೋಲಿಸಿಕೊಂಡರೆ ಚೆನ್ನೈ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿದೆ. ಹೀಗಾಗಿ ಜಡೇಜಾ ಪಡೆ ಗೆಲ್ಲುವ ಉತ್ಸಾಹದಲ್ಲಿದೆ.
ಇದನ್ನೂ ಓದಿ: Ab de Villiers : ವಿರಾಟ್ ಕೊಹ್ಲಿ ಬಗ್ಗೆ ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್!
ಎಂಎಸ್ ಧೋನಿ, ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ ಮತ್ತು ಆಲ್‍ರೌಂಡರ್ ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ ಚೆನ್ನೈನ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಅದೇ ರೀತಿ ಚೆನ್ನೈ ಬೌಲಿಂಗ್ ಪಡೆ ಕೂಡ ತುಂಬಾ ಚೆನ್ನಾಗಿದೆ. ಲಕ್ನೋ(Lucknow Super Giants)ದಲ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್‍ಗಳು ಮತ್ತು ಬೌಲರ್ ಗಳಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿಯೇ ಕಳಪೆ ಪ್ರದರ್ಶನ ತೋರಿದ್ದರಿಂದ ಸೋಲು ಕಾಣಬೇಕಾಯಿತು. ಎಲ್ಲಾ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಿದರೆ ಚೆನ್ನೈಗೆ ಸವಾಲು ಒಡ್ಡಬಹುದು. ಕಳೆದ ಪಂದ್ಯಗಳಲ್ಲಿ ಮಾಡಿದ ತಪ್ಪುಗಳನ್ನು ತಿದ್ದುಕೊಂಡು ರಾಹುಲ್(KL Rahul)ಪಡೆ ಕಣಕ್ಕಿಳಿಯಬೇಕಿದೆ.
ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:
ಲಕ್ನೋ ಸೂಪರ್ ಜೈಂಟ್ಸ್: ಕೆ.ಎಲ್.ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೆವಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಅವೇಶ್ ಖಾನ್, ಶಹಬಾಜ್ ನದೀಮ್, ಮನನ್ ವೋಹ್ರಾ, ಅಂಕಿ ರಾಜ್‌ಪೂತ್, ಕೃಷ್ಣಪ್ಪ ಗೌತಮ್, ಕರಣ್ ಶರ್ಮಾ, ಮಯಾಂಕ್ ಯಾದವ್
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ (ನಾಯಕ), ಎಂ.ಎಸ್.ಧೋನಿ (ವಿಕೆಟ್ ಕೀಪರ್), ರುತುರಾಜ್ ಗಾಯಕ್‌ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಶಿವಂ ದುಬೆ, ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನೆರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್.ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆ.ಎಂ.ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್
ಇದನ್ನೂ ಓದಿ: IPL 2022: ಆರ್‌ಸಿಬಿಗೆ ಸಿಕ್ಕಿದ್ದಾರೆ ಧೋನಿಯಂತಹ ಮ್ಯಾಚ್ ಫಿನಿಶರ್, ಈ ಧೀಮಂತ ಆಟಗಾರ ಯಾರು ಗೊತ್ತೇ!
ಐಪಿಎಲ್ ಪಂದ್ಯ: 07
ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್
ದಿನಾಂಕ: ಮಾರ್ಚ್ 31, ಗುರುವಾರ
ಸ್ಥಳ: ಮುಂಬೈನ ಬ್ರಬೋರ್ನ್ ಸ್ಟೇಡಿಯಂ
ಸಮಯ: ಸಂಜೆ 7.30ಕ್ಕೆ
==========================================================================================
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.