IPL 2023: ಆಕಾಶ್ ದಾಳಿಗೆ ಲಕ್ನೋ ತತ್ತರ, ಮುಂಬೈ ಇಂಡಿಯನ್ಸ್ ಗೆ 81 ಗಳ ಭರ್ಜರಿ ಗೆಲುವು 

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 81 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : May 25, 2023, 12:08 AM IST
  • ಮುಂಬೈ ಇಂಡಿಯನ್ಸ್ ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 182 ರನ್ ಗಳನ್ನು ಗಳಿಸಿತು.
  • ಗ್ರೀನ್ 41, ಸೂರ್ಯಕುಮಾರ್ ಯಾದವ್ 33 ಹಾಗೂ ತಿಲಕ್ ವರ್ಮಾ 26 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
IPL 2023: ಆಕಾಶ್ ದಾಳಿಗೆ ಲಕ್ನೋ ತತ್ತರ, ಮುಂಬೈ ಇಂಡಿಯನ್ಸ್ ಗೆ 81 ಗಳ ಭರ್ಜರಿ ಗೆಲುವು  title=

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 81 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 182 ರನ್ ಗಳನ್ನು ಗಳಿಸಿತು. ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಗ್ರೀನ್ 41, ಸೂರ್ಯಕುಮಾರ್ ಯಾದವ್ 33 ಹಾಗೂ ತಿಲಕ್ ವರ್ಮಾ 26 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ಇದನ್ನೂ ಓದಿ : ಮಿತಿ ಮೀರಿದ ಬೋಲ್ಡ್‌ ಲುಕ್‌.. ದಿಶಾ ಪಟಾನಿ ಪ್ರೈವೆಟ್‌ ಪಾರ್ಟ್‌ ಕಂಡು ಹುಚ್ಚೆದ್ದು ಕುಣಿದ ಫ್ಯಾನ್ಸ್‌.!

ಮುಂಬೈ ತಂಡವು ನೀಡಿದ 183 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಕಾಶ್ ಮಾದ್ವಾಲ್ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು. ಅವರು 3.3 ಓವರ್ ಗಳಲ್ಲಿ ಕೇವಲ ಐದು ರನ್ ಗಳನ್ನು  ನೀಡಿ ಐದು ವಿಕೆಟ್ ಗಳನ್ನು ಕಬಳಿಸುವ ಮೂಲಕ ಲಕ್ನೋ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

ಲಕ್ನೋ ತಂಡದ ಪರವಾಗಿ ಮಾರ್ಕಸ್ ಸ್ಟೋನಿಸ್ 40 ರನ್ ಗಳಿಸಿದ್ದೆ ಅಧಿಕವಾಯಿತು. ಉಳಿದ ಯಾವ ಆಟಗಾರನು ಸಹಿತ  20 ರ ಗಡಿಯನ್ನು ದಾಟುವಲ್ಲಿ ವಿಫಲರಾದರು.ಆ ಮೂಲಕ ಮುಂಬೈ ಇಂಡಿಯನ್ಸ್ ತಂಡವು 81 ರನ್ ಗಳ ಭಾರಿ ಅಂತರಿಂದ ಗೆಲುವನ್ನು ಸಾಧಿಸಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News