Yashasvi Jaiswal and Yujuvendra Chahal IPL Historic Records: ಐಪಿಎಲ್ ನಲ್ಲಿ ಇಬ್ಬರು ಭಾರತೀಯ ಕ್ರಿಕೆಟಿಗರು ಅಪರೂಪದ ದಾಖಲೆಗಳನ್ನು ಬರೆದಿದ್ದು, ಈ ರೆಕಾರ್ಡ್ ಅನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನಬಹುದು. ಈಗ ವಿಶ್ವದ ಯಾವುದೇ ಆಟಗಾರ ಈ ದಾಖಲೆಗಳನ್ನು ಮುರಿಯಲು ಕಷ್ಟಪಡಬೇಕಾಗುತ್ತದೆ. ಅಷ್ಟೇ ಅಲ್ಲದೆ, ಈ ದಾಖಲೆಗಳನ್ನು ಮುರಿಯಲು ಸುಮಾರು 9 ರಿಂದ 10 ವರ್ಷಗಳು ಬೇಕಾಗಬಹುದು. ಐಪಿಎಲ್ ಜಗತ್ತಿನಲ್ಲಿ ನಿರ್ಮಿಸಲ್ಪಟ್ಟ ಅಂತಹ ಶ್ರೇಷ್ಠ ದಾಖಲೆಗಳ ಬಗ್ಗೆ ನೋಡೋಣ:
ಇದನ್ನೂ ಓದಿ: Budh Mahadasha 2023: 17 ವರ್ಷಗಳವರೆಗೆ ಬುಧ ಮಹಾದಶಾ: ಈ ಜನರಿಗೆ ಇರುವುದಿಲ್ಲ ಸಂಕಷ್ಟ; ಸುಖದ ಸುಪ್ಪತ್ತಿಗೆ ಖಚಿತ!
ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಗಳು:
ರಾಜಸ್ಥಾನ್ ರಾಯಲ್ಸ್ ಮತ್ತು ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಕೊನೆಯ ದಿನವೇ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು 187 ವಿಕೆಟ್ ಪಡೆದ ದಾಖಲೆ ಯುಜ್ವೇಂದ್ರ ಚಹಾಲ್ ಹೆಸರಿನಲ್ಲಿದೆ. 2013 ರಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡಿದ ಅವರು, ಈ ಹಂತವನ್ನು ತಲುಪಲು ಸುಮಾರು 10 ವರ್ಷಗಳು ತೆಗೆದುಕೊಂಡಿದ್ದಾರೆ.
ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ ಯುಜುವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಯುಜ್ವೇಂದ್ರ ಚಹಾಲ್ ಐಪಿಎಲ್ ನಲ್ಲಿ 183 ವಿಕೆಟ್ ಗಳನ್ನು ಪಡೆದಿದ್ದ ಶ್ರೇಷ್ಠ ಆಲ್ ರೌಂಡರ್ ಡ್ವೇನ್ ಬ್ರಾವೋ ಅವರ ದಾಖಲೆಯನ್ನು ಮುರಿದಿದ್ದಾರೆ. 143 ಐಪಿಎಲ್ ಪಂದ್ಯಗಳಲ್ಲಿ 187 ವಿಕೆಟ್ ಪಡೆಯುವ ಮೂಲಕ ಇತಿಹಾಸವನ್ನೇ ರಚಿಸಿದ್ದಾರೆ. ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ 161 ಪಂದ್ಯಗಳಲ್ಲಿ 183 ವಿಕೆಟ್ ಪಡೆದಿದ್ದಾರೆ. ಇದೀಗ ಯುಜುವೇಂದ್ರ ಚಹಾಲ್ ಐಪಿಎಲ್ ನಲ್ಲಿ ಗರಿಷ್ಠ 187 ವಿಕೆಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 183 ವಿಕೆಟ್ ಗಳೊಂದಿಗೆ ಯುಜ್ವೇಂದ್ರ ಚಹಾಲ್ ನಂತರ ಡ್ವೇನ್ ಬ್ರಾವೋ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಮತ್ತೊಬ್ಬ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ 174 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಅತಿ ಕಡಿಮೆ ಎಸೆತಗಳಲ್ಲಿ ಅರ್ಧಶತಕ!
ರಾಜಸ್ಥಾನ್ ರಾಯಲ್ಸ್ ಮತ್ತು ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಗಳಿಸಿದ ವಿಶ್ವದ ಏಕೈಕ ಬ್ಯಾಟ್ಸ್’ಮನ್ ಎನಿಸಿಕೊಂಡಿದ್ದಾರೆ. ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 13 ಎಸೆತಗಳಲ್ಲಿ 50 ರನ್ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್ ನಲ್ಲಿ ಇದುವರೆಗೆ ಯಾವುದೇ ಬ್ಯಾಟ್ಸ್ ಮನ್ ಗೆ ಇಂತಹ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಇದಕ್ಕೂ ಮುನ್ನ ಐಪಿಎಲ್ ನಲ್ಲಿ ಪ್ಯಾಟ್ ಕಮಿನ್ಸ್ ಮತ್ತು ಕೆಎಲ್ ರಾಹುಲ್ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
ಇದನ್ನೂ ಓದಿ: ಬೇಸಿಗೆಯಲ್ಲಿ ಪುದೀನ ಬಳಕೆಯಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನ
1 ಓವರ್‌ನಲ್ಲಿ 26 ರನ್:
ಯಶಸ್ವಿ ಜೈಸ್ವಾಲ್ ಐಪಿಎಲ್ ಇನ್ನಿಂಗ್ಸ್ ನ ಮೊದಲ ಓವರ್ ನಲ್ಲಿ 26 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ನ ಮೊದಲ ಓವರ್ ನಲ್ಲಿ ಯಶಸ್ವಿ ಜೈಸ್ವಾಲ್ ನಿತೀಶ್ ರಾಣಾ ಅವರ 6 ಎಸೆತಗಳಲ್ಲಿ 26 ರನ್ ಗಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ