CSK vs KKR Playing 11: IPL-2023ರ ಇಂದಿನ ಪಂದ್ಯವು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಐಕಾನಿಕ್ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನಾಯಕ ನಿತೀಶ್ ರಾಣಾ ಟಾಸ್ ಗೆದ್ದು ಚೆನ್ನೈ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಈ ಮಧ್ಯೆ, ಪ್ಲೇಯಿಂಗ್-11 ರಲ್ಲಿ ಅವಕಾಶ ಸಿಗದ ಸಿಎಸ್’ಕೆ ತಂಡದ ಓರ್ವ ಆಟಗಾರನಿದ್ದಾನೆ.
ಇದನ್ನೂ ಓದಿ: Team India ನಾಯಕ ರೋಹಿತ್ ಶರ್ಮಾ ಪ್ರತೀ ಪಂದ್ಯಕ್ಕೆ ಪಡೆಯೋ ಸಂಭಾವನೆ ಎಷ್ಟು ಗೊತ್ತಾ? ತಿಳಿದರೆ ಶಾಕ್ ಆಗೋದು ಪಕ್ಕಾ
ಎರಡು ಬಾರಿ ವಿಜೇತ ಕೋಲ್ಕತ್ತಾ ತಂಡದ ನಾಯಕ ನಿತೀಶ್ ರಾಣಾ ತವರು ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಗೆದ್ದ ನಂತರ ಮಾತನಾಡಿದ ಅವರು, 'ನಾವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತೇವೆ. ಪಿಚ್ ಚೆನ್ನಾಗಿ ಕಾಣುತ್ತಿದೆ. ಇಬ್ಬನಿ ಇದ್ದರೆ ಗುರಿಯನ್ನು ಬೆನ್ನಟ್ಟುವುದು ಉತ್ತಮ. ಮೂರೂ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದರೆ ಫಲಿತಾಂಶ ನಮ್ಮ ಪರವಾಗಲಿದೆ. ಇನ್ನು ಡೇವಿಡ್ ವೈಸ್ ಬದಲಿಗೆ ನಾರಾಯಣ್ ಜಗದೀಶ್ ಮತ್ತು ಲಿಟನ್ ದಾಸ್ ಬದಲಿಗೆ ಮನದೀಪ್ ಸಿಂಗ್’ಗೆ ಅವಕಾಶ ನೀಡಲಾಗಿದೆ” ಎಂದು ಹೇಳಿದ್ದಾರೆ.
ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್’ನ ಆಟಗಾರನೊಬ್ಬ ಸತತ 7 ನೇ ಪಂದ್ಯದಲ್ಲಿ ಪ್ಲೇಯಿಂಗ್-11ರ ಭಾಗವಾಗಲು ಸಾಧ್ಯವಾಗದೆ ಎದೆಗುಂದಿದ್ದಾನೆ. 19 ವರ್ಷದ ನಿಶಾಂತ್ ಸಿಂಧು ಹರಿಯಾಣ ನಿವಾಸಿ. ನಿಶಾಂತ್ ದೇಶೀಯ ಕ್ರಿಕೆಟ್’ನಲ್ಲಿ ಹರಿಯಾಣವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತದ ಅಂಡರ್-19 ತಂಡದ ಭಾಗವಾಗಿದ್ದಾರೆ. ಈ ಎಡಗೈ ಆಲ್‌ರೌಂಡರ್ ಇದುವರೆಗೆ 12 ಪ್ರಥಮ ದರ್ಜೆ ಪಂದ್ಯಗಳಲ್ಲಿ 2 ಶತಕ ಮತ್ತು 3 ಅರ್ಧ ಶತಕಗಳ ಸಹಾಯದಿಂದ 726 ರನ್ ಗಳಿಸಿದ್ದಾರೆ. ಇದಲ್ಲದೇ 25 ವಿಕೆಟ್ ಕಬಳಿಸಿದ್ದಾರೆ. ಆದರೆ ಈ ಆಟಗಾರನಿಗೆ ಧೋನಿ ಅವಕಾಶ ಕೊಡುತ್ತಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಿತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ವಿಕೆಟ್ ಕೀಪರ್), ಮತಿಶ ಪತಿರಾನ, ತುಷಾರ್ ದೇಶಪಾಂಡೆ ಮತ್ತು ಮಹಿಷ್ ತೀಕ್ಷಣ.
ಇದನ್ನೂ ಓದಿ: Wrestling Federation News: ಕುಸ್ತಿ ಸಂಘದ ಅಧ್ಯಕ್ಷರ ವಿರುದ್ಧ ಮತ್ತೆ ತೊಡೆತಟ್ಟಿದ ಕುಸ್ತಿಪಟುಗಳು, ಲೈಂಗಿಕ ಕಿರುಕುಳದ ಆರೋಪ
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಎನ್ ಜಗದೀಶನ್ (WK), ಜೇಸನ್ ರಾಯ್, ನಿತೀಶ್ ರಾಣಾ (c), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಸುಯಶ್ ಶರ್ಮಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.