Rishab Pant and Shikhar Dhawan: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮತ್ತು ಆರಂಭಿಕ ಆಟಗಾರ ಶಿಖರ್ ಧವನ್ ಅವರ ಕ್ರಿಕೆಟ್ ಜೀವನದ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಈ ಮಾಜಿ ಪಾಕಿಸ್ತಾನಿ ಕ್ರಿಕೆಟಿಗನ ಪ್ರಕಾರ, ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಮತ್ತು ಶಿಖರ್ ಧವನ್ ಬದಲಿಗೆ ಈ ಒಬ್ಬ ಆಟಗಾರನೇ ಸ್ಥಾನ ತುಂಬುತ್ತಾನೆ. ಇದೀಗ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಮತ್ತು ಶಿಖರ್ ಧವನ್ ಸ್ಥಾನಕ್ಕೆ ಅಪಾಯವಿದೆ ಎಂದು ದೊಡ್ಡ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Ishan Kishan: ವೃತ್ತಿಜೀವನ ಅಂತ್ಯಗೊಳ್ಳುವ ಭೀತಿ ಎದುರಿಸಿದ್ದ ಇಶಾನ್ ಕಿಶನ್..!
ಟೀಂ ಇಂಡಿಯಾದಲ್ಲಿ ರಿಷಭ್ ಪಂತ್ ಮತ್ತು ಶಿಖರ್ ಧವನ್ ಸ್ಥಾನ ಕಸಿದುಕೊಂಡ ಈ ಆಟಗಾರ!
ಇಶಾನ್ ಕಿಶನ್ ಕಾರಣದಿಂದ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಮತ್ತು ಶಿಖರ್ ಧವನ್ ಸ್ಥಾನಕ್ಕೆ ಧಕ್ಕೆ ಉಂಟಾಗಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ. ಶನಿವಾರ ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ 131 ಎಸೆತಗಳಲ್ಲಿ 210 ರನ್ ಬಾರಿಸಿದ್ದರು. ಇಶಾನ್ ಕಿಶನ್ ಏಕದಿನದಲ್ಲಿ ದ್ವಿಶತಕ ಸಿಡಿಸಿದ ಭಾರತದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.
ಇಶಾನ್ ಕಿಶನ್ ಅವರ ಈ ಕಿಲ್ಲರ್ ಇನ್ನಿಂಗ್ಸ್‌ನಿಂದಾಗಿ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿರುವ ರಿಷಬ್ ಪಂತ್ ಮತ್ತು ಶಿಖರ್ ಧವನ್ ಸ್ಥಾನಕ್ಕೆ ಅಪಾಯ ಎದುರಾಗಿದೆ. ಇದೀಗ ಇಶಾನ್ ಕಿಶನ್ ಗೆ ಟೀಂ ಇಂಡಿಯಾದಲ್ಲಿ ನಿರಂತರ ಅವಕಾಶಗಳನ್ನು ನೀಡಬೇಕಾಗಿದೆ ಎಂದು ಸಲ್ಮಾನ್ ಬಟ್ ಹೇಳಿದ್ದಾರೆ. ಇಶಾನ್ ಕಿಶನ್‌ಗಿಂತ ಮೊದಲು ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ದಾಖಲೆ ವೀರೇಂದ್ರ ಸೆಹ್ವಾಗ್, ಸಚಿನ್ ತೆಂಡೂಲ್ಕರ್ ಮತ್ತು ರೋಹಿತ್ ಶರ್ಮಾ ಅವರ ಹೆಸರಿನಲ್ಲಿದೆ.
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳು
ರೋಹಿತ್ ಶರ್ಮಾ - 264
ಮಾರ್ಟಿನ್ ಗಪ್ಟಿಲ್ - 237*
ವೀರೇಂದ್ರ ಸೆಹ್ವಾಗ್ - 219
ಕ್ರಿಸ್ ಗೇಲ್ - 215
ಇಶಾನ್ ಕಿಶನ್ - 210
ಫಖರ್ ಜಮಾನ್ - 210*
ರೋಹಿತ್ ಶರ್ಮಾ - 209
ರೋಹಿತ್ ಶರ್ಮಾ - 208*
ಸಚಿನ್ ತೆಂಡೂಲ್ಕರ್ - 200*
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.