IND vs AUS 1st ODI Match: ಮಾರ್ಚ್ 17 ರಿಂದ ಭಾರತ ಮತ್ತು ಆಸ್ಟ್ರೇಲಿಯ ನಡುವೆ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡದ ಸಾರಥ್ಯ ವಹಿಸುವುದಿಲ್ಲ. ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಿರುವಾಗ ಅವರ ಜಾಗದಲ್ಲಿ ಶುಭ್‌ಮನ್ ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬುದು ಬಹಿರಂಗವಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಗಿಲ್’ಗೆ ಆರಂಭಿಕ ಜೊತೆಗಾರ ಯಾರು ಎಂಬುದನ್ನು ಪಂದ್ಯಕ್ಕೂ ಮುನ್ನ ಪಾಂಡ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನ ಏಕದಿನ ಕ್ರಿಕೆಟ್ ಜೀವನ ಅಂತ್ಯ!
ಕುಟುಂಬದ ಬದ್ಧತೆಯಿಂದಾಗಿ ಪಂದ್ಯದಿಂದ ಹೊರಗುಳಿದಿರುವ ನಿಯಮಿತ ನಾಯಕ ರೋಹಿತ್ ಶರ್ಮಾ ಇಲ್ಲದೆ ಭಾರತ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದೆ. ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಇನ್ನಿಂಗ್ಸ್ ತೆರೆಯಲಿದ್ದಾರೆ ಎಂದು ಪಾಂಡ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, “ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸುಮಾರು ಏಳು ವರ್ಷಗಳಿಂದ ಇಲ್ಲಿ ಆಡುತ್ತಿದ್ದೇನೆ. ಎರಡೂ ತಂಡಗಳು ವಿಕೆಟ್‌ನಿಂದ ಸಮಾನ ಅವಕಾಶಗಳನ್ನು ಪಡೆಯುವುದರಿಂದ ಇದು ಸವಾಲಿನದಾಗಿದೆ” ಎಂದು ಹೇಳಿದ್ದಾರೆ.
ರೋಹಿತ್ ಮತ್ತು ಅವರ ಪತ್ನಿ ರಿತಿಕಾ ಸಜ್ದೇಹ್ ಕೂಡ ತಮ್ಮ ಕುಟುಂಬಸ್ಥರ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅರಿಶಿನ ಸಮಾರಂಭದ ಕೆಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ರಿತಿಕಾ ಸಜ್ದೇಹ್ ಅವರ ಸಹೋದರ ಮೇಕಪ್ ಕಲಾವಿದೆ ಅನಿಶಾ ಶಾ ಅವರನ್ನು ಮದುವೆಯಾಗುತ್ತಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿದೆ. ಇದಾದ ನಂತರ ಎರಡನೇ ಏಕದಿನ ಪಂದ್ಯ ಮಾರ್ಚ್ 19 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.
ಇದನ್ನೂ ಓದಿ: Richest Cricketer: ವಿರಾಟ್-ಧೋನಿ ಅಲ್ಲ… ಈ ಆಟಗಾರನೇ ವಿಶ್ವದ ಶ್ರೀಮಂತ ಕ್ರಿಕೆಟಿಗ! ಇವರ ಆಸ್ತಿ ಮೌಲ್ಯ 3100 ಕೋಟಿ
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ:
ರೋಹಿತ್ ಶರ್ಮಾ (ನಾಯಕ - ಕೊನೆಯ 2 ಏಕದಿನ ಪಂದ್ಯಗಳಿಗೆ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕತ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.