MAYANK AGARWAL: ಇಂಡಿಯನ್ ಪ್ರೀಮಿಯರ್ ಲೀಗ್ ನ 18 ನೇ ಆವೃತ್ತಿ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಿತು. 2 ದಿನಗಳ ಕಾಲ ನಡೆದ ಹರಾಜಿನಲ್ಲಿ 10 ಫ್ರಾಂಚೈಸಿಗಳು 182 ಆಟಗಾರರನ್ನು ಖರೀದಿಸಿವೆ. ಇವರಲ್ಲಿ 62 ವಿದೇಶಿ ಆಟಗಾರರೂ ಸೇರಿದ್ದಾರೆ. ಹರಾಜಿನಲ್ಲಿ ಹಲವು ಆಟಗಾರರ ಮೇಲೆ ಕೋಟಿ ಕೋಟಿ ಹಣ ಸುರಿದ ಫ್ರಾಂಚೈಸಿಗಳು ಕೆಲವನ್ನು ಖರೀದಿಸಲ ಮನಸ್ಸು ಕೂಡ ಮಾಡಲಿಲ್ಲ. ರಿಷಬ್ ಪಂತ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆಗೆ ಖರೀದಿಲ್ಪಟ್ಟ ಆಟಗಾರ ಎನಿಸಿಕೊಂಡರು. ಲಕ್ನೋ ಸೂಪರ್ ಜೈಂಟ್ಸ್ ಅವರನ್ನು ಹರಾಜಿನಲ್ಲಿ 27 ಕೋಟಿ ರೂಪಾಯಿಗಳಿಗೆ ಖರೀದಿಸಿತು.
ಇದನ್ನೂ ಓದಿ: IPL 2025: ಹರಾಜಿನಲ್ಲಿ RCB ಪಾಲಾದ ಆಟಗಾರರು ಯಾರು..? ಇದು ಬೆಂಗಳೂರು ತಂಡ ಖರೀದಿಸಿದ ಪ್ಲೇಯರ್ಸ್ ಲಿಸ್ಟ್..!
ಮೆಗಾ ಹರಾಜಿನ ಎರಡನೇ ದಿನದಲ್ಲಿ ಭಾರತದ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಮಾರಾಟವಾಗದೆ ಉಳಿದಿದ್ದಾರೆ. ಅವರ ಮೂಲ ಬೆಲೆ 1 ಕೋಟಿ ರೂಪಾಯಿ ಆಗಿತ್ತು. ಕಳೆದ ಸೀಸನ್‌ನಲ್ಲಿ ಮಯಾಕ ಅಗರ್ವಾಲ್ ಸನ್‌ರೈಸರ್ಸ್ ಹೈದರಾಬಾದ್‌ನ ಭಾಗವಾಗಿದ್ದರು. ಇದಕ್ಕೂ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಡೇರ್ ಡೆವಿಲ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿದ್ದಾರೆ. ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 127 ಪಂದ್ಯಗಳಲ್ಲಿ 2661 ರನ್ ಗಳಿಸಿದ್ದಾರೆ.
ಮಯಾಂಕ್ ಅಗರ್ವಾಲ್ ಒಟ್ಟು 121 ಐಪಿಎಲ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 2,665 ರನ್ ಬಾರಿಸಿದ್ದಾರೆ. 1 ಶತಕ ಮತ್ತು 13 ಅರ್ಧಶತಕಗಳು ಅಗರ್ವಾಲ್ ಹೆಸರಿನಲ್ಲಿವೆ. 106 ಮಯಾಂಕ್ ಅಗರ್ವಾಲ್ ಅವರ ಹೈಸ್ಕೋರ್ ಆಗಿದೆ. ಇಷ್ಟೆಲ್ಲ ಅನುಭವ ಹೊಂದಿರುವ ಮಯಾಂಕ್ ಅಗರ್ವಾಲ್ ₹1 ಕೋಟಿ ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಫ್ರಾಂಚೈಸಿಗಳು ಇವರನ್ನ ಖರೀದಿಸುವ ಮನಸ್ಸು ಮಾಡಲಿಲ್ಲ. ಮಯಾಂಕ್ ಅಗರ್ವಾಲ್ ಅನ್ಸೋಲ್ಡ್ ಆದರು.
ಇದನ್ನೂ ಓದಿ: ಶಾಸ್ತ್ರಕ್ಕೆ ಒಂದು ಇರ್ಲಿ ಎನ್ನುವಂತೆ ಓರ್ವ ಕನ್ನಡಿಗನನ್ನ ಖರೀದಿಸಿದ RCB: ಆತ ಯಾರು?
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.