Mohammed Shami : 2024 ಲೋಕಸಭೆ ಚುನಾವಣೆಗೆ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಬಿಜೆಪಿ ಮತ್ತೊಮ್ಮೆ ಮೋದಿ ಅಂದ್ರೆ, ಕಾಂಗ್ರೆಸ್ ರಾಹುಲ್ ಪಿಎಂ ಅಂತ ಹೇಳುತ್ತಿದ್ದೆ. ಅಲ್ಲದೆ, ನಮೋ ಮಣಿಸಲು ಐಎನ್ಡಿಐಎ ಒಕ್ಕೂಟ ಸಹ ಸಿದ್ಧವಾಗಿದೆ. ಇದೀಗ ಬಿಜೆಪಿ ಪ್ರಭಲ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದು, ಸಧ್ಯ ಕಮಲಪಾಳಯದ ಕಣ್ಣು ಕ್ರಿಕೆಟಿಗ ಮೊಹಮ್ಮದ್ ಶಮಿ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ..
ಹೌದು.. ಮುಂಬರುವ ಲೋಕಸಭಾ ಚುನಾವಣೆಗೆ ಪ್ರತಿ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಪರಿಚಯಿಸುತ್ತಿವೆ. ಹಲವು ಪಕ್ಷಗಳು ತಮ್ಮ ಸಮ್ಮಿಶ್ರ ಮಾತುಕತೆಯನ್ನು ಅಂತಿಮ ಹಂತ ತಲುಪಿವೆ. ಚುನಾವಣಾ ದಿನಾಂಕ ಇನ್ನೂ ಘೋಷಣೆಯಾಗದಿದ್ದರೂ, ಅನೇಕ ಜನರು ತಮ್ಮ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:ಪಾದಾರ್ಪಣೆ ಟೆಸ್ಟ್ ಪಂದ್ಯದಲ್ಲಿಯೇ ಅಬ್ಬರಿಸಿದ ಕನ್ನಡಿಗ ದೇವದತ್ ಪಡಿಕಲ್
ಇದರ ನಡುವೆ, ಭಾರತೀಯ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳಿವೆ. ಶಮಿ ಲೋಕಸಭೆ ಚುನಾವಣೆಗೆ ಬಂಗಾಳದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಬಂಗಾಳದ ಬಹುಸಂಖ್ಯಾತ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಶಮಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಿಜೆಪಿ ನಾಯಕತ್ವವು ಯೋಜಿಸುತ್ತಿದೆ. ಶಮಿ ಕಣಕ್ಕಿಳಿದರೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಆದರೆ, ಶಮಿ ಈ ಕುರಿತು ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ಬಂಗಾಳಿ ಕ್ರಿಕೆಟಿಗರು ರಾಜಕೀಯಕ್ಕೆ ಬರುತ್ತಿರುವುದು ಇದೇ ಮೊದಲಲ್ಲ. ಮೊಹಮ್ಮದ್ ಶಮಿಗಿಂತ ಮೊದಲು, ಮನೋಜ್ ತಿವಾರಿ ಮತ್ತು ಅಶೋಕ್ ದಿಂಡಾ ರಾಜಕೀಯ ಪ್ರವೇಶ ಮಾಡಿದ್ದರು. ತಿವಾರಿ ಅವರು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದು, ಪ್ರಸ್ತುತ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದಾರೆ, ದಿಂಡಾ ಬಿಜೆಪಿಯ ಪಶ್ಚಿಮ ಬಂಗಾಳ ಶಾಸಕರಾಗಿದ್ದಾರೆ.
ಇದನ್ನೂ ಓದಿ:ಧೋನಿ ಬಳಿಕ ಚೆನ್ನೈ ತಂಡದ ನಾಯಕತ್ವಕ್ಕಾಗಿ 3 ಆಟಗಾರರ ನಡುವೆ ಶುರುವಾಯ್ತು ಫೈಟ್!?
ಅಲ್ಲದೆ, ಮೊಹಮ್ಮದ್ ಶಮಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದ್ದಾರೆ. ಅಲ್ಲದೆ ಬಿಜೆಪಿ ವರಿಷ್ಠರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಕಳೆದ ವರ್ಷ ವಿಶ್ವಕಪ್ ಫೈನಲ್ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಶಮಿಯನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಶಮಿ ಈ ವರ್ಷ ಐಪಿಎಲ್ 2024 ಮತ್ತು ಟಿ 20 ವಿಶ್ವಕಪ್ನಲ್ಲಿ ಆಡುವುದಿಲ್ಲ ಎಂಬ ವರದಿಗಳೊಂದಿಗೆ ಅವರು ರಾಜಕೀಯಕ್ಕೆ ಪ್ರವೇಶಿಸುತ್ತಾರೆಯೇ ಎಂದು ಹೇಳಲಾಗುತ್ತಿದ್ದು, ಕಾಯ್ದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.