ನವದೆಹಲಿ: ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ರಿಶಬ್ ಪಂತ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ : Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ರು ಟ್ರೋಲ್ ಆದ ರಶ್ಮಿಕಾ ಮಂದಣ್ಣ.!
I am humbled and grateful for all the support and good wishes. I am glad to let you know that my surgery was a success. The road to recovery has begun and I am ready for the challenges ahead.
Thank you to the @BCCI , @JayShah & government authorities for their incredible support.— Rishabh Pant (@RishabhPant17) January 16, 2023
ಈ ಕುರಿತಾಗಿ ಟ್ವೀಟ್ ಮಾಡಿ ಅವರು ತಮ್ಮ ಶಸ್ತ್ರಚಿಕಿತ್ಸೆ ಕುರಿತಾಗಿನ ನವೀಕರಣವನ್ನು ಹಂಚಿಕೊಂಡಿದ್ದಾರೆ. “ಎಲ್ಲಾ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ.ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಮತ್ತು ಮುಂಬರುವ ಸವಾಲುಗಳಿಗೆ ನಾನು ಸಿದ್ಧನಿದ್ದೇನೆ. ಬಿಸಿಸಿಐ ಹಾಗೂ ಜೆ ಶಾ ಮತ್ತು ಸರ್ಕಾರಿ ಅಧಿಕಾರಿಗಳ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : Puneeth Rajkumar: ಅಪ್ಪನ ಜನ್ಮ ದಿನಕ್ಕೆ ಕೊಡಗಿನಲ್ಲಿ ಹುಣಸೆ ಗಿಡ ನೆಟ್ಟಿದ್ರು ಪುನೀತ್!
ಈಗ ಅವರ ಗಾಯ ಗಂಭೀರ ಸ್ವರೂಪದ್ದಾಗಿರುವುದರಿಂದಾಗಿ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ, ಐಪಿಎಲ್ 2023, ಏಕದಿನ ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಗುತ್ತದೆ.ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಸಂಭಾವ್ಯ ನಾಯಕ ಎಂದೇ ಪರಿಗಣಿಸಿದ್ದ ಪಂತ್ ಅವರು ಈಗ ಗಾಯಗೊಂಡಿರುವುದರಿಂದಾಗಿ ತಂಡಕ್ಕೆ ಭಾರಿ ಹಿನ್ನೆಡೆಯಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.