India vs Ireland T20 Series: ಏಷ್ಯಾಕಪ್ 2023ರ ಮೊದಲು, ಭಾರತೀಯ ಕ್ರಿಕೆಟ್ ತಂಡವು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗಾಗಿ, ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಯುವ ತಂಡ ಐರ್ಲೆಂಡ್ ತಲುಪಿದೆ. ಇನ್ನೊಂದೆಡೆ ಅಪಾಯಕಾರಿ ಆಲ್ರೌಂಡರ್ ಕೂಡ ಟೀಮ್ ಇಂಡಿಯಾಗೆ ಸುಮಾರು 3 ವರ್ಷಗಳ ಬಳಿಕ ಮರಳಿದ್ದಾರೆ.
ಇದನ್ನೂ ಓದಿ: 15 ವರ್ಷಗಳ ವೃತ್ತಿಜೀವನ ಅಂತ್ಯ! ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಸ್ಟಾರ್ ವೇಗಿ
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಐರ್ಲೆಂಡ್’ಗೆ ಕಳುಹಿಸಿದೆ. ಈ ತಂಡದಲ್ಲಿ ಆಲ್ ರೌಂಡರ್ ಶಿವಂ ದುಬೆ ಕೂಡ ಸೇರ್ಪಡೆಗೊಂಡಿದ್ದಾರೆ. ಶಿವಂ ದುಬೆ ಫೆಬ್ರವರಿ 2020 ರಲ್ಲಿ ಭಾರತಕ್ಕಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಆದರೆ ಐಪಿಎಲ್ 2023 ರ ಶ್ರೇಷ್ಠ ಪ್ರದರ್ಶನದ ಆಧಾರದ ಮೇಲೆ, ಈ ಆಟಗಾರ ಮತ್ತೊಮ್ಮೆ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಂ ದುಬೆ 2019 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಭಾರತ ಪರ 13 ಟಿ20 ಪಂದ್ಯಗಳಲ್ಲಿ 105 ರನ್ ಹಾಗೂ 5 ವಿಕೆಟ್ ಪಡೆದಿದ್ದಾರೆ. ಎಡಗೈ ಬ್ಯಾಟ್ಸ್ಮನ್ ದುಬೆ ಕಳೆದ ಋತುವಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತ ಚೆನ್ನೈ ಸೂಪರ್ ಕಿಂಗ್ಸ್’ನಿಂದ 158.33 ಸ್ಟ್ರೈಕ್ ರೇಟ್’ನಲ್ಲಿ 16 ಪಂದ್ಯಗಳಲ್ಲಿ 418 ರನ್ ಗಳಿಸಿದರು. ಶಿವಂ ದುಬೆ ಕೆಳ ಕ್ರಮಾಂಕದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನು ಏಷ್ಯನ್ ಗೇಮ್ಸ್ 2023ರ ಟೀಮ್ ಇಂಡಿಯಾದಲ್ಲಿಯೂ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಏಷ್ಯಾಕಪ್ 2023ಕ್ಕೆ ಟೀಂ ಇಂಡಿಯಾ ಪ್ರಕಟ! ಕನ್ನಡಿಗ ಸೇರಿ ಇಬ್ಬರು ಮ್ಯಾಚ್ ವಿನ್ನರ್’ಗಳೇ ಔಟ್
ಐರ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ:
ಜಸ್ಪ್ರೀತ್ ಬುಮ್ರಾ (ನಾಯಕ), ರಿತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ