IPL 2024, RCB vs SRH: ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ರನ್ ಗಳಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಗರಿಷ್ಠ ರನ್ ಗಳಿಸುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.
ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 287 ರನ್ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್
Innings Break!
A batting carnage in Chinnaswamy as @SunRisers have set a record 🎯 of 288 🔥#RCB chase coming up shortly!
Scorecard ▶️ https://t.co/OOJP7G9bLr#TATAIPL | #RCBvSRH pic.twitter.com/okSG4l2A3b
— IndianPremierLeague (@IPL) April 15, 2024
ಪ್ರಸಕ್ತ ಟೂರ್ನಿಯಲ್ಲಿಯೇ ಆರ್ಸಿಬಿ ಹೆಸರಿನಲ್ಲಿದ್ದ ಗರಿಷ್ಠ ರನ್ಗಳ ದಾಖಲೆಯನ್ನು ಹೈದರಾಬಾದ್ ತಂಡವು ಮುರಿದಿತ್ತು. 2013ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಆರ್ಸಿಬಿ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 263 ಗಳಿಸಿ ದಾಖಲೆ ನಿರ್ಮಿಸಿತ್ತು.
🚨 𝗧𝗵𝗲 𝗥𝗲𝗰𝗼𝗿𝗱 𝗶𝘀 𝗯𝗿𝗼𝗸𝗲𝗻 𝗮𝗴𝗮𝗶𝗻 🚨@SunRisers continue to hold the record for the highest total in IPL history 🧡🔥
2⃣8⃣7⃣/3⃣#TATAIPL | #RCBvSRH pic.twitter.com/5VOG8PGB6X
— IndianPremierLeague (@IPL) April 15, 2024
ಇದೇ ಟೂರ್ನಿಯಲ್ಲಿ ವೈಜಾಗ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿ ಆರ್ಸಿಬಿ ತಂಡದ ದಾಖಲೆ ಮುರಿದಿತ್ತು. ನಂತರ ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
ಇದನ್ನೂ ಓದಿ: ಈ ಆಟಗಾರ ಹರಾಜಿಗೆ ಬಂದರೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಖರೀದಿಸುತ್ತೇನೆ ಎಂದ ನಟಿ ..!
ಇದೀಗ ಹೈದರಾಬಾದ್ ತನ್ನ ಹಳೆಯ ದಾಖಲೆಯನ್ನೇ ಮುರಿದು ಹೊಸ ದಾಖಲೆ ನಿರ್ಮಿಸಿದೆ. ಟ್ರಾವಿಸ್ ಹೆಡ್(102) ಭರ್ಜರಿ ಶತಕ, ಹೆನ್ರಿಕ್ ಕ್ಲಾಸೆನ್(67), ಅಭಿಷೇಕ್ ಶರ್ಮಾ(32), ಐಡೆನ್ ಮಾರ್ಕ್ರಾಮ್(ಅಜೇಯ 32) ಮತ್ತು ಅಬ್ದುಲ್ ಸಮದ್(ಅಜೇಯ 37) ರನ್ ಗಳಿಸಿದರು. ಇವರ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಹೈದರಾಬಾದ್ 20 ಓವರ್ಗಳಲ್ಲಿ 287 ರನ್ಗಳ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು.
Highest totals in IPL
287/3 SRH vs RCB Bengaluru 2024
277/3 SRH vs MI Hyderabad 2024
272/7 KKR vs DC Vizag 2024
263/5 RCB vs PWI Bengaluru 2013
257/7 LSG vs PK Mohali 2023
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.