ನವದೆಹಲಿ: ಟೋಕಿಯೊ ಒಲಂಪಿಕ್ಸ್(Tokyo Olympics 2020)ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಶನಿವಾರ ಕಂಚಿನ ಪದಕ ಗೆಲ್ಲುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ.
ಪುನಿಯಾ 65 ಕೆಜಿ ಫ್ರೀಸ್ಟೈಲ್ ವಿಭಾಗದ ಪಂದ್ಯದಲ್ಲಿ ಕಜಕಿಸ್ತಾನದ ದೌಲತ್ ನಿಯಾಜ್ಬೆಕವೊ ಅವರನ್ನು 8-0 ಅಂತರದಿಂದ ಮಣಿಸಿದ ಪುನಿಯಾ ಕಂಚಿನ ಪದಕವನ್ನು ಕೊರಳಿಗೇರಿಸಿಕೊಂಡರು. ಸೆಮಿಫೈನಲ್ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದ ಪುನಿಯಾ(Bajrang Punia)ಫೈನಲ್ ಪ್ರವೇಶಿಸುವಲ್ಲಿ ವಿಫಲರಾಗಿದ್ದರು. ಅಜರ್‌ಬೈಜಾನಿಯಾದ ಹಾಜಿ ಆಲಿಯಾವ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ 5-12 ಅಂಕಗಳ ಅಂತರದಿಂದ ಪುನಿಯಾ ಸೋಲು ಕಂಡಿದ್ದರು. ಆದರೆ ಕಂಚಿಗಾಗಿ ನಡೆದ ಹೋರಾಟದಲ್ಲಿ ಭಾರತೀಯ ಕುಸ್ತಿಪಟು ಪುನಿಯಾ ಆರಂಭದಿಂದಲೂ ಆಕ್ರಮಣಕಾರಿ ಆಟದೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಎದುರಾಳಿಗೆ ಯಾವುದೇ ಅಂಕ ಬಿಟ್ಟುಕೊಡದೆ 8-0 ಅಂತರದಿಂದ ಗೆಲುವು ಸಾಧಿಸಿದರು. ಈ ಮೂಲಕ ಒಲಿಂಪಿಕ್ ಕಂಚಿನ ಪದಕ ಗೆದ್ದ ಭಾರತದ 5ನೇ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪುನಾಯಾ ಭಾಜನರಾಗಿದ್ದಾರೆ.
Bajrang takes home 🥉 in his debut @Olympics
🇮🇳 wrestler @BajrangPunia beats #KAZ D Niyazbekov 8-0 to win 🇮🇳's 6th Medal at #Tokyo2020
This equals India’s best ever medal haul at a single Olympics equalling the 6 won in #London2012
We are proud of our champion!#Cheer4India pic.twitter.com/K4HV3ia3cg
— SAIMedia (@Media_SAI) August 7, 2021
ಈ ಮೊದಲು ಒಲಂಪಿಕ್ಸ್ ನಲ್ಲಿ ಕೆಡಿ ಜಾಧವ್, ಸುಶೀಲ್ ಕುಮಾರ್, ಯೋಗೇಶ್ವರ್ ದತ್ ಮತ್ತು ಸಾಕ್ಷಿ ಮಲಿಕ್ ಭಾರತಕ್ಕೆ ಕುಸ್ತಿಯಲ್ಲಿ ಕಂಚಿನ ಪದಕ(Bronze Medal) ತಂದುಕೊಟ್ಟಿದ್ದರು. ಇದಲ್ಲದೇ ಕುಸ್ತಿಯಲ್ಲಿ ಸುಶೀಲ್ (2012) ಮತ್ತು ರವಿ ದಹಿಯಾ (2020) ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಾಧನೆ ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ಈವರೆಗೆ ಒಟ್ಟು 7 ಪದಕಗಳನ್ನು ಗೆದ್ದಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಹಾಗೂ ರಸ್ಲಿಂಗ್‌ನಲ್ಲಿ ರವಿಕುಮಾರ್ ಬೆಳ್ಳಿ ಪದಕ ಗೆದ್ದಿದ್ದರೆ, ಮಹಿಳಾ ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು(PV Sindhu), ಮಹಿಳಾ ಬಾಕ್ಸಿಂಗ್‌ನಲ್ಲಿ ಲವ್ಲಿನಾ ಬೋರ್ಗೊಹೈನ್ ಹಾಗೂ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿದೆ.
Delightful news from #Tokyo2020! Spectacularly fought @BajrangPunia. Congratulations to you for your accomplishment, which makes every Indian proud and happy.
— Narendra Modi (@narendramodi) August 7, 2021
ಇದೀಗ ಬಜರಂಗ್ ಪುನಿಯಾ(Bajrang Punia) ಕೂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದಕದ ಸಂಖ್ಯೆಯನ್ನು 7ಕ್ಕೆ ಏರಿಸಿದ್ದಾರೆ. ಸದ್ಯ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ 7 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 47ನೇ ಸ್ಥಾನದಲ್ಲಿದೆ. ಟೋಕಿಯೊ ಒಲಂಪಿಕ್ಸ್ ಕುಸ್ತಿಯಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟ ಬಜರಂಗ್ ಪುನಿಯಾಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ