IND vs WI, Cricket News: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅಪಾಯಕಾರಿ ನಡೆಯಿಂದ ವಿರಾಟ್ ಕೊಹ್ಲಿ ಟೆಸ್ಟ್ ವೃತ್ತಿಜೀವನ ಅಪಾಯದಲ್ಲಿದೆ. ಭಾರತ ತಂಡದ ಮ್ಯಾನೇಜ್’ಮೆಂಟ್ ಟೆಸ್ಟ್ ಕ್ರಿಕೆಟ್’ನಲ್ಲಿ ನಂಬರ್-4 ಬ್ಯಾಟಿಂಗ್ ಸ್ಥಾನಕ್ಕಾಗಿ ಸ್ಫೋಟಕ ಬ್ಯಾಟ್ಸ್ಮನ್ ಅನ್ನು ಕಂಡುಹಿಡಿದಿದೆ. ಈ ಬ್ಯಾಟ್ಸ್ ಮನ್ ಬಿರುಸಿನ ಬ್ಯಾಟಿಂಗ್ ನಿಂದ ವಿರಾಟ್ ಕೊಹ್ಲಿ ವೃತ್ತಿ ಜೀವನಕ್ಕೆ ಸಂಕಷ್ಟ ತರುವುದು ಖಂಡಿತ.
ಇದನ್ನೂ ಓದಿ: ಧೋನಿಯೂ ಮಾಡಲು ಅಸಾಧ್ಯ ಎಂದ ಶ್ರೀಲಂಕಾ ದಿಗ್ಗಜನ ಈ ವಿಶ್ವದಾಖಲೆ ಮುರಿದ ರೋಹಿತ್ ಶರ್ಮಾ!
ಪೋರ್ಟ್ ಆಫ್ ಸ್ಪೇನ್’ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ತಡೆದು, ಸ್ಫೋಟಕ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ಅವರನ್ನು ನಂಬರ್-4 ಸ್ಥಾನದಲ್ಲಿ ಬ್ಯಾಟಿಂಗ್’ಗೆ ಕಳುಹಿಸಿದರು. ಈ ಸುವರ್ಣಾವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡ ಇಶಾನ್ ಕಿಶನ್ 34 ಎಸೆತಗಳಲ್ಲಿ 52 ರನ್ ಗಳಿಸಿದರು. ಇಶಾನ್ ಕಿಶನ್ ಅವರ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಬಾರಿಸಿದರು.
ಟೆಸ್ಟ್ ತಂಡದಿಂದ ವಿರಾಟ್ ಹೊರಬೀಳುವ ಸಾಧ್ಯತೆ!
ಇಶಾನ್ ಕಿಶನ್ ಅವರ ಬಿರುಸಿನ ಬ್ಯಾಟಿಂಗ್ ನಿಂದಾಗಿ ಈ ಪಂದ್ಯದಲ್ಲಿ ಜೀವಕಳೆ ಬಂದಿದೆ. ಟೆಸ್ಟ್ ಪಂದ್ಯದಲ್ಲಿ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿದ್ದಾರೆ. ಪೋರ್ಟ್ ಆಫ್ ಸ್ಪೇನ್’ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೈ ತಪ್ಪಿ ಈ ಟೆಸ್ಟ್ ಪಂದ್ಯ ಡ್ರಾದತ್ತ ಸಾಗುವ ಲಕ್ಷಣ ಕಂಡುಬಂದರೂ ಮೊಹಮ್ಮದ್ ಸಿರಾಜ್ (60ಕ್ಕೆ 5 ವಿಕೆಟ್) ಮಾರಕ ಬೌಲಿಂಗ್ ನಿಂದಾಗಿ ವೆಸ್ಟ್ ಇಂಡೀಸ್ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ 255 ರನ್ಗಳಿಗೆ ಭಾರತೀಯ ಬೌಲರ್ಗಳು ಮಣಿಸಿದರು.
ಇದನ್ನೂ ಓದಿ: ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಮೊದಲ ಬಾರಿ ಮಹಿಳಾ ಕೋಚ್ ನೇಮಕ! ಕನ್ನಡತಿಗೆ ಮಣೆ ಹಾಕಿದ ಸಮಿತಿ
ಇದರ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್ ನ ನಾಲ್ಕನೇ ದಿನದಂದು ಭಾರತ ಎರಡು ವಿಕೆಟ್ ಗಳಿಗೆ 181 ರನ್ ಗಳಿಸಿ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ಆತಿಥೇಯರಿಗೆ 365 ರನ್ ಗಳ ಗುರಿಯನ್ನು ನೀಡಿತು. ನಾಯಕ ರೋಹಿತ್ ಶರ್ಮಾ 57 ರನ್ ಗಳಿಸಿದರೆ, ಇಶಾನ್ ಕಿಶನ್ 52 ರನ್ ಗಳಿಸಿದರು. ಇಶಾನ್ ಕಿಶನ್ ಅವರ ಈ ವೇಗದ ಇನ್ನಿಂಗ್ಸ್ ಈ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲುವಿನ ಹಾದಿಯನ್ನು ತೆರೆಯಲು ಕೆಲಸ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.