Virat Kohli OUT! ಇಂಗ್ಲೆಂಡ್ ಟೆಸ್ಟ್ ಸರಣಿಯ 2 ಪಂದ್ಯಗಳಿಂದ ವಿರಾಟ್ ಕೊಹ್ಲಿ ಔಟ್.!‌

Virat Kohli, IND vs ENG Test : ಜನವರಿ 25 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ 2 ಪಂದ್ಯಗಳಿಂದ ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ. 

Written by - Chetana Devarmani | Last Updated : Jan 22, 2024, 07:49 PM IST
  • ಭಾರತ ಇಂಗ್ಲೆಂಡ್ ಟೆಸ್ಟ್ ಸರಣಿ
  • 2 ಪಂದ್ಯಗಳಿಂದ ವಿರಾಟ್ ಕೊಹ್ಲಿ ಔಟ್.!‌
  • ಜನವರಿ 25 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿ
Virat Kohli OUT! ಇಂಗ್ಲೆಂಡ್ ಟೆಸ್ಟ್ ಸರಣಿಯ 2 ಪಂದ್ಯಗಳಿಂದ ವಿರಾಟ್ ಕೊಹ್ಲಿ ಔಟ್.!‌  title=
Virat Kohli

IND vs ENG Test : ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಆಡುವುದಿಲ್ಲ. ಬಿಸಿಸಿಐಗೆ ಈ ಬಗ್ಗೆ ಕೊಹ್ಲಿ ಮನವಿ ಮಾಡಿದ್ದರು. ಬಿಸಿಸಿಐ ಅದನ್ನು ಮಂಡಳಿಯು ಒಪ್ಪಿಕೊಂಡಿದೆ. ವಿರಾಟ್ ಕೊಹ್ಲಿ ಇಂದು ಜನವರಿ 22 ರಂದು ಅಯೋಧ್ಯೆಗೆ ತೆರಳಿದ್ದಾರೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. 

ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ವೈಯಕ್ತಿಕ ಕಾರಣಗಳನ್ನು ನೀಡಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವ ಬಗ್ಗೆ ವಿರಾಟ್ ಕೊಹ್ಲಿ ಬಿಸಿಸಿಐಗೆ ಮನವಿ ಮಾಡಿದ್ದರು. ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರೊಂದಿಗೆ ವಿರಾಟ್ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಮೊದಲ ಆದ್ಯತೆಯಾಗಿದೆ ಎಂದು ಒತ್ತಿಹೇಳಿದ್ದಾರೆ, ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಅವರು ಸರಣಿಯ ಮೊದಲ 2 ಪಂದ್ಯಗಳನ್ನು ಆಡುವುದಿಲ್ಲ.

ಇದನ್ನೂ ಓದಿ: ಈ ದಿನ ಆರಂಭವಾಗಲಿದೆ IPL 2024 : ಫೈನಲ್ ಪಂದ್ಯದ ದಿನಾಂಕವೂ ಪ್ರಕಟ 

ಮಂಡಳಿ ಹೊರಡಿಸಿದ ಹೇಳಿಕೆಯ ಪ್ರಕಾರ, ಬಿಸಿಸಿಐ ಕೊಹ್ಲಿ ಅವರ ನಿರ್ಧಾರವನ್ನು ಗೌರವಿಸುತ್ತದೆ. ಮಂಡಳಿ ಮತ್ತು ತಂಡದ ಆಡಳಿತವು ಸ್ಟಾರ್ ಬ್ಯಾಟ್ಸ್‌ಮನ್‌ಗೆ ತಮ್ಮ ಬೆಂಬಲವನ್ನು ನೀಡಿದೆ. ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ. ಕೊಹ್ಲಿ ಅವರ ಗೌಪ್ಯತೆಯನ್ನು ಗೌರವಿಸುವಂತೆ ಮತ್ತು ವೈಯಕ್ತಿಕ ಕಾರಣಗಳ ಬಗ್ಗೆ ಊಹಾಪೋಹಗಳನ್ನು ತಪ್ಪಿಸುವಂತೆ ಬಿಸಿಸಿಐ ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ವಿನಂತಿಸುತ್ತದೆ ಎಂದು ಹೇಳಿದೆ. 

ಜನವರಿ 25 ರಿಂದ ಟೆಸ್ಟ್ ಸರಣಿ ಆರಂಭ 

25-29 ಜನವರಿ 2024 ಭಾರತ-ಇಂಗ್ಲೆಂಡ್ 1 ನೇ ಟೆಸ್ಟ್ ಹೈದರಾಬಾದ್
2-6 ಫೆಬ್ರವರಿ 2024 ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ವಿಶಾಖಪಟ್ಟಣಂ
15-19 ಫೆಬ್ರವರಿ 2024 ಭಾರತ-ಇಂಗ್ಲೆಂಡ್ 3ನೇ ಟೆಸ್ಟ್ ರಾಜ್‌ಕೋಟ್
23-27 ಫೆಬ್ರವರಿ 2024 ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ ರಾಂಚಿ
7-11 ಮಾರ್ಚ್ 2024 ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಧರ್ಮಶಾಲಾ

ಇದನ್ನೂ ಓದಿ: IND vs ENG: ಟೆಸ್ಟ್ ಶತಕವನ್ನು ಶ್ರೀರಾಮನಿಗೆ ಅರ್ಪಿಸಿದ ಭಾರತದ ಕ್ರಿಕೆಟಿಗ, ವಿಡಿಯೋ ವೈರಲ್ 

ವಿರಾಟ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 29 ಶತಕಗಳು ಮತ್ತು 30 ಅರ್ಧ ಶತಕಗಳ ಸಹಾಯದಿಂದ ಒಟ್ಟು 8848 ರನ್‌ ಗಳಿಸಿದ್ದಾರೆ. 292 ODI ಅಂತರಾಷ್ಟ್ರೀಯ ಪಂದ್ಯಗಳಲ್ಲಿ 13848 ರನ್ ಗಳಿಸಿದ್ದಾರೆ, ದಾಖಲೆಯ 50 ಶತಕಗಳನ್ನು ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ 1 ಶತಕ ಹಾಗೂ 37 ಅರ್ಧಶತಕಗಳ ನೆರವಿನಿಂದ 4037 ರನ್ ಗಳಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) ಮತ್ತು ಅವೇಶ್ ಖಾನ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News