ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ ಬಗ್ಗೆ ಬಾಲ್ಯದ ಕೋಚ್ ಹೇಳಿದ್ದೇನು ಗೊತ್ತಾ?

ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅದ್ಬುತ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Written by - Manjunath N | Last Updated : Feb 23, 2025, 03:36 PM IST
  • ಭಾರತ ಉತ್ತಮ ತಂಡ ಎಂದು ನಾನು ಭಾವಿಸುತ್ತೇನೆ.
  • ಅವರು ದೊಡ್ಡ ಪಂದ್ಯಗಳಲ್ಲಿ ಆಟ ಆಡುವ ಆಟಗಾರ.
  • ಅವರು ಮಹತ್ವದ ಸಂದರ್ಭಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.
ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ ಬಗ್ಗೆ ಬಾಲ್ಯದ ಕೋಚ್ ಹೇಳಿದ್ದೇನು ಗೊತ್ತಾ? title=

ದುಬೈ: ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅದ್ಬುತ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಈಗ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿರುವ ಪಾಕ್ ತಂಡವು ಟೀಮ್ ಇಂಡಿಯಾ ವಿರುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಪಾಕ್ ತಂಡವು ಸೋಲನ್ನು ಅನುಭವಿಸಿದ್ದಲ್ಲಿ ಸೆಮಿಫೈನಲ್ ಪ್ರವೇಶಿಸುವ ಕನಸು ಭಗ್ನವಾಗಲಿದೆ.ಇನ್ನೊಂದೆಡೆಗೆ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 6 ವಿಕೆಟ್‌ಗಳ ಅಂತರಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆಯನ್ನು ತೆರೆದಿದೆ.

ಈಗ ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ  'ಇಡೀ ಜಗತ್ತು ಈ ಪಂದ್ಯಕ್ಕಾಗಿ ಉತ್ಸುಕವಾಗಿದೆ. ನಾಳೆ ಏನಾಗಲಿದೆ ಎಂಬುದರ ಬಗ್ಗೆ ಎಲ್ಲರೂ ಕುತೂಹಲದಿಂದ ಇದ್ದಾರೆ. ಭಾರತ ಉತ್ತಮ ತಂಡ ಎಂದು ನಾನು ಭಾವಿಸುತ್ತೇನೆ. ಅವರು ದೊಡ್ಡ ಪಂದ್ಯಗಳಲ್ಲಿ ಆಟ ಆಡುವ  ಆಟಗಾರ. ಅವರು ಮಹತ್ವದ ಸಂದರ್ಭಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ನಾಳೆಯೂ ಅದೇ ಕಥೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ ಗಗನಕ್ಕೇರುತ್ತಿರುವ ಬಂಗಾರದ ಬೆಲೆಯನ್ನು ಇಳಿಸಲು ಮಹತ್ವದ ನಿರ್ಧಾರ ! ದಿಟ್ಟ ತೀರ್ಮಾನದಿಂದ ಭರ್ಜರಿಯಾಗಿಯೇ ಕುಸಿಯುವುದು ಚಿನ್ನದ ಬೆಲೆ

ವಿರಾಟ್ ಕೊಹ್ಲಿ ಪಾಕ್ ತಂಡದ ವಿರುದ್ಧ ಉತ್ತಮ ಇತಿಹಾಸವನ್ನು ಹೊಂದಿದ್ದಾರೆ.ಅವರು ಇದುವರೆಗೆ 16 ಏಕದಿನ ಪಂದ್ಯಗಳಲ್ಲಿ ವಿರಾಟ್ 678 ರನ್ ಗಳಿಸಿದ್ದು, ಸರಾಸರಿ 52.15 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ.ಒಂದು ವೇಳೆ ಭಾನುವಾರ ನಡೆಯುವ ಪಂದ್ಯದಲ್ಲಿಯೂ ಕೂಡ ಇದೆ ಪ್ರದರ್ಶನ ನೀಡಿದಲ್ಲಿ ಟೀಮ್ ಇಂಡಿಯಾ ಗೆಲ್ಲುವು ಸಾಧಿಸುವುದು ಖಚಿತ ಎಂದು ಹೇಳಬಹುದು.

ಭಾರತ: ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ಸಿ), ಬಾಬರ್ ಅಜಮ್, ಇಮಾಮ್-ಉಲ್-ಹಕ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಷ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾಫ್ರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News