Yashasvi Jaiswal's second double century: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಅದ್ಭುತ ಜಯ ದಾಖಲಿಸಿದೆ. ಈ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಎರಡನೇ ಬಾರಿ ದ್ವಿಶತಕ ಸಿಡಿಸಿದ್ದಾರೆ. ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದು, ತಂಡದ ಗೆಲುವಿಗೆ ಕೊಡುಗೆ ನೀಡಿದ್ದಾರೆ. ಆದರೆ ಯಶಸ್ವಿ ಜೈಸ್ವಾಲ್ ಅವರಿಗೆ ಮಾತ್ರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸಿಗಲಿಲ್ಲ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಬ್ಯಾಕ್ ಟು ಬ್ಯಾಕ್ ದ್ವಿಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ಈ ಎರಡು ದ್ವಿಶತಕಗಳ ಹೊರತಾಗಿಯೂ ಜೈಸ್ವಾಲ್ಗೆ ಯಾಕೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ಹಲವರ ಪ್ರಶ್ನೆ ಆಗಿದೆ.
ಇದನ್ನೂ ಓದಿ:ವಿಶ್ವದಾಖಲೆ ಬರೆದ ಯಶಸ್ವಿ ಜೈಸ್ವಾಲ್: 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ದಾಖಲೆ ಬರೆದಿದ್ದು ಇದೇ ಮೊದಲು
ಯಶಸ್ವಿ ಜೈಸ್ವಾಲ್ ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 209 ರನ್ ಬಾರಿಸಿದ್ದರು. ಇದೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 2 ಇನಿಂಗ್ಸ್ನಲ್ಲಿ 9 ವಿಕೆಟ್ ಕಬಳಿಸಿದರು. ಈ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಇನ್ನು ರಾಜ್ಕೋಟ್ಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ವಿಫಲರಾದರು. ದ್ವಿತೀಯ ಇನ್ನಿಂಗ್ಸ್ನಲ್ಲಿ ಅಜೇಯ 214 ರನ್ ಬಾರಿಸಿದ್ದರು. ಇದೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಜಡೇಜಾ 112 ರನ್ ಜೊತೆಗೆ ಬೌಲಿಂಗ್ನಲ್ಲಿಯೂ 6 ವಿಕೆಟ್ ಪಡೆದಿದ್ದರು. ಈ ಕಾರಣದಿಂದ 3ನೇ ಟೆಸ್ಟ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಜಡೇಜಾ ಪಡೆದರು. ಎರಡೂ ಪಂದ್ಯಗಳಲ್ಲೂ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿಲ್ಲ. ಇದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ: IND vs ENG: ರಾಜ್ಕೋಟ್ ಟೆಸ್ಟ್ನಲ್ಲಿ ದಾಖಲಾದ ಟಾಪ್-10 ವಿಶ್ವ ದಾಖಲೆಗಳಿವು!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.