ರಾಜ್ಯಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಗ್ರಾಮೀಣ ಭಾಗದ ಜನರ ಬದುಕು ದುಸ್ತರವಾಗಿದೆ. ಬಿಟ್ಟು ಬಿಟ್ಟು ಬರ್ತಿರುವ ಮಳೆಗೆ ಜನ್ರ ಬದುಕೇ ಬರ್ಬಾದ್ ಆಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹಳ್ಳ, ಕೊಳ್ಳ ತುಂಬಿ ರಸ್ತೆಗಳು, ಸೇತುವೆಗಳು ನೆಲೆ ಕಚ್ಚಿವೆ. ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಅವಾಂತರಗಳ ಸರಮಾಲೆಗಳೇ ಸೃಷ್ಟಿಸಿದೆ.
ಸಕ್ಕರೆನಾಡು ಮಂಡ್ಯದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರಾವಾಗಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಕಡೆ ಅನಾಹುತಗಳು ಉಂಟಾಗಿ ಜನರು ತತ್ತರಿಸಿ ಹೋಗಿದ್ದಾರೆ. ಕೆರೆ ಕಾಲುವೆಗಳು ಉಕ್ಕಿ ಹರಿದು ರೈತನ ಬೆಳೆ ನಾಶವಾಗಿದ್ರೆ, ರಸ್ತೆ ಕೊಚ್ಚಿ ಹೋಗಿ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿ ಜನರ ಬದುಕು ಬೀದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಅನಾಹುತಗಳಾಗಿವೆ ಅನ್ನೋದ್ರ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
ಬೆಂಗಳೂರಿನಲ್ಲಿ ದೋ ಎಂದು ಸುರಿದ ಮಳೆಗೆ ಜನ ತತ್ತರ ಬೆಂಗಳೂರಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ವೀಕೆಂಡ್ ಮೂಡ್ನಲ್ಲಿದ್ದ ಸಿಲಿಕಾನ್ ಸಿಟಿ ಮಂದಿಗೆ ಮಳೆ ಅಡ್ಡಿ ವೀಕೆಂಡ್ ಅಂತ ಹೊರಗೆ ಹೋದ ಮಂದಿಯ ಪರದಾಟ ಮಳೆಗೆ ಸಿಲಿಕಾನ್ ಸಿಟಿ ಜನಜೀವನ ಅಕ್ಷರಶಃ ಅಸ್ತವ್ಯಸ್ತ
ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಅಂಗೀಕಾರ ಮಾಡಿದೆ. ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗಿಕಾರಕ್ಕೆ ಸಭಾಪತಿ ಸೂಚನೆ ನೀಡಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸದನದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.