ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.
ಆರ್ಟಿಕಲ್ 370 ಮತ್ತು 35 ಎ ದೇಶದಲ್ಲಿ ಭಯೋತ್ಪಾದನೆಗೆ ಒಂದು ಹೆಬ್ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಆ ನಿಬಂಧನೆಗಳನ್ನು ರದ್ದುಗೊಳಿಸುವ ಮೂಲಕ ಆ ಪ್ರವೇಶವನ್ನು ಮುಚ್ಚಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಎಂದಾದರೂ ಅಧಿಕಾರಕ್ಕೆ ಮರಳಿದರೆ 370 ನೇ ವಿಧಿಯನ್ನು ಮರಳಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭಾರತ್ ರತ್ನಕ್ಕೆ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಬಿಜೆಪಿ ಪ್ರಸ್ತಾಪಿಸಿರುವ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 1857 ರ ದಂಗೆಯನ್ನು ಭಾರತೀಯ ಸ್ವಾತಂತ್ರ್ಯದ ಮೊದಲ ಸಂಗ್ರಾಮ ಎಂದು ಕರೆದ ಕೀರ್ತಿ ಸಾವರ್ಕರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
2020 ರ ವಿಧಾನಸಭಾ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಬಿಜೆಪಿ ಹೋರಾಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್ಡಿಎ ಸರ್ಕಾರ ರಚನೆಯಾದರೆ ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೀ ನ್ಯೂಸ್ನೊಂದಿಗೆ ವಿಶೇಷ ಸಂವಾದದಲ್ಲಿ ಸ್ಪಷ್ಟಪಡಿಸಿದ್ದಾರೆ.
2016ರ ಅಕ್ಟೋಬರ್ 15ರಂದು ನಜೀಬ್ ನಾಪತ್ತೆಯಾಗಿದರು. ಆದರೆ, ಇದುವರೆಗೂ ಆತನನ್ನು ಹುಡುಕುವಲ್ಲಿ ಕೇಂದ್ರ ಗೃಹ ಇಲಾಖೆ ವಿಫಲವಾಗಿದೆ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು ಎಂದು ಯುನೈಟೆಡ್ ಎಗೆನೆಸ್ಟ್ ಹೇಟ್(UAH) ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ನಜೀಬ್ ತಾಯಿ ನಫೀಸ್ ಒತ್ತಾಯಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಎನ್ಡಿಎ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮತ್ತು ಎನ್ಸಿಪಿ ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.
ಭಾರತದ ಸೆಮಿಹೈಸ್ಪೀಡ್ ರೈಲಾದ ವಂದೇ ಭಾರತ್ ಎಕ್ಸ್ಪ್ರೆಸ್ನ ಮೊದಲ ವಾಣಿಜ್ಯ ಸಂಚಾರ ಅಕ್ಟೋಬರ್ 5 ರಂದು ನಡೆಯಲಿದ್ದು, ಇದು ದೆಹಲಿ ಮತ್ತು ಕತ್ರಾ, ವೈಷ್ಣೋ ದೇವಿ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಎಂಟು ಗಂಟೆಗಳಿಗೆ ಕಡಿಮೆಗೊಳಿಸಲಿದೆ
ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಮಮತಾ ಬ್ಯಾನರ್ಜೀ ಅವರು ಮತಕ್ಕಾಗಿ ನುಸುಳುಕೋರರನ್ನು ರಾಜ್ಯದಲ್ಲಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಪಶ್ಚಿಮ ಬಂಗಾಳದಲ್ಲಿ ಒಡೆದಾಳುವ ರಾಜಕಾರಣ ನಡೆಯಲ್ಲ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.