ಅಯೋಧ್ಯೆ ರ್ಯಾಲಿಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಕಾಂಗ್ರೆಸ್, ಬಿಎಸ್ಪಿ,ಎಸ್ಪಿ ಪಕ್ಷಗಳ ವಿರುದ್ಧ ಟೀಕಾಪ್ರಹಾರ ನಡೆಸಿದರು. ಆದರೆ ಅಚ್ಚರಿಯೆಂದರೆ ರಾಮಮಂದಿರ ನಿರ್ಮಾಣದ ಕುರಿತಾಗಿ ಪ್ರಸ್ತಾಪಿದೆ ಮೋದಿ ಹಿಂದೆ ಸರಿದಿದ್ದಾರೆ.ತಮ್ಮ ಭಾಷಣದುದ್ದಕ್ಕೂ ಕಳೆದ ಐದು ವರ್ಷಗಳಲ್ಲಿ ತಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಪಟ್ಟಿ ಮಾಡಿದ ಮೋದಿ, ಪ್ರತಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆ 11 ಗಂಟೆಗೆ ಅಮೇಥಿಯ ಮೂಲಕ ಅಯೋಧ್ಯೆಗೆ ಆಗಮಿಸಲಿರುವ ಪ್ರಿಯಾಂಕಾ, ಕುಮಾರಂಗಂಜ್ ನಿಂದ ಹನುಮಾನ್ಗಡಿ ವರೆಗೆ 9 ಸ್ಥಳಗಳಲ್ಲಿ ಜನರೊಂದಿಗೆ ಚರ್ಚೆ ನಡೆಸಲಿದ್ದು, ಮೂರು ಸ್ಥಳಗಳಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಯೋಧ್ಯ ವಿವಾದದಲ್ಲಿ ಅರ್ಜಿದಾರರಲ್ಲಿ ಒಬ್ಬರಾಗಿರುವ ಹಿಂದೂ ಮಹಾಸಭಾ "ಸಾರ್ವಜನಿಕರು ಮಧ್ಯಸ್ಥಿಕೆಗೆ ಒಪ್ಪುವುದಿಲ್ಲ" ಎಂದು ವಾದಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಜಸ್ಟೀಸ್ ಬಾಬ್ಡೆ" ಇದು ವಿಫಲವಾಗಿದೆ ಎಂದು ನೀವು ಹೇಳುತ್ತಿದ್ದೀರಿ, ಎಲ್ಲವನ್ನು ಪೂರ್ವಾಗ್ರಹ ಪೀಡಿತರಾಗಿ ನೋಡಬೇಡಿ, ಮಧ್ಯಸ್ಥಿಕೆ ನಡೆಸಲು ನಾವು ಪ್ರಯತ್ನಿಸುತ್ತೇವೆ" ಎಂದರು.
ಪ್ರಯಾಗ್ರಾಜ್ ಕುಂಭಮೇಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡದ ಸಂಘ ಪರಿವಾರದ ಪ್ರಧಾನ ಕಾರ್ಯದರ್ಶಿ ಭಯ್ಯಾ ಜೀ ಜೋಶಿ, ಕೇಂದ್ರದ ಮೋದಿ ಸರ್ಕಾರವನ್ನುದ್ದೇಶಿಸಿ 2025 ರಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆಯೇ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
ಯಾರೂ ಕೂಡ ರಾಮನ ವಿರುದ್ಧ ಇಲ್ಲ. ಅಷ್ಟಕ್ಕೂ ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ, ವಿಶ್ವಕ್ಕೇ ದೇವರು. ಹಾಗಾಗಿ ಅಯೋಧ್ಯೆ ವಿಚಾರ ಶೀಘ್ರವಾಗಿ ಬಗೆಹರಿಯಬೇಕಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇವಲ ಕರ್ನಾಟಕದ ಮುಸ್ಲಿಮರಷ್ಟೇ ಅಲ್ಲ, ಇಡೀ ದೇಶಾದ್ಯಂತ ಯಾವ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಅಯೋಧ್ಯೆ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಬಿಜೆಪಿ ಸಂಸದ ಮತ್ತು ರಾಮ ಜನ್ಮಭೂಮಿ ನ್ಯಾಸ್ ನ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಶನಿವಾರದಂದು ರಾಮಮಂದಿರ ನಿರ್ಮಾಣ ಕಾರ್ಯದ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.