ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 66 ವಯಸ್ಸಾಗಿತ್ತು ಎನ್ನಲಾಗಿದೆ.ದೆಹಲಿ ಏಮ್ಸ್ ಆಸ್ಪತ್ರೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ಅರುಣ್ ಜೇಟ್ಲಿ ಮಧ್ಯಾಹ್ನ 12.07 ಕ್ಕೆ ನಿಧನರಾದರು ಎಂದು ತಿಳಿಸಿದೆ.
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು.
ಅಹಮದಾಬಾದ್ ನ ಶಾಪುರದ ಹಿಂದಿ ಶಾಲೆಯ ಮತಗಟ್ಟೆಯಲ್ಲಿ ಎಲ್.ಕೆ.ಅಡ್ವಾಣಿ ಮತಚಲಾಯಿಸಿದರೆ, ಎಸ್ ಜಿ ಹೈವೇಯಲ್ಲಿರುವ ಕಾಲೇಜೊಂದರಲ್ಲಿ ಸ್ಥಾಪಿತವಾದ ಮತಗಟ್ಟೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತಚಲಾಯಿಸಿದರು.
ಭಾರತಕ್ಕೆ ವಂಚಿಸಿದ ಯಾರೇ ಆಗಿರಲಿ ವಿಶ್ವದಲ್ಲಿ ಎಲ್ಲೇ ಅಡಗಿದ್ದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಾರತದ ರಾಜತಾಂತ್ರಿಕ ಶಕ್ತಿ ಮತ್ತು ಹೆಚ್ಚು ನಾಗರಿಕ ಅಂತರರಾಷ್ಟ್ರೀಯ ಕಾರ್ಯವಿಧಾನಗಳು ಅವರನ್ನು ಪತ್ತೆಹಚ್ಚುತ್ತವೆ ಎಂದು ಜೇಟ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದಾಗಿ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂಬುದನ್ನು ತಳ್ಳಿಹಾಕಿದ ಜೇಟ್ಲಿ, ಕೇವಲ ಒಬ್ಬರ ಮೇಲೆ ಚುನಾವಣೆ ಅವಲಂಬಿತವಾಗಿರುವುದಿಲ್ಲ ಎಂದು ಕುಟುಕಿದ್ದಾರೆ.
ಪ್ರಸಕ್ತ ಜಾಗತಿಕ ವಾಣಿಜ್ಯ ಯುದ್ಧವು ಆರಂಭಿಕ ಅಸ್ಥಿರತೆಯನ್ನು ಸೃಷ್ಟಿಸಬಹುದು ಆದರೆ ಮುಂಬರುವ ದಿನಗಳಲ್ಲಿ ಭಾರತಕ್ಕೆ ಉತ್ಪಾದನಾ ವಿಭಾಗದಲ್ಲಿ ಉತ್ತಮ ಅವಕಾಶ ದೊರೆಯಲಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ಹೇಳಿದ್ದಾರೆ.ಬಿಸಿನೆಸ್ ನಲ್ಲಿ ನೈತಿಕ ಮಾರ್ಗಗಳನ್ನು ತೆರಿಗೆ ನೀಡುವುದರ ಮೂಲಕ ಅಳವಡಿಸಿಕೊಳ್ಳಬೇಕೆಂದು ಅವರು ಆಗ್ರಹಿಸಿದರು.
ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹೊಸತನವನ್ನು ತರುವ ನಿಟ್ಟಿನಲ್ಲಿ ದೇಶದ ಪ್ರಮುಖ ಬ್ಯಾಂಕ್ ಗಳಾದ ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಗಳನ್ನು ವಿಲೀನಗೊಳಿಸಲಾಗುವುದು ಎಂದು ಸರಕಾರ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.