ಸೀತಾಪುರ-ಲಕ್ಷಿಮ್ಪುರ್ ರಸ್ತೆಯ ಬಡೆಲಿಯಾ ಗ್ರಾಮದ ಬಳಿ ಹಸುವಿಗೆ ಗುದ್ದಿ ಪಲ್ಟಿ ಹೊಡೆದ ಕಾರಣ ಕಾರಿನಲ್ಲಿದ್ದ 11 ಜನರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡಿದ್ದಾರೆ.
ಪ್ರಯಾಗ್ ರಾಜ್ ಮೇಳ ಪ್ರಾಧಿಕಾರ ಹಾಗೂ ಉತ್ತರ ಪ್ರದೇಶ ಸರ್ಕಾರದ ಸಹಯೋಗದೊಂದಿಗೆ ಕುಂಭಮೇಳದಲ್ಲಿ ಪಾಲ್ಗೊಂಡ ಉತ್ತರಪ್ರದೇಶ ಸಾರಿಗೆಯ 500 ಬಸ್ ಗಳ ಪೆರೇಡ್ ನಡೆಸಿ ಗಿನ್ನಿಸ್ ದಾಖಲೆ ನಿರ್ಮಿಸಿದೆ.
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ.ಗಳ ನಗದು ಹಣವನ್ನು ಈ ಯೋಜನೆಯಡಿ ವರ್ಗಾಯಿಸಲಾಗುತ್ತಿದ್ದು, ಮೂರು ಕಂತುಗಳಲ್ಲಿ 2,000 ರೂ.ಗಳಂತೆ ಈ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತದೆ.
ಉತ್ತರಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 37 ಮತ್ತು ಬಹುಜನ ಸಮಾಜ ಪಕ್ಷ 38 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎರಡೂ ಪಕ್ಷಗಳು ಒಮ್ಮತದ ನಿರ್ಧಾರ ಪ್ರಕಟಿಸಿವೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮತಿಯ ಉತ್ತರಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.