ತಮಿಳುನಾಡಿನ ವೆಲ್ಲೂರು ಸಂಸದೀಯ ಕ್ಷೇತ್ರದ ಲೋಕಸಭಾ ಚುನಾವಣೆಯನ್ನು ರದ್ದುಪಡಿಸಲು ಕೋರಿ ಚುನಾವಣಾ ಆಯೋಗವು ಎಪ್ರಿಲ್ 14 ರಂದು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಎಲೆಕ್ಟೋರಲ್ ಬಾಂಡ್ ಯೋಜನೆಯ ಕುರಿತಾಗಿ ಕೆಲವೊಂದು ಆಕ್ಷೇಪಗಳನ್ನು ವ್ಯಕ್ತಪಡಿಸಿ ಸರಕಾರೇತರ (ಎ.ಡಿ.ಆರ್.) ಸಂಘಟನೆಯಾದ 'ಪ್ರಜಾಪ್ರಭುತ್ವ ಸುಧಾರಣಾ ಸಂಘ' ಸುಪ್ರಿಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಭಾರತದ ಚುನಾವಣಾ ಆಯೋಗವು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ನಡೆಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ನರೇಂದ್ರ ಮೋದಿ ಅವರ 'ಮಿಷನ್ ಶಕ್ತಿ' ಘೋಷಣೆಯು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ತಮ್ಮ ಪಕ್ಷವನ್ನು ಉಲ್ಲೇಖಿಸಿಲ್ಲ ಅಥವಾ ತಮ್ಮ ಪರವಾಗಿ ಮತ ಚಲಾಯಿಸಲು ಸಹ ಮನವಿ ಮಾಡಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗವು ಬುಧವಾರ ಬಿಜೆಪಿ ಚುನಾವಣಾ ಸಮಿತಿಯ ಸದಸ್ಯನಿಗೆ ಸಾಮಾಜಿಕ ಮಾಧ್ಯಮದಲ್ಲಿ "ಮೈ ಭಿ ಚೌಕಿದಾರ್" ಎಂಬ ಶೀರ್ಷಿಕೆಯ ಆಡಿಯೋ-ದೃಶ್ಯ ಜಾಹೀರಾತುಗಳನ್ನು ಶೇರ್ ಮಾಡಿದ್ದಕ್ಕೆ ಈಗ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಸಮಿತಿಯ ನಿರ್ದೇಶನಗಳನ್ನು ಅನುಸರಿಸದೆ ಅದನ್ನು ಶೇರ್ ಮಾಡಿದ ಹಿನ್ನಲೆಯಲ್ಲಿ ಈಗ ಈ ನೋಟಿಸ್ ನೀಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿ ಇದ್ದ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿ ಪಡೆಯಬೇಕಾಗಿಲ್ಲ ಎಂದು ಚುನಾವಣಾಧಿಕಾರಿಗಳು ಸುದ್ದಿ ಮೂಲಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಎರಡನೇ ಹಂತದಲ್ಲಿ ತಮಿಳುನಾಡಿನ 39 ಸ್ಥಾನಗಳು, ಬಿಹಾರದ 40 ಸ್ಥಾನಗಳಲ್ಲಿ 5 ಸ್ಥಾನಗಳಿಗೆ, ಜಮ್ಮು ಕಾಶ್ಮೀರದ ಆರು, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಕರ್ನಾಟಕದ 28 ಸ್ಥಾನಗಳಲ್ಲಿ 14, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 10 ಮತ್ತು ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.