ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸುವ ಬಗ್ಗೆ ಪ್ರಸ್ತಾಪ ಮಂಡನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ವಿರೋಧ ಪಕ್ಷಗಳ ಸದಸ್ಯರಿಂದ ಗದ್ದಲ, ಕೋಲಾಹಲ.
ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಜಮ್ಮು ಮತ್ತು ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಊಹಿಸಲಾಗಿದೆ. ವಿಶೇಷವಾಗಿ ರಾಂಬನ್ ಮತ್ತು ಬನಿಹಾಲ್ ನಡುವಿನ ಪ್ರದೇಶದ ಭೂಕುಸಿತಕ್ಕೆ ಹೆಚ್ಚು ಗುರಿಯಾಗಬಹುದು ಎನ್ನಲಾಗಿದೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೆ.ಪಿ ರಸ್ತೆಯಲ್ಲಿ ಬುಧುವಾರ ಸಂಜೆ ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸೈನಿಕರು ಮೃತಪಟ್ಟಿದ್ದಾರೆ .ಜಮ್ಮು ಮತ್ತು ಕಾಶ್ಮೀರ ಸ್ಟೇಶನ್ ಹೌಸ್ ಆಫೀಸರ್ (ಎಸ್ಒಒ), ಸಿಆರ್ಪಿಎಫ್ ಜವಾನ್ ಮತ್ತು ಸ್ಥಳೀಯ ಮಹಿಳೆ ಸೇರಿದಂತೆ ಮೂವರು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನ ಕಾಜ್ವಾನ್ ಅರಣ್ಯ ಪ್ರದೇಶ ಖುಂಡ್ರು ಬಳಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದಾರೆ. ಆದರೆ ಇದುವರೆಗೂ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಂಡಿಲ್ಲವೆನ್ನಲಾಗಿದೆ. ಈ ಪ್ರದೇಶದಲ್ಲಿ ಇನ್ನು ಅಧಿಕ ಉಗ್ರರು ಸೇರೆ ಸಿಕ್ಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಬನಿಹಾಲ್ನಲ್ಲಿ ಸ್ಫೋಟವಾಗಿರುವ ಘಟನೆ ವರದಿಯಾಗಿದೆ.ಜವಾಹರ್ ಸುರಂಗದಾದ್ಯಂತ ಬನಿಹಾಲ್ ಸಮೀಪದ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸ್ಯಾಂಟ್ರೋ ಕಾರಿನಲ್ಲಿ ರಹಸ್ಯ ಸ್ಫೋಟ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.