ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿಯ ಟ್ರಕ್ ಮಾಲೀಕರಿಗೆ ಗುರುವಾರ 2,00,500 ರೂ. ದಂಡ ವಿಧಿಸಲಾಗಿದೆ. ದೆಹಲಿ ಟ್ರಾಫಿಕ್ ಪೊಲೀಸರು ಟ್ರಕ್ ಮಾಲೀಕರಿಗೆ ಈ ದಂಡವನ್ನು ವಿಧಿಸಿದ್ದು, ಅದನ್ನು ಅವರು ರೋಹಿಣಿ ನ್ಯಾಯಾಲಯದಲ್ಲಿ ಪಾವತಿಸಬೇಕಾಗಿದೆ. ಇದಕ್ಕೂ ಮುನ್ನ ಎಲ್ಲಾ ಮಾನ್ಯ ದಾಖಲೆಗಳನ್ನು ಹಾಜರುಪಡಿಸಿದರೆ ದಂಡವನ್ನು ಕಡಿಮೆ ಮಾಡಬಹುದು.
ಸಂಚಾರ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಿದ ಬಗ್ಗೆ ಕೋಪಗೊಂಡ ವ್ಯಕ್ತಿಯೊಬ್ಬರು ದೆಹಲಿಯ ಶೇಖ್ ಸರಾಯ್ ಹಂತ 1(Sheikh Sarai Phase 1) ರಲ್ಲಿ ಗುರುವಾರ ತಮ್ಮದೇ ಬೈಕ್ಗೆ ಬೆಂಕಿ ಹಚ್ಚಿದ್ದಾರೆ.
ರಸ್ತೆ ಅಪಘಾತಗಳಿಂದ ಉಂಟಾಗುವ ಅಪಾಯಗಳನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಹೊಸ ಮೋಟಾರು ವಾಹನ ಕಾಯ್ದೆ 2019(Motor Vehicles Act 2019) ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ.
ಕಳೆದ ನಾಲ್ಕು ದಿನಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ, ಡಿ.ಕೆ.ಶಿವಕುಮಾರ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿಯಲ್ಲಿ 200 ಯೂನಿಟ್ ವರೆಗಿನ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಘೋಷಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಮತ್ತೊಂದು ಉಡುಗೊರೆಯನ್ನು ನೀಡಿದ್ದಾರೆ. ಈ ಬಾರಿ ಕೇಜ್ರಿವಾಲ್ ನೀರಿನ ಬಿಲ್ ಬಾಕಿಯನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದರು.
ಅಜಯ್ ಮಾಕೆನ್ ತಮ್ಮ ಟ್ವೀಟ್ನಲ್ಲಿ, ರಾಜ್ಯ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದಾಗಿನಿಂದ, ದೆಹಲಿಯ ರಾಜಕೀಯದೊಂದಿಗೆ ನನಗೆ ನೇರ ಸಂಪರ್ಕವಿಲ್ಲ ಆದರೆ ಜವಾಬ್ದಾರಿಯುತ ಪ್ರಜೆಯಾಗಿ, ನಾನು ನಿಮ್ಮನ್ನು ಸತ್ಯಕ್ಕೆ ಪರಿಚಯಿಸಲು ಬಯಸುತ್ತೇನೆ ಎಂದು ಬರೆದಿದ್ದಾರೆ.
ದಕ್ಷಿಣ ಆಫ್ರಿಕಾದ ಪಾಸ್ಪೋರ್ಟ್ನಲ್ಲಿ ಪ್ರಯಾಣಿಸುತ್ತಿದ್ದ ಈ ಮಹಿಳೆಯ ಬಳಿ ಸುಮಾರು 4900 ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಅವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಯಮುನಾ ದಡದ ಬಳಿ ವಾಸಿಸುವ ಅಥವಾ ಕೆಲಸ ಮಾಡುವ ಜನರಿಗೆ ಅಲರ್ಟ್ ಆಗಿ ಇರುವಂತೆ ತಿಳಿಸಲಾಗಿದೆ. ಏಕೆಂದರೆ ಭಾರೀ ಮಳೆ ಮತ್ತು ಹಟ್ನಿ ಕುಂಡ್ ಬ್ಯಾರೇಜ್ನಿಂದ ನೀರು ಬಿಡುಗಡೆಯಾಗುವುದರಿಂದ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಹಿಂದಿನ ಶುಲ್ಕಕ್ಕೆ ಹೋಲಿಸಿದರೆ ಈಗ ಆಟೋ ನೋಂದಣಿ ಶುಲ್ಕವನ್ನು ಅರ್ಧಕ್ಕಿಂತಲೂ ಕಡಿಮೆ ಮಾಡಲಾಗಿದೆ. ಈ ಮೊದಲು ಆಟೋ ನೋಂದಣಿಗಾಗಿ ಚಾಲಕರು 1000 ರೂಪಾಯಿಗಳನ್ನು ಪಾವತಿಸಬೇಕಾಗಿತ್ತು, ಆದರೆ ಈಗ ಈ ಮೊತ್ತವನ್ನು ಕೇವಲ 300 ರೂಪಾಯಿಗೆ ಇಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.