ನವದೆಹಲಿ: ಪಶ್ಚಿಮ ಬಂಗಾಳದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಸಾಕಷ್ಟು ಅಭ್ಯರ್ಥಿಗಳಿಲ್ಲ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ ಶುಕ್ರವಾರದಂದು ಹೇಳಿದರು.
"ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತುಂಬಾ ಶ್ರಮವಹಿಸಿ ಕೆಲಸ ಮಾಡುತ್ತಿದ್ದೇವೆ.ಪಂಚಾಯತ್ ಮತ್ತು ವಿಧಾನಸಭೆ ಚುನಾವಣೆಯಲ್ಲಿ ನಾವು ಟಿಕೆಟ್ಗಳನ್ನು ನೀಡಿದ್ದೆವು.ಆದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾವು ಸಾಕಷ್ಟು ಅಭ್ಯರ್ಥಿಗಳನ್ನು ಹೊಂದಿಲ್ಲ," ಎಂದು ಘೋಷ್ ಹೇಳಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರದಂದು 42 ಲೋಕಸಭಾ ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದಾರೆ. ವಿಶೇಷವೆಂದರೆ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ನೀಡುವ ಕಾಯ್ದೆ ಇನ್ನು ಕೂಡ ಜಾರಿಗೆ ಬಂದಿಲ್ಲ, ಅದಕ್ಕೂ ಮುನ್ನವೇ ಈಗ ಮಮತಾ ಈಗ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಮುಂದಾಗಿದ್ದಾರೆ.
1986ರ ಬ್ಯಾಚ್ನ ಐಪಿಎಸ್ ಅಧಿಕಾರಿ ಗೌರವ್ ದತ್ ಅವರನ್ನು ಮಮತಾ ಬ್ಯಾನರ್ಜಿ ಸರ್ಕಾರ ಅಮಾನತುಗೊಳಿಸಿ ಆದೇಶ ನೀಡಿತ್ತು. ಇದರಿಂದಾಗಿ ನನ್ನ ಸಾವಿಗೆ ಮಮತಾ ಬ್ಯಾನರ್ಜಿ ಅವರೇ ಕಾರಣ ಎಂದು ಆತ್ಮಹತ್ಯೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಕೊಲ್ಕತ್ತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಬಂದ ಸಿಬಿಐ ಅಧಿಕಾರಗಳನ್ನೇ ಕೊಲ್ಕತ್ತಾ ಪೊಲೀಸರು ವಶಕ್ಕೆ ಪಡೆದುಕೊಂಡ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದಿದೆ.
ಮಥುವಾ ಸಮುದಾಯದ ಜನರು ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ್ದು ಅವರು ಪ್ರಧಾನಿ ಬಂಗಾಲಿಯಲ್ಲಿ ಭಾಷಣ ಆರಂಭಿಸುತ್ತಿದ್ದಂತೆಯೇ ಭಾರೀ ಕರತಾಡನಗೈದು ಮುಗಿಲುಮುಟ್ಟುವ ರೀತಿಯಲ್ಲಿ ಅಭಿನಂದನೆ ಸೂಚಿಸಿದರು.
ಮಮತಾ ಬ್ಯಾನರ್ಜಿಯವರು ಪ್ರಧಾನಿಯಾದರೆ ಎಂದು ಮಾತು ಆರಂಭಿಸಿ ಮುಂದಿನ ಹೇಳಿಕೆ ನೀಡಿದ್ದೆ ಅಷ್ಟೇ. ಆದರೆ, ಮಮತಾ ಪ್ರಧಾನಿಯಾಗುವ ಸಾಧ್ಯತೆಯೇ ಇಲ್ಲ. ಇದನ್ನೆಲ್ಲಾ ಹಾಸ್ಯವಾಗಿ ಪರಿಗಣಿಸಬೇಕು ಎಂದು ದಿಲೀಪ್ ಘೋಷ್ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಮೊದಲ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಆಯ್ಕೆಯಾಗಿದ್ದರು. ಈಗ ಪ್ರಧಾನ ಮಂತ್ರಿ ಸರದಿ... ಹಾಗಾಗಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆ ಇದೆ" ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
'ಏಕ್ ದಿನ್ ಅಚಾನಕ್', 'ಪದಾತಿಕ್', 'ಮೃಗಯಾ', 'ರಾತ್ಭೋರ್'ನಂತಹ ಪ್ರಸಿದ್ಧ ಚಿತ್ರಗಳನ್ನು ನೀಡಿದ್ದ ಸೇನ್ ಅವರಿಗೆ 2003 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆಗೆ ಕೊಲ್ಕತ್ತಾ ಹೈಕೋರ್ಟ್ ಅನುಮತಿ ನೀಡದ ಕಾರಣ, ಅನುಮತಿ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ಅರ್ಜಿಯ ಶೀಘ್ರ ವಿಚಾರಣೆ ಮಾಡುವಂತೆ ಬಿಜೆಪಿ ಮನವಿ ಮಾಡಿತ್ತು.
ರಥಯಾತ್ರೆಗೆ ಅನುಮತಿ ನೀಡಿದ್ದ ಕಲ್ಕತ್ತಾ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.